ತಾಲೂಕಿನಲ್ಲಿ ಹಾದುಹೋಗುವ ವಿವಿಧ ಹೆದ್ದಾರಿಗಳಲ್ಲಿ ಬೈಕ್ ವ್ಹೀಲಿಂಗ್ ಪುಂಡರ ಹಾವಳಿ ದಿನೇದಿನೇ ಹೆಚ್ಚುತ್ತಿರುವ ಹಿನ್ನೆಲೆ ವಾಹನ ಸವಾರರು ಅಪಘಾತ ಭಯದಲ್ಲಿ ಸಾಗಬೇಕಾದ ಅನಿವಾರ್ಯತೆ ಎದುರಾಗಿದೆ.
ವೀಕೆಂಡ್ನಲ್ಲಿ ಪ್ರಮುಖ ಹೆದ್ದಾರಿಗಳಲ್ಲಿ ಪುಂಡರು ನಂದಿ ಬೆಟ್ಟ- ದೊಡ್ಡಬಳ್ಳಾಪುರ, ಹೊಸಕೋಟೆ- ದೊಡ್ಡಬಳ್ಳಾಪುರ ರಸ್ತೆ, ದೊಡ್ಡಬಳ್ಳಾಪುರ – ಹಿಂದೂಪುರ ಹೆದ್ದಾರಿ ಯುದ್ದಕ್ಕೂ ಬೈಕ್ ವೀಲಿಂಗ್ ಮಾಡುತ್ತಾ ವಿಡಿಯೋ ಮಾಡುತ್ತಿರುವುದರಿಂದ ಇತರೆ ವಾಹನ ಸವಾರರಿಗೆ ಕಿರಿಕಿರಿ ಉಂಟಾಗುತ್ತಿದೆ.
ಹೆದ್ದಾರಿಯಲ್ಲಿ ಡೆಡ್ಲಿ ವ್ಹೀಲಿಂಗ್ ಮಾಡುತ್ತಾ ಹುಚ್ಚಾಟ ಮೆರೆಯುತ್ತಿದ್ದಾರೆ. ಹಿಂಬದಿಯಲ್ಲಿ ಯುವಕ ಯುವತಿಯರನ್ನ ಕೂರಿಸಿಕೊಂಡು ಅಪಾಯಕ್ಕೆ ಆಹ್ವಾನ ನೀಡುತ್ತಿದ್ದಾರೆ.
ಕೆಲ ಹೆದ್ದಾರಿಗಳಲ್ಲಿ ಹೈಟೆಕ್ ಕ್ಯಾಮರಾಗಳಿದ್ದರೂ ಪೊಲೀಸರ ಭಯವಿಲ್ಲದೆ ಡೆಡ್ಲಿ ವ್ಹೀಲಿಂಗ್ ಮಾಡುತ್ತಿದ್ದಾರೆ. ಹೊಸಕೋಟೆ- ದೊಡ್ಡಬಳ್ಳಾಪುರ. ನಡುವಿನ ಹೆದ್ದಾರಿಯಲ್ಲಿ ಪುಂಡರ ವೀಲಿಂಗ್ ಹುಚ್ಚಾಟದ ದೃಶ್ಯ ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿದೆ.
ಇನ್ನೂ ಈ ಪುಂಡರ ಬಂಧನಕ್ಕೆ ಪೊಲೀಸರು ಮುಂದಾದರು ವೇಗವಾಗಿ ವಾಹನಗಳಲ್ಲಿ ಪರಾರಿಯಾಗಿ ತಪ್ಪಿಸಿಕೊಳ್ಳುತ್ತಿದ್ದಾರೆ.
ವ್ಹೀಲಿಂಗ್ ಮಾಡಲು ಬಳಸುವ ಬಹುತೇಕ ವಾಹನಗಳಿಗೆ ನಂಬರ್ ಪ್ಲೇಟ್ ಇರದೇ ಇರುವುದು ಪುಂಡರ ಬಂಧಿಸಲು ಪೊಲೀಸರನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದೆ. ಒಂದು ವೇಳೆ ಪುಂಡರ ಬೆನ್ನತ್ತಿ ಪ್ರಾಣ ಒತ್ತೆಯನ್ನಿಟ್ಟು ಹಿಡಿದರು… ಕೆಲ ಪುಡಾರಿಗಳು ಪುಂಡರನ್ನು ಬಿಡುವಂತೆ ಒತ್ತಡ ಹೇರುತ್ತಾರೆ ಎಂಬ ಬೇಸರ ಪೊಲೀಸರದ್ದಾಗಿದೆ.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…