ದೀಪ ಬೆಳಗಿ ಪರಿಸರ ಸ್ನೇಹಿ ದೀಪಾವಳಿ ಆಚರಣೆ ಮಾಡಿದ ನ್ಯಾಷನಲ್ ಪ್ರೈಡ್ ಶಾಲಾ ವಿದ್ಯಾರ್ಥಿಗಳು

ನಾಡಿನೆಲ್ಲಡೆ ಬೆಳಕಿನ‌ ಹಬ್ಬವಾದ ದೀಪಾವಳಿಯನ್ನ ಅದ್ಧೂರಿಯಾಗಿ ಆಚರಣೆ ಮಾಡಲು ಸಕಲ ಸಿದ್ಧತೆ ನಡೆಸಲಾಗುತ್ತಿದೆ. ಎಲ್ಲರ ಮನದಲ್ಲೂ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದೆ.

ನಗರದ ನ್ಯಾಷನಲ್ ಪ್ರೈಡ್ ಶಾಲೆಯ ವಿದ್ಯಾರ್ಥಿಗಳು ಪಟಾಕಿ ಹೊಡೆಯುವ ಬದಲು ದೀಪಗಳನ್ನು ಬೆಳಗುವ ಮೂಲಕ ಪರಿಸರ ಸ್ನೇಹಿ ಹಬ್ಬದ ಆಚರಣೆಯನ್ನು ಪ್ರತಿಪಾದಿಸಿದರು.

ಪಟಾಕಿ ಸುಡುವುದರಿಂದ ಪರಿಸರಕ್ಕೆ ಹಾನಿ, ಜೊತೆಗೆ ಪ್ರಾಣಿ ಪಕ್ಷಿಗಳ ಜೀವಕ್ಕೂ ಕುತ್ತು ತರುತ್ತದೆ. ಪಟಾಕಿ ಬಿಟ್ಟು ದೀಪ ಬೆಳಗುವ ಮೂಲಕ ಬೆಳಕಿನ ಹಬ್ಬವನ್ನ ಸಂಭ್ರಮದಿಂದ ಆಚರಣೆ ಮಾಡಿ ಎಂಬ ಸಂದೇಶವನ್ನು ಸಮಾಜಕ್ಕೆ ಸಾರಿದರು.

ಈ ವೇಳೆ ಶಾಲೆಯ ಮುಖ್ಯಸ್ಥರು, ಪ್ರಾಂಶುಪಾಲರು, ಶಿಕ್ಷಕರು, ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

56 minutes ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

2 hours ago

ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…

3 hours ago

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

7 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

8 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

8 hours ago