
ನೈರುತ್ಯ ಬಂಗಾಳಕೊಲ್ಲಿಯಲ್ಲಿ ಮತ್ತು ಶ್ರೀಲಂಕಾ ಕರಾವಳಿ ಭಾಗದಲ್ಲಿ ದಿತ್ವಾ ಚಂಡಮಾರುತ ಎಫೆಕ್ಟ್‌ನಿಂದ ರಾಜ್ಯದಲ್ಲಿ ಚಳಿಯ ಪ್ರಮಾಣ ಹೆಚ್ಚಾಗುತ್ತಿದೆ. ತಂಗಾಳಿಯ ವೇಗ ಘಂಟೆಗೆ 20 ಕಿ.ಮೀ ತಲುಪುವ ಸಾಧ್ಯತೆಯಿದೆ. ಮುಂದಿನ ಎರಡ್ಮೂರು ದಿನಗಳು ಬೆಂಗಳೂರು ಸೇರಿದಂತೆ ಹಲವು ಕಡೆ ಮೋಡ ಕವಿದ ವಾತವರಣ ಇರಲಿದ್ದು, ರಾಜ್ಯದ ಕೆಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಇನ್ನು ಕಳೆದ ವರ್ಷಕ್ಕಿಂತ ಈ ವರ್ಷ ಶೀತಗಾಳಿ ತೀವ್ರವಾಗುತ್ತಿದ್ದು, ಬೆಂಗಳೂರಿನಲ್ಲಿ ತಾಪಮಾನವು 12 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುವ ನಿರೀಕ್ಷೆಯಿದೆ. ಶನಿವಾರ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಇಂದು 18 ಡಿಗ್ರಿ ಸೆಲ್ಸಿಯಸ್ ಇದ್ದು, ಮುಂದಿನ ಎರಡ್ಮೂರು ದಿನಗಳಲ್ಲಿ ಚಳಿಯ ಪ್ರಮಾಣ ಹೆಚ್ಚಾಗಬಹುದೆಂದು ಭಾರತೀಯ ಹವಾಮಾನ ಇಲಾಖೆಯ ವಿಜ್ಞಾನಿಗಳು ತಿಳಿಸಿದ್ದಾರೆ.

2026ರ ಜನವರಿಯಲ್ಲಿ ಶೀತಗಾಳಿ ಉತ್ತುಂಗಕ್ಕೇರುವ ನಿರೀಕ್ಷೆಯಿದ್ದು, ಮಕ್ಕಳು, ಹಿರಿಯರು, ಗರ್ಭಿಣಿಯರು ಅಗತ್ಯ ಮುನ್ನೆಚ್ಚರಿಕೆಗಳಿಂದ ಇರುವ ಅನಿವಾರ್ಯತೆಯಿದೆ. ಜನ ಆರೋಗ್ಯದ ಕಡೆ ವಿಶೇಷ ಕಾಳಜಿ ವಹಿಸೋದು ಅತ್ಯಅಗತ್ಯ…