ದೀಕ್ಷಾಭೂಮಿ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳಿಂದ ಅರ್ಜಿಗಳ ಆಹ್ವಾನ

2024-25 ನೇ ಸಾಲಿನಲ್ಲಿ ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಬಸ್ಸುಗಳ ವ್ಯವಸ್ಥೆಯನ್ನು ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಕಲ್ಪಿಸಲಾಗುತ್ತಿದ್ದು, ದೀಕ್ಷಾ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್ ಸೈಟ್ ಲಿಂಕ್ https://sw.kar.nic.in ನಲ್ಲಿ ಆನ್ ಲೈನ್ ಮೂಲಕ ಸೆಪ್ಟೆಂಬರ್ 05ರವರೆಗೆ ವಿಸ್ತರಿಸಲಾಗಿದ್ದು, ಯಾತ್ರಾರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.”

*ಮಾರ್ಗಸೂಚಿಗಳು:-*
• ಯಾತ್ರಾರ್ಥಿಗಳು ಕಡ್ಡಾಯವಾಗಿ ಬಿ.ಪಿ.ಎಲ್ ಕಾರ್ಡ್ ಹೊಂದಿರಬೇಕು.
• ಯಾತ್ರಾರ್ಥಿಗಳು ಎಸ್.ಸಿ/ಎಸ್.ಟಿ ಸಮುದಾಯಕ್ಕೆ ಸೇರಿದವರಾಗಿರಬೇಕು. ಇತರೆ ಸಮುದಾಯದ ಜನರು ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅನುಯಾಯಿಗಳು ಸಹ ಯಾತ್ರೆ ಕೈಗೊಳ್ಳಬಹುದು.
• ಯಾತ್ರಾರ್ಥಿಗಳಿಗೆ ಕನಿಷ್ಟ 18 ವರ್ಷ ಮೇಲ್ಪಟ್ಟಿರಬೇಕು.
• ಡಾ.ಬಿ.ಆರ್.ಅಂಬೇಡ್ಕರ್ ರವರ ಚಿಂತನೆಗಳ ಬಗ್ಗೆ ಅರಿವು ಹೊಂದಿದ್ದು, ಸಮಾಜ ಸೇವೆ ಮಾಡಿದ ಅನುಭವ ಹೊಂದಿರಬೇಕು.
• ಈಗಾಗಲೇ ಸರ್ಕಾರದ ವೆಚ್ಚದಲ್ಲಿ ಒಮ್ಮೆ ನಾಗಪುರದ ದೀಕ್ಷಾಭೂಮಿಗೆ ಪ್ರವಾಸ ಮಾಡಿದವರು 2ನೇ ಭಾರಿ ಸೌಲಭ್ಯ ಪಡೆಯಲು ಅರ್ಹರಿರುವುದಿಲ್ಲ.
• ಸರ್ಕಾರಿ ಮತ್ತು ಅದರ ಅಂಗ ಸಂಸ್ಥೆಗಳಲ್ಲಿ ಸೇವೆಯಲ್ಲಿರುವವರು ಅರ್ಹರಲ್ಲ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ನಾಗಪುರಕ್ಕೆ ಹೋಗಿ ಬರಲು ತಗಲುವ ಪ್ರಯಾಣದ ವೆಚ್ಚವನ್ನು ಮಾತ್ರ ಸರ್ಕಾರದಿಂದ ಬರಿಸಲಾಗುವುದು ವಸತಿ ಮತ್ತು ಬೋಜನಾ ವೆಚ್ಚವನ್ನು ಯಾತ್ರಾರ್ಥಿಗಳೇ ಭರಿಸತಕ್ಕದ್ದು.

ಆನ್ ಲೈನ್ ಮೂಲಕ ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲಿಸಿ ನಿಗಧಿಪಡಿಸಿದ ಗುರಿಯಂತೆ ಮಾನ್ಯ ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆದು ಆಯ್ಕೆ ಮಾಡಲಾಗುವುದು.

ಹೆಚ್ಚಿನ ವಿವರಗಳಿಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ. ನಂ. 217, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂ.ಗ್ರಾ. ಜಿಲ್ಲೆ-562110. ದೂರವಾಣಿ ಸಂಖ್ಯೆ 080- 29787447. ಸಹಾಯಕ ನಿರ್ದೇಶಕರ ಕಚೇರಿ ದೇವನಹಳ್ಳಿ ತಾಲ್ಲೂಕು ದೂರವಾಣಿ ಸಂಖ್ಯೆ 080-27681784, ದೊಡ್ಡಬಳ್ಳಾಪುರ ತಾಲ್ಲೂಕು ದೂರವಾಣಿ ಸಂಖ್ಯೆ- 080-27623681, ಹೊಸಕೋಟೆ ತಾಲ್ಲೂಕು ದೂರವಾಣಿ ಸಂಖ್ಯೆ- 080-27931528, ನೆಲಮಂಗಲ ತಾಲ್ಲೂಕು ದೂರವಾಣಿ ಸಂಖ್ಯೆ- 080-27723172 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪನಿರ್ದೇಶಕರಾದ ಟಿ.ಎಲ್.ಎಸ್ ಪ್ರೇಮ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ಮಕ್ಕಳ ಸಂಕಷ್ಟದ ಬದುಕಿಗೆ ಮುಕ್ತಿ: ಪಾಲಕರಿದ್ದರೂ ಅನಾಥರಂತಿದ್ದ ಮೂವರು ಮಕ್ಕಳ ರಕ್ಷಣೆ

ದೇಗುಲದ ಪ್ರಸಾದದಿಂದ ಹೊಟ್ಟೆ ತುಂಬಿಸಿಕೊಳ್ಳುವುದು, ದೇವಸ್ಥಾನದ ಬೀದಿಯಲ್ಲಿ ಭಿಕ್ಷಾಟನೆ ಮಾಡುವುದು, ರಾತ್ರಿ ವೇಳೆ ಬಂಡೆಗಳ ಪೊಟರೆ ಹಾಗೂ ಪೊದೆಗಳ ನಡುವೆ…

10 hours ago

ಸಿನಿಮಾ…. ಸೋಲು, ಗೆಲುವಿನ ಸುತ್ತಾ…..

ಟಾಕ್ಸಿಕ್ ಎಂಬ ಸಿನಿಮಾ ಪ್ರೇಕ್ಷಕರನ್ನು ತಲುಪುವಲ್ಲಿ ವಿಫಲವಾದ ಕೆಲವೇ ದಿನಗಳ ನಂತರ ಪ್ರೇಮದ ಊರಲಿ ಎಂಬ ಸಿನಿಮಾ ಸ್ವಲ್ಪ ಮಟ್ಟಿಗೆ…

16 hours ago

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

1 day ago

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

1 day ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

1 day ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

1 day ago