ದಿ.ಹಾಡೋನಹಳ್ಳಿ ಅಪ್ಪಯ್ಯಣ್ಣ ನಿವಾಸಕ್ಕೆ ಸಚಿವ ಕೆ.ಎಚ್.ಮುನಿಯಪ್ಪ ಭೇಟಿ: ಕುಟುಂಬ ಸದಸ್ಯರಿಗೆ ಸಾಂತ್ವನ

ಇತ್ತೀಚೆಗೆ ನಿಧನರಾದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮಾಜಿ‌ ಸದಸ್ಯ ಹಾಡೋನಹಳ್ಳಿ ಅಪ್ಪಯ್ಯಣ್ಣನವರ ನಿವಾಸಕ್ಕೆ ಇಂದು ಆಹಾರ ಮತ್ತು ನಾಗರಿಕ ಸರಬರಾಜು ಪೂರೈಕೆ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಭೇಟಿ ನೀಡಿ ದಿ.ಅಪ್ಪಯ್ಯಣ್ಣನವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಸುದೀರ್ಘ ರಾಜಕಾರಣದಲ್ಲಿದ್ದ ಅಪ್ಪಯ್ಯಣ್ಣನವರು  ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ, ಬಮುಲ್ ಅಧ್ಯಕ್ಷರಾಗಿ, ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಹೀಗೆ ಅನೇಕ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ಸಾರ್ವಜನಿಕ ಜೀವನದಲ್ಲಿ ತಮ್ಮದೇ ಆದ ಛಾಪು ಉಳಿಸಿಕೊಂಡಿದ್ದರು ಎಂದರು.

ಅವರ ಕುಟುಂಬ ಸದಸ್ಯರಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಕೊಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಪ್ರಾಧಿಕಾರದ ಸದಸ್ಯರಾದ ರಂಗಪ್ಪ, ಆರ್.ವಿ.ಮಹೇಶ್ ಕುಮಾರ್, ರಮೇಶ್, ಕಾಂಗ್ರೆಸ್ ಮುಖಂಡರಾದ ರಾಮಕೃಷ್ಣಪ್ಪ ದೊಡ್ಡತುಮಕೂರು, ರವಿ ಸಿದ್ದಪ್ಪ. ಹನುಮಂತರಾಯಪ್ಪ. ಸವಿತಾ ಆನಂದ್, ನರಸಿಂಹಮೂರ್ತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!