ಜಿಲ್ಲಾ ಪೊಲೀಸ್ ವತಿಯಿಂದ ಭರ್ಜರಿ ಬೇಟೆ…..ನ್ಯಾಮತಿ ಬ್ಯಾಂಕ್ ಕಳ್ಳತನದ 06 ಆರೋಪಿತರನ್ನು ಬಂಧಿಸಿ, ಸುಮಾರು 15.30 ಕೋಟಿ ಮೌಲ್ಯದ 17.1 ಕೆಜಿ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡಿರುವ ಬಗ್ಗೆ ಡಾ. ರವಿಕಾಂತೇಗೌಡ & SP ಉಮಾ ಪ್ರಶಾಂತ್ ಮಾಹಿತಿ ನೀಡಿದರು.
ಪ್ರಮುಖ ಆರೋಪಿಗಳಾದ ತಮಿಳುನಾಡು ಮೂಲದ ಸಹೋದರರಾದ ಅಜಯ್ ಹಾಗೂ ವಿಜಯ್ ಸೇರಿದಂತೆ ಒಟ್ಟು ಆರು ಆರೋಪಿಗಳನ್ನು ಬಂಧಿಸಿ ಚಿನ್ನಾಭರಣ ವಶಕ್ಕೆ ಪಡೆದುಕೊಳ್ಳಲಾಗಿದೆ.
ಈ ಬಗ್ಗೆ ಪೂರ್ವ ವಲಯ ಐಜಿಪಿ ಡಾ.B.R.ರವಿಕಾಂತೇಗೌಡ ಮಾಹಿತಿ ನೀಡಿದ್ದಾರೆ. 2024ರ ಅಕ್ಟೋಬರ್ 28ರಂದು ನ್ಯಾಮತಿ ಎಸ್‍ಬಿಐ ಬ್ಯಾಂಕ್ನಲ್ಲಿ 15.30 ಕೋಟಿ ರೂ. ಮೌಲ್ಯದ 17.1 ಕೆಜಿ ಚಿನ್ನಾಭರಣ ಕದ್ದು ಪರಾರಿಯಾಗಿದ್ದರು. ಆರೋಪಿಗಳಿ ದರೋಡೆಗೆ ಮೊದಲು, ದರೋಡೆಯ ನಂತರ ದರೋಡೆಕೋರರು ಗಡಿ ಚೌಡಮ್ಮನ ಅಷ್ಟಧಿಗ್ಬಂಧನ ಪೂಜೆ ಮಾಡಿದ್ದರು. ಅಲ್ಲದೇ ದರೋಡೆಯ ಮಾಹಿತಿಯನ್ನು ಕುಟುಂಬಸ್ಥರ ಜೊತೆಯೂ ಹಂಚಿಕೊಂಡಿರಲಿಲ್ಲ. ಪೊಲೀಸರು ಆರೋಪಿಗಳನ್ನು ಟೆಕ್ನಿಕಲ್ ಎವಿಡೆನ್ಸ್ ಮೂಲಕ ಬಂಧಿಸಿದ್ದಾರೆ.