Categories: ಕೋಲಾರ

ದೆಹಲಿಯಲ್ಲಿ ಬಿಜೆಪಿ ಗದ್ದುಗೆ: ಕೋಲಾರದಲ್ಲಿ ವಿಜಯೋತ್ಸವ

ಕೋಲಾರ: ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಅಭೂತಪೂರ್ವ ಜಯ ಸಾಧಿಸಿದ್ದಕ್ಕೆ ಶನಿವಾರ ಬಿಜೆಪಿ ಕಾರ್ಯಕರ್ತರು ನಗರದ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿ ಪರಸ್ಪರ ಸಿಹಿ ವಿನಿಮಯ ಮಾಡಿಕೊಂಡು ಪಕ್ಷದ ಪರ ಜಯಘೋಷ ಹಾಕಿದರು.

ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಜಿಲ್ಲಾ ಅಧ್ಯಕ್ಷ ಓಂಶಕ್ತಿ ಚಲಪತಿ ಮಾತನಾಡಿ ದೇಶದಲ್ಲಿನ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಯೋಜನೆಗಳಿಂದ ದೆಹಲಿಯಲ್ಲಿ ದೊಡ್ಡ ಜಯ ಸಾಧಿಸಿದೆ ಇದು ಪಕ್ಷದ ಕಾರ್ಯಕ್ರಮಗಳಿಗೆ ಸಿಕ್ಕ ಗೆಲುವು ಇದರಿಂದ ಕಾರ್ಯಕರ್ತರಲ್ಲಿ ಹುಮ್ಮಸ್ಸು ಹೆಚ್ಚಾಗಿದೆ ಮುಂದಿನ ದಿನಗಳಲ್ಲಿ ಕೂಡ ಕರ್ನಾಟಕದಲ್ಲಿ ಪಕ್ಷವು ಅಧಿಕಾರಕ್ಕೆ ಬರುತ್ತದೆ ನಮ್ಮಲ್ಲಿನ ನಾಯಕರ ಕುಂದುಕೊರತೆಗಳನ್ನು ನಿವಾರಿಸಿಕೊಂಡು ಪಕ್ಷವು ಬಲಿಷ್ಠವಾಗುತ್ತದೆ ಎಂದರು.

ಕೋಲಾರ ಜಿಲ್ಲೆಯಲ್ಲಿ ಕೂಡ ಆರು ಕ್ಷೇತ್ರಗಳ ಪೈಕಿ ನಾಲ್ಕು ಸ್ಥಾನವನ್ನು ಗೆಲ್ಲುವಲ್ಲಿ ಶ್ರಮ ವಹಿಸಲಾಗುತ್ತದೆ, ಪಕ್ಷದಲ್ಲಿ ಏನೇ ಸಮಸ್ಯೆಗಳಿದ್ದರೆ ನಮ್ಮ ಗಮನಕ್ಕೆ ತಂದರೆ ಬಗೆಹರಿಸಲಾಗುವುದು. ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ಜವಾಬ್ದಾರಿ ನೀಡಿದ್ದಾರೆ ಕಾರ್ಯಕರ್ತನ ಸ್ಥಾನ ಶಾಶ್ವತವಾಗಿರುತ್ತದೆ ನಾನು ಜಿಲ್ಲಾಧ್ಯಕ್ಷನಾದರೂ ನಾನು ಒಬ್ಬ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ದೇಶದಲ್ಲಿ 18 ಕೋಟಿ ಸದಸ್ಯತ್ವ ಪಡೆದು ಹೆಚ್ಚು ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿರುವ ಏಕೈಕ ಪಕ್ಷ‌ ಬಿಜೆಪಿಯಾಗಿದ್ದು ಸಕ್ರಿಯವಾಗಿ ನಾವೆಲ್ಲ ಒಗ್ಗಟ್ಟಾಗಿ ದುಡಿಯೋಣ ಎಂದರು.

ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಎಸ್.ಬಿ ಮುನಿವೆಂಕಟಪ್ಪ, ಬಿ.ವಿ ಮಹೇಶ್, ಜಿಲ್ಲಾ ಉಪಾಧ್ಯಕ್ಷರಾದ ವಿಜಯಕುಮಾರ್, ಹೊಸರಾಯಪ್ಪ, ನಗರ ಘಟಕದ ಅಧ್ಯಕ್ಷ ಸಾ.ಮಾ ಬಾಬು, ಎಸ್ಸಿ ಘಟಕದ ರಾಜ್ಯ ಕಾರ್ಯದರ್ಶಿ ಆರ್.ಎನ್ ಹನುಮಂತಪ್ಪ, ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷೆ ಅರುಣಮ್ಮ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯೆ ಮಮತಮ್ಮ ಹಿರಿಯ ಮುಖಂಡರಾದ ಜಗದೀಶ್ವಾಚಾರಿ, ಸುರೇಶ್, ಗಾಂಧಿನಗರ ವೆಂಕಟೇಶ್, ಅಲ್ಪಸಂಖ್ಯಾತರ ಘಟಕದ ಅಕ್ಮಲ್ ಪಾಷ, ರಾಜೇಶ್, ನಟರಾಜ್, ನಾಗೇಂದ್ರ, ಹಾರೋಹಳ್ಳಿ ನಾರಾಯಣಸ್ವಾಮಿ ಪದ್ಮಮ್ಮ ರಾಮಚಂದ್ರ ಮುಂತಾದವರು ಇದ್ದು, ವಿಜಯೋತ್ಸವದ ನಂತರ ನಗರದ ಬಂಗಾರಪೇಟೆ ವೃತ್ತದಲ್ಲಿನ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

14 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

18 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

18 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

23 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago