ದಿಶಾ ಸಮಿತಿ ಸಭೆ: ಆಯುಷ್ಮಾನ್ ಕಾರ್ಡ್ ಹೊಂದಿದ ಪ್ರತಿಯೊಬ್ಬರಿಗೂ 5 ಲಕ್ಷದವರೆಗೆ ಉಚಿತ ಚಿಕಿತ್ಸೆ- ಸಂಸದ ಡಾ.ಕೆ ಸುಧಾಕರ್

ಆಯುಷ್ಮಾನ್ ಕಾರ್ಡ್ ಹೊಂದಿದ ಪ್ರತಿಯೊಬ್ಬರಿಗೂ 5 ಲಕ್ಷ ವರೆಗಿನ ಉಚಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ದೊರಕಲಿದ್ದು, ಈ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಿ ಎಂದು ಅಧಿಕಾರಿಗಳಿಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಕೆ. ಸುಧಾಕರ್ ಅವರು ಹೇಳಿದರು.

ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆದ ಎರಡನೇ ತ್ರೈಮಾಸಿಕ ದಿಶಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರವು ದೇಶದ ಅಭಿವೃದ್ಧಿಗೆ ಹಲವು ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೆ ತಂದಿದೆ. ರೈತರ, ಹಿಂದುಳಿದವರ, ಬಡವರಪರ ಹಲವು ಜನಪ್ರಿಯ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ.

ಆಯುಷ್ಮಾನ್ ಭಾರತ್ ಯೋಜನೆ ಜಾರಿಗೆ ತಂದು ಜನಸಾಮಾನ್ಯರಿಗೆ 5 ಲಕ್ಷದವರೆಗಿನ ಉಚಿತ ವೈದ್ಯಕೀಯ ಸೌಲಭ್ಯ ಕಲ್ಪಿಸಲಾಗುತ್ತಿದೆ. ಜನಸಾಮಾನ್ಯರ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲೆಯ ಪ್ರತಿಯೊಬ್ಬರು ಆಯುಷ್ಮಾನ್ ಕಾರ್ಡ್ ಮಾಡಿಸಿಕೊಳ್ಳುವಂತೆ ಅರಿವು ಮೂಡಿಸಿ ಎಂದರು.

*ಬೆಳೆ ವಿಮೆ ನೋಂದಣಿ ಹೆಚ್ಚಿಸಿ*

ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಕಳೆದ ಸಾಲಿನಲ್ಲಿ ಜಿಲ್ಲೆಯಲ್ಲಿ 4885 ರೈತರು ನೋಂದಣಿ ಯಾಗಿದ್ದಾರೆ. ಜಿಲ್ಲೆಯ ರೈತರು ತೋಟಗಾರಿಕೆ ಹಾಗೂ ಕೃಷಿ ವಾಣಿಜ್ಯ ಬೆಳೆಗಳನ್ನು ಹೆಚ್ಚು ಬೆಳೆಯುತ್ತಾರೆ. ಒಮ್ಮೆ ನಷ್ಟವಾದರೆ ರೈತರಿಗೆ ಬಹಳ ತೊಂದರೆ ಆಗುತ್ತದೆ. ಈ ಹಿನ್ನೆಲೆಯಲ್ಲಿ ಬೆಳೆ ವಿಮೆ ಮಾಡಿಸುವುದರಿಂದ ಆಗುವಂತಹ ಅನುಕೂಲಗಳ ಬಗ್ಗೆ ವ್ಯಾಪಕ ಪ್ರಚಾರ ಕೈಗೊಂಡು ರೈತರಿಗೆ ಅರಿವು ಮೂಡಿಸಿ ಈ ವರ್ಷ ನೋಂದಣಿ ಹೆಚ್ಚಿಸಿ ಎಂದರು.

*29 ರೂ. ಗಳಿಗೆ ಭಾರತ್ ಅಕ್ಕಿ*

ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಒಳ್ಳೆಯ ಗುಣಮಟ್ಟದ ಅಕ್ಕಿಯನ್ನು ಕೇಂದ್ರ ಸರ್ಕಾರ ಪೂರೈಸುತ್ತಿದ್ದು ಒಂದು ಕೆ.ಜಿ ಅಕ್ಕಿಗೆ 29 ರೂಪಾಯಿಗಳು ಮಾತ್ರ. ಸಾರ್ವಜನಿಕರಿಗೆ ಇದರ ಬಗ್ಗೆ ಅರಿವು ಮೂಡಿಸಿ ಎಂದರು.

ಗ್ಯಾಸ್ ಸಂಪರ್ಕ ಹೊಂದಿಲ್ಲದ 3098 ಕುಟುಂಬಗಳ ಜಿಲ್ಲೆಯಲ್ಲಿದ್ದು ಅಂತವರಿಗೆ ಉಜ್ವಲ ಯೋಜನೆಯಡಿ ಗ್ಯಾಸ್ ಸಂಪರ್ಕ ಕಲ್ಪಿಸಲು ಕ್ರಮ ವಹಿಸಿ.

ಒಂದು ದೇಶ ಒಂದು ಪಡಿತರ ಯೋಜನೆ ಜಾರಿಯಾಗಿ ದೇಶದ ಜನರು ದೇಶದ ಯಾವುದೇ ಪಡಿತರ ಅಂಗಡಿಯಲ್ಲಿ ಬೇಕಾದರೂ ಪಡಿತರ ಪಡೆಯಬಹುದಾದ ಸೌಲಭ್ಯವಿದೆ. ಆದರೆ ಹೊರ ರಾಜ್ಯದಿಂದ ಬಂದು ಅಸಂಘಟಿತ ವಲಯದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು ನಮ್ಮ ರಾಜ್ಯದಲ್ಲಿ ಪಡಿತರ ಪಡೆಯಲು ಆಗುತ್ತಿಲ್ಲ ಎಂಬ ಮಾಹಿತಿ ಬಂದಿದ್ದು ರಾಜ್ಯ ಸರ್ಕಾರಕ್ಕೆ ಇದರ ಬಗ್ಗೆ ವರದಿ ಸಲ್ಲಿಸಿ ಎಂದರು.

ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜತೆಗೆ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಪ್ರಗತಿ ಸಾಧಿಸುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು. ಜಿಲ್ಲೆ ವ್ಯಾಪ್ತಿಯ ಸರ್ಕಾರಿ ಶಾಲೆಗಳಿಗೆ ತಿಂಗಳಿಗೊಮ್ಮೆ ಎಲ್ಲಾ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಮಕ್ಕಳ ಜತೆಗೆ ಮಧ್ಯಾಹ್ನದ ಬಿಸಿಯೂಟ ಮಾಡಬೇಕು. ಇದರಿಂದ ಆಹಾರದ ಗುಣಮಟ್ಟ ಹಾಗೂ ಅಧಿಕಾರಿಗಳ ಕಾರ್ಯಕ್ಷಮತೆ ಕಾಣಬಹುದು ಎಂದರು.

ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ನಿರ್ಮಾಣವಾಗಿರುವ ತ್ಯಾಜ್ಯ ನಿರ್ವಹಣಾ ಘಟಕಗಳು ಸರಿಯಾದ ರೀತಿಯಲ್ಲಿ ಸದ್ಬಳಕೆ ಆಗುತ್ತಿದೆಯೇ ಇಲ್ಲವೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಿ. ಗ್ರಾಮೀಣ ಪ್ರದೇಶಗಳಲ್ಲಿ ತ್ಯಾಜ್ಯ ಸಂಗ್ರಹಣೆ ಹಾಗೂ ಒಣ ಕಸ-ಹಸಿ ಕಸ ವಿಂಗಡಣೆ ಜತೆಗೆ ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳುವುದರ ಮೂಲಕ ಕಸ ವಿಲೇವಾರಿ ಘಟಕಗಳ ಸದ್ಬಳಕೆ ಆಗಬೇಕು ಎಂದು ಹೇಳಿದರು.

*ಬಾಣಂತಿಯರ, ಶಿಶುಗಳ ಸಾವು ತಡೆಗಟ್ಟಿ

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಹಾಗೂ ಖಾಸಗಿ ವೈದ್ಯರು, ನರ್ಸ್ ಗಳಿಗೆ ಕಾರ್ಯಾಗಾರ ಏರ್ಪಡಿಸಿ ಗರ್ಭಿಣಿ, ಬಾಣಂತಿಯರ ಹಾಗೂ ಶಿಶುಗಳ ಲಾಲನೆ, ಪಾಲನೆ, ಚಿಕಿತ್ಸಾ ವಿಧಾನ ಬಗ್ಗೆ ತರಬೇತಿ ನೀಡಿ. ಇದರಿಂದ ಗರ್ಭಿಣಿಯರ, ಶಿಶುಗಳ ಸಾವು ಸಂಭವಿಸುವುದನ್ನು ತಪ್ಪಿಸಬಹುದು ಎಂದರು.

ಬಾಲ್ಯವಿವಾಹ ಹಾಗೂ ಪೊಕ್ಸೋ ಪ್ರಕರಣಗಳು ತಡೆಯುವಲ್ಲಿ ಸಂಬಂಧಪಟ್ಟ ಇಲಾಖೆ ಜತೆಗೆ ಪೋಲಿಸ್ ಇಲಾಖೆ ಜಂಟಿಯಾಗಿ ಕಾರ್ಯ ಪ್ರವೃತರಾಗಿ ಕೆಲಸ ಮಾಡಬೇಕು. ಬಾಲ್ಯ ವಿವಾಹ ಪ್ರಕರಣ ದಾಖಲಾಗಿ ಇತ್ಯರ್ಥ ಆಗುವ ವರೆಗೆ ವರದಿ ಪಡೆದು ನಿಗಾ ವಹಿಸಬೇಕು ಎಂದರು.

ಕೇಂದ್ರ ಸರ್ಕಾರದ ಯಾವುದೇ ಯೋಜನೆಗಳ ಪ್ರಸ್ತಾವನೆ, ಅನುದಾನ, ಕಾಮಗಾರಿ ಹಾಗೂ ಇನ್ನಿತರ ಬಾಕಿ ಇರುವ ಕೆಲಸಗಳ ಬಗ್ಗೆ ಸಂಬಂಧಪಟ್ಟ ಆಯಾ ಇಲಾಖೆಗಳು ವರದಿ ಸಿದ್ಧಪಡಿಸಿ ಮಾಹಿತಿ ನೀಡಿ , ವರದಿಯನ್ನು ಕೇಂದ್ರ ಸರ್ಕಾರದ ಗಮನಕ್ಕೆ ತಂದು ಕಾರ್ಯ ರೂಪಕ್ಕೆ ತರುವಲ್ಲಿ ಕೆಲಸ ಮಾಡಲಾಗುವುದು ಎಂದರು.

ಸರಕಾರಿ ಕಚೇರಿಗಳಲ್ಲಿ ಕೆಲಸ ವಿಳಂಬವಾಗುತ್ತಿರುವ ಬಗ್ಗೆ ಜನಸಾಮಾನ್ಯರ ದೂರುಗಳು ಕೇಳಿಬರುತ್ತಲೇ ಇರುತ್ತದೆ. ಸರಕಾರಿ ಸೌಲಭ್ಯ ಪಡೆಯಲು ಕಚೇರಿಗಳಿಗೆ ಅಲೆದಾಡಿಸಲಾಗುತ್ತದೆ ಎಂಬುದು ಜನರ ದೂರುಗಳಾಗಿವೆ. ಅಧಿಕಾರಿಗಳು ಸಮಯ ಪ್ರಜ್ಞೆ ಇಟ್ಟುಕೊಂಡು ಕೆಲಸ ಮಾಡಬೇಕು. ಜನಸಾಮಾನ್ಯರ ಕೆಲಸಕ್ಕೆ ಆದ್ಯತೆ ನೀಡಿ ಕೆಲಸ ಮಾಡಬೇಕು. ಅಧಿಕಾರಿಗಳ ಹತ್ತಿರ ಕೆಲಸ ಆಗದಿದ್ದಾಗ ಮಾತ್ರ ಜನರು ಜನಪ್ರತಿನಿಧಿಗಳ ಬಳಿ ಬರುತ್ತಾರೆ. ಇದರಿಂದ ಅಧಿಕಾರಿಗಳು
ನಿರ್ಲಕ್ಷ್ಯ ತೋರದೆ ಕೆಲಸ ಮಾಡಬೇಕು ಎಂದರು.

ಸರಕಾರಿ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸಲು ಜನಪ್ರತಿನಿಧಿಗಳು, ಅಧಿಕಾರಿಗಳು ಸಹಕಾರದಿಂದ ಕೆಲಸ ಮಾಡಿದರೆ ಸಮರ್ಪಕವಾಗಿ ಯೋಜನೆಗಳು ‌ಜನರನ್ನು ತಲುಪಲಿದೆ ಎಂದರು.

ಸಭೆಯಲ್ಲಿ ದೊಡ್ಡಬಳ್ಳಾಪುರ ಶಾಸಕರಾದ ಧೀರಜ್ ಮುನಿರಾಜು, ಜಿಲ್ಲಾಧಿಕಾರಿ ಡಾ. ಎನ್.ಶಿವಶಂಕರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕೆ.ಎನ್ ಅನುರಾಧ, ಜಿ.ಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಅಪರ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್, ದಿಶಾ ಸಮಿತಿಯ ನಾಮ ನಿರ್ದೇಶಿತ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಇಒ ಗಳು, ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಕ್ರಮ ವಿದೇಶಿಗರ ಬೇಟೆಗೆ ಪೊಲೀಸ್ ಬಲೆ!- ಕೈಗಾರಿಕಾ ವಲಯಗಳ ಬಾಡಿಗೆ ಮನೆ, ಗೆಸ್ಟ್ ಗೌಸ್, ಲಾಡ್ಜ್‌ಗಳ ಮೇಲೆ ಹದ್ದಿನ ಕಣ್ಣು-ಡಿವೈಎಸ್ಪಿ ಪಾಂಡುರಂಗ

ಸಮರ್ಪಕ ದಾಖಲೆಗಳಿಲ್ಲದೆ ವಿದೇಶಗಳಿಂದ ಬಂದು ಜಿಲ್ಲೆಯಲ್ಲಿ ನೆಲೆಸಿರುವವರ ಪತ್ತೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…

3 hours ago

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

1 day ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

1 day ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

1 day ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

2 days ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

2 days ago