ದುಬೈನಿಂದ ಟ್ಯಾಬ್ಲೆಟ್ ರೂಪದಲ್ಲಿ ಚಿನ್ನ ಸಾಗಾಟ: ಕೆಐಎಯಲ್ಲಿ 899 ಗ್ರಾಂ ಗೋಲ್ಡ್ ವಶ

ದೇವನಹಳ್ಳಿ: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಟ್ಯಾಬ್ಲೆಟ್ ರೂಪದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ದುಬೈನಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕನೊಬ್ಬನ ಬಳಿ ಪರಿಶೀಲನೆ ನಡೆಸಿದ ವೇಳೆ 24 ಕ್ಯಾರೆಟ್‌ನ 899.50 ಗ್ರಾಂ ತೂಕದ ಗೋಲ್ಡ್ ಬಿಸ್ಕೆಟ್ ಪತ್ತೆಯಾಗಿದೆ.

ವಶಪಡಿಸಿಕೊಂಡ ಚಿನ್ನದ ಮೌಲ್ಯ ಸುಮಾರು ₹1.37 ಲಕ್ಷ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.

ಸಂದೇಹಾಸ್ಪದವಾಗಿ 4 ಕ್ಯಾಪ್ಸುಲ್‌ಗಳಲ್ಲಿ ಚಿನ್ನದ ಪೇಸ್ಟ್‌ನಲ್ಲಿ ಮರೆಮಾಚಿ ಚಿನ್ನವನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕಸ್ಟಮ್ಸ್ ಕಾಯ್ದೆಯಡಿ ಕ್ರಮ ಜರುಗಿಸಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಅಕ್ರಮ ಚಿನ್ನ ಸಾಗಾಟ ತಡೆಗಟ್ಟಲು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕಟ್ಟುನಿಟ್ಟಿನ ನಿಗಾ ವಹಿಸಿದ್ದು, ಇತ್ತೀಚಿನ ದಿನಗಳಲ್ಲಿ ಇಂತಹ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಪಾಸಣೆ ಮತ್ತಷ್ಟು ಬಿಗಿಗೊಳಿಸಲಾಗಿದೆ.

Ramesh Babu

Journalist

Recent Posts

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

2 hours ago

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

14 hours ago

ರಾಜಾನುಕುಂಟೆ ಬಳಿ ರೈಲು ಬೋಗಿಗಳಿಗೆ ಬೆಂಕಿ: ಎರಡು ಬೋಗಿಗಳು ಸುಟ್ಟು ಭಸ್ಮ

ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…

19 hours ago

ಮಧುರೆ ಕೆರೆಯಲ್ಲಿ ಮಣ್ಣು ದಂಧೆ ಆರೋಪ: ಸುಮಾರು 35 ಟ್ರ್ಯಾಕ್ಟರ್, 5 ಜೆಸಿಬಿಗಳ ಅಬ್ಬರ; ಮಣ್ಣು ತೆಗೆಯುವುದಕ್ಕೆ ಗ್ರಾಮಸ್ಥರ ಬ್ರೇಕ್!

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್‌ಗಳು…

20 hours ago

ನಮ್ಮ ತೆರಿಗೆ ನಮ್ಮ ಹಕ್ಕು…

ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…

1 day ago

ದೇವನಹಳ್ಳಿ ಬಳಿ ಭೀಕರ ಅಪಘಾತ: ಓರ್ವ ಸಾವು: ಹಲವರಿಗೆ ಗಾಯ

ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…

1 day ago