ದಾರಿಗಾಗಿ ಕೆಎಸ್ಆರ್‌ಟಿಸಿ ಚಾಲಕನ ಮೇಲೆ ಹಲ್ಲೆ: ಆಟೋ ಚಾಲಕ ಸೇರಿ ಮೂವರ ಬಂಧನ: ಮತ್ತೋರ್ವ ಆರೋಪಿಯ ಪತ್ತೆಗೆ ಬಲೆ ಬೀಸಿರುವ ಪೊಲೀಸ್ ಇಲಾಖೆ: ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ

ಆಟೋಗೆ ದಾರಿ ಬಿಡಲಿಲ್ಲವೆಂದು ಕ್ಷುಲ್ಲಕ ಕಾರಣಕ್ಕೆ ಕೆಎಸ್ಆರ್‌ಟಿಸಿ ಚಾಲಕ ಹಾಗೂ ನಿರ್ವಾಹಕನ ಮೇಲೆ ಆಟೋ ಚಾಲಕ ಸೇರಿದಂತೆ ನಾಲ್ವರು ಮನಸೋಇಚ್ಚೆ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ಮಾಡೇಶ್ವರ ಗ್ರಾಮದ ಬಳಿ ನಡೆದಿದೆ.

ಮಂಗಳವಾರ ಸಂಜೆ ವೇಳೆ ಮಾಡೇಶ್ವರ ಗ್ರಾಮದ ಬಳಿಯಲ್ಲಿನ ಕಿತ್ತೂರು ರಾಣಿ ವಸತಿ ಶಾಲೆ ಸಮೀಪ ಆಟೋಗೆ ದಾರಿ ನೀಡಲಿಲ್ಲವೆಂಬ ಕಾರಣಕ್ಕೆ ಕೆಎಸ್ಆರ್‌ಟಿಸಿ ಬಸ್ ಅಡ್ಡಗಟ್ಟಿದ ನಾಲ್ವರು, ಬಸ್ ಹತ್ತಿ ಚಾಲಕ ಪ್ರಸನ್ನ ಅವರನ್ನು ನಿಂದಿಸಿ ತೀವ್ರವಾಗಿ ಥಳಿಸಿದ್ದಾರೆ.

ತೀವ್ರವಾಗಿ ಗಾಯಗೊಂಡ ಚಾಲಕ ಪ್ರಸನ್ನ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿಲಾಗಿದೆ. ಈ ಕುರಿತು ದೊಡ್ಡಬೆಳವಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ದೂರು ದಾಖಲಿಸಿಕೊಂಡ ಇನ್ಸ್‌ಪೆಕ್ಟರ್ ಹರೀಶ್ ನೇತೃತ್ವದ ಪೊಲೀಸರು, ಗಲಿಬಿಲಿಕೋಟೆ ಗ್ರಾಮದ ಗೋವಿಂದರಾಜು, ಹನುಮಂತರಾಜು, ನರಸಿಂಹರಾಜು ಎಂಬುವರನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಅಲ್ಲದೆ ತಲೆ ಮರೆಸಿಕೊಂಡಿರುವ ಮತ್ತೋರ್ವ ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆಂದು ತಿಳಿದು ಬಂದಿದೆ.

ಮಾಡೇಶ್ವರಕ್ಕೆ ಬಸ್ ಸ್ಥಗಿತ:

ಚಾಲಕ, ನಿರ್ವಾಹಕನ ಮೇಲೆ ಹಲ್ಲೆಯ ಘಟನೆಯಿಂದಾಗಿ ಮಾಡೇಶ್ವರ ಗ್ರಾಮಕ್ಕೆ ಕೆಎಸ್ಆರ್‌ಟಿಸಿ ಬಸ್ ಎಂದಿನಂತೆ ಹೋಗಿಲ್ಲ. ಇದರಿಂದ ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಅನಾನುಕೂಲವಾಗಿದೆ.

Ramesh Babu

Journalist

Recent Posts

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

5 minutes ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

2 hours ago

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

7 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

11 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

1 day ago

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

1 day ago