ಇತ್ತೀಚೆಗೆ ನಿಧನರಾದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಡೋನಹಳ್ಳಿ ಅಪ್ಪಯ್ಯಣ್ಣನವರ ನಿವಾಸಕ್ಕೆ ಇಂದು ಆಹಾರ ಮತ್ತು ನಾಗರಿಕ ಸರಬರಾಜು ಪೂರೈಕೆ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಭೇಟಿ ನೀಡಿ ದಿ.ಅಪ್ಪಯ್ಯಣ್ಣನವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಸುದೀರ್ಘ ರಾಜಕಾರಣದಲ್ಲಿದ್ದ ಅಪ್ಪಯ್ಯಣ್ಣನವರು ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ, ಬಮುಲ್ ಅಧ್ಯಕ್ಷರಾಗಿ, ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಹೀಗೆ ಅನೇಕ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ಸಾರ್ವಜನಿಕ ಜೀವನದಲ್ಲಿ ತಮ್ಮದೇ ಆದ ಛಾಪು ಉಳಿಸಿಕೊಂಡಿದ್ದರು ಎಂದರು.
ಅವರ ಕುಟುಂಬ ಸದಸ್ಯರಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಕೊಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಪ್ರಾಧಿಕಾರದ ಸದಸ್ಯರಾದ ರಂಗಪ್ಪ, ಆರ್.ವಿ.ಮಹೇಶ್ ಕುಮಾರ್, ರಮೇಶ್, ಕಾಂಗ್ರೆಸ್ ಮುಖಂಡರಾದ ರಾಮಕೃಷ್ಣಪ್ಪ ದೊಡ್ಡತುಮಕೂರು, ರವಿ ಸಿದ್ದಪ್ಪ. ಹನುಮಂತರಾಯಪ್ಪ. ಸವಿತಾ ಆನಂದ್, ನರಸಿಂಹಮೂರ್ತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…