ದಿಚಕ್ರ ವಾಹನ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

ದಿಚಕ್ರ ವಾಹನಕ್ಕೆ ಅಪಘಾತವಾದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಸಮೀಪ ನಡೆದಿದೆ.

ಗೌರಿಬಿದನೂರು ತಾಲೂಕಿನ ತೊಂಡೆಬಾವಿ ಹೋಬಳಿಯ ಚಿಕ್ಕಹೊಸಹಳ್ಳಿ ಗ್ರಾಮದ ಹರೀಶ್(26)‌ಮೃತ ದುರ್ದೈವಿ.

ಬಾಶೆಟ್ಟಿಹಳ್ಳಿಯ ಕಾರ್ಖಾನೆಯೊಂದರಲ್ಲಿ ನೈಟ್ ಶಿಫ್ಟ್ ಕೆಲಸ ಮುಗಿಸಿಕೊಂಡು ಮನೆ‌ಕಡೆ ತೆರಳುವಾಗ ಸವಾರನ ನಿಯಂತ್ರಣ ತಪ್ಪಿದ ಬೈಕ್ ಹೆದ್ದಾರಿ ಬದಿಯ ಗುಂಡಿಯೊಳಗೆ ಬಿದ್ದಿದೆ. ಈ ಹಿನ್ನೆಲೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…

Leave a Reply

Your email address will not be published. Required fields are marked *

error: Content is protected !!