ದುಸ್ಥಿಯಲ್ಲಿರುವ ರಸ್ತೆಗಳನ್ನ ದುರಸ್ತಿ ಮಾಡುವುದನ್ನ ಬಿಟ್ಟು, ಸುಸ್ಥಿತಿಯಲ್ಲಿದ್ದ ರಸ್ತೆಯನ್ನ ಹಾಳು ಮಾಡಿ ಹೊಸದಾಗಿ ರಸ್ತೆ ಮಾಡುವ ಕರಾಮತ್ತು..!

ದೊಡ್ಡಬಳ್ಳಾಪುರ: ನಗರದಲ್ಲಿ ಬಹುತೇಕ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಇಂದಿಗೂ ಹಲವು ಬಡಾವಣೆಗಳಲ್ಲಿ ಕಚ್ಛಾ ರಸ್ತೆಗಳೇ ಇವೆ. ಆದರೆ, ದುಸ್ಥಿತಿಯಲ್ಲಿರುವ ರಸ್ತೆಗಳನ್ನು ದುರಸ್ತಿ ಮಾಡುವುದನ್ನ ಬಿಟ್ಟು, ಸುಸ್ಥಿತಿಯಲ್ಲಿದ್ದ ಸಿಮೆಂಟ್ ರಸ್ತೆಯನ್ನೇ ಕಿತ್ತು ಹಾಕಿ ಹೊಸದಾಗಿ ರಸ್ತೆ ಮಾಡುವ ಕರಾಮತ್ತು ನಡೆದಿದೆ.

ಶಾಂತಿನಗರದಲ್ಲಿ ಟ್ಯಾಂಕ್ ರಸ್ತೆಗೆ ಸಿಮೆಂಟ್ ಹಾಕಲಾಗಿತ್ತು. ಯಾವುದೇ ಗುಂಡಿಗಳಿಲ್ಲದೇ ರಸ್ತೆ ಸುಸ್ಥಿತಿಯಲ್ಲಿತ್ತು. ಹೀಗಿದ್ದರೂ ಶುಕ್ರವಾರ ರಸ್ತೆಯನ್ನು ಜೆಸಿಬಿ‌ ಮೂಲಕ ಕಿತ್ತು ಹಾಕಲಾಗಿದೆ. ಸಾರ್ವಜನಿಕರು ಈ ಕುರಿತು ಪ್ರಶ್ನಿಸಿದಾಗ, ನಾವು ಗುತ್ತಿಗೆದಾರರು ಹೇಳಿದ ಹಾಗೆ ಮಾಡಿದ್ದೇವೆ ಎಂದು ಕೆಲಸಗಾರರು ಹೇಳಿದ್ದಾರೆ.

ಸಂಸದರ ಪ್ರದೇಶಾಭಿವೃದ್ಧಿ ನಿಧಿಯಡಿ ಜಿಲ್ಲಾಡಳಿತ ಹೊಸದಾಗಿ ರಸ್ತೆ ಮಾಡುತ್ತಿದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.

ಟ್ಯಾಂಕ್ ರಸ್ತೆ ಉತ್ತಮವಾಗಿದ್ದರೂ ಕಿತ್ತುಹಾಕಿ ಹೊಸ ರಸ್ತೆ ಮಾಡುವ ಅನಿವಾರ್ಯತೆ ಏನಿತ್ತು ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

Ramesh Babu

Journalist

Recent Posts

ಹುಟ್ಟಿಸುವವನೂ ಅವನೇ…. ಸಾಯಿಸುವವನೂ ಅವನೇ…

ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…

14 minutes ago

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

10 hours ago

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

12 hours ago

ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ

ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…

14 hours ago

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

22 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

1 day ago