ದೀಪಾವಳಿ ಹಬ್ಬ ಆಚರಣೆ ಹಿನ್ನೆಲೆ ಟೀಂ ಇಂಡಿಯಾದ ಆಟಗಾರರು ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿ, ದೀಪಾವಳಿಯನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ.
ಭಾನುವಾರ ನೆದರ್ಲೆಂಡ್ಸ್ ವಿರುದ್ಧದ ಅಂತಿಮ ಕ್ರಿಕೆಟ್ ಲೀಗ್ ಪಂದ್ಯಕ್ಕೆ ಮುಂಚಿತವಾಗಿ, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಗಿಲ್, ಇಶಾನ್ ಕಿಶನ್, ಮೊಹಮ್ಮದ್ ಸಿರಾಜ್, ಕೆ.ಎಲ್.ರಾಹುಲ್, ರವೀಂದ್ರ ಜಡೇಜಾ ಸೇರಿದಂತೆ ಭಾರತ ಕ್ರಿಕೆಟ್ ತಂಡವು ನವೆಂಬರ್ 11 ರಂದು ದೀಪಾವಳಿಯನ್ನು ಆಚರಿಸಿದೆ. ಟೀಮ್ ಇಂಡಿಯಾದ ಎಲ್ಲ ಆಟಗಾರರು ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ್ದಾರೆ.
ಈ ಕುರಿತು ಕೆ.ಎಲ್. ರಾಹುಲ್ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.