ದಾವಣಗೆರೆ ಜಿಲ್ಲಾ ಪೊಲೀಸ್ ಭರ್ಜರಿ ಬೇಟೆ: ಸುಮಾರು 15.30 ಕೋಟಿ ಮೌಲ್ಯದ 17.1 ಕೆಜಿ ಬಂಗಾರದ ಆಭರಣಗಳ ವಶ

ಜಿಲ್ಲಾ ಪೊಲೀಸ್ ವತಿಯಿಂದ ಭರ್ಜರಿ ಬೇಟೆ…..ನ್ಯಾಮತಿ ಬ್ಯಾಂಕ್ ಕಳ್ಳತನದ 06 ಆರೋಪಿತರನ್ನು ಬಂಧಿಸಿ, ಸುಮಾರು 15.30 ಕೋಟಿ ಮೌಲ್ಯದ 17.1 ಕೆಜಿ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡಿರುವ ಬಗ್ಗೆ  ಡಾ. ರವಿಕಾಂತೇಗೌಡ & SP ಉಮಾ ಪ್ರಶಾಂತ್ ಮಾಹಿತಿ ನೀಡಿದರು‌.

ಪ್ರಮುಖ ಆರೋಪಿಗಳಾದ ತಮಿಳುನಾಡು ಮೂಲದ ಸಹೋದರರಾದ ಅಜಯ್​ ಹಾಗೂ ವಿಜಯ್ ಸೇರಿದಂತೆ ಒಟ್ಟು ಆರು ಆರೋಪಿಗಳನ್ನು ಬಂಧಿಸಿ ಚಿನ್ನಾಭರಣ ವಶಕ್ಕೆ ಪಡೆದುಕೊಳ್ಳಲಾಗಿದೆ.

ಈ ಬಗ್ಗೆ ಪೂರ್ವ ವಲಯ ಐಜಿಪಿ ಡಾ.B.R.ರವಿಕಾಂತೇಗೌಡ ಮಾಹಿತಿ ನೀಡಿದ್ದಾರೆ. 2024ರ ಅಕ್ಟೋಬರ್ 28ರಂದು ನ್ಯಾಮತಿ ಎಸ್‍ಬಿಐ ಬ್ಯಾಂಕ್​ನಲ್ಲಿ 15.30 ಕೋಟಿ ರೂ. ಮೌಲ್ಯದ 17.1 ಕೆಜಿ ಚಿನ್ನಾಭರಣ ಕದ್ದು ಪರಾರಿಯಾಗಿದ್ದರು. ಆರೋಪಿಗಳಿ ದರೋಡೆಗೆ ಮೊದಲು, ದರೋಡೆಯ ನಂತರ ದರೋಡೆಕೋರರು ಗಡಿ ಚೌಡಮ್ಮನ ಅಷ್ಟಧಿಗ್ಬಂಧನ ಪೂಜೆ ಮಾಡಿದ್ದರು. ಅಲ್ಲದೇ ದರೋಡೆಯ ಮಾಹಿತಿಯನ್ನು ಕುಟುಂಬಸ್ಥರ ಜೊತೆಯೂ ಹಂಚಿಕೊಂಡಿರಲಿಲ್ಲ. ಪೊಲೀಸರು ಆರೋಪಿಗಳನ್ನು ಟೆಕ್ನಿಕಲ್ ಎವಿಡೆನ್ಸ್ ಮೂಲಕ ಬಂಧಿಸಿದ್ದಾರೆ.

Ramesh Babu

Journalist

Recent Posts

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

1 hour ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

3 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

7 hours ago

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…

8 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

10 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

10 hours ago