ದೊಡ್ಡಬಳ್ಳಾಪುರ: ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಅಭೂತಪೂರ್ವ ಜಯ ಸಾಧಿಸಿದ್ದಕ್ಕೆ ಶನಿವಾರ ಬಿಜೆಪಿ ಮುಖಂಡರು, ಕಾರ್ಯಕರ್ತರು ನಗರದ ಹಳೇಬಸ್ ನಿಲ್ದಾಣದಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿ ಪರಸ್ಪರ ಸಿಹಿ ವಿನಿಮಯ ಮಾಡಿಕೊಂಡು ಪಕ್ಷದ ಪರ ಜಯಘೋಷ ಹಾಕಿದರು.
ದೇಶದಲ್ಲಿನ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಯೋಜನೆಗಳಿಂದ ದೆಹಲಿಯಲ್ಲಿ ದೊಡ್ಡ ಜಯ ಸಾಧಿಸಿದೆ. ಇದು ಪಕ್ಷದ ಕಾರ್ಯಕ್ರಮಗಳಿಗೆ ಸಿಕ್ಕ ಗೆಲುವು. ಇದರಿಂದ ಕಾರ್ಯಕರ್ತರಲ್ಲಿ ಹುಮ್ಮಸ್ಸು ಹೆಚ್ಚಾಗಿದೆ. ಮುಂದಿನ ದಿನಗಳಲ್ಲಿ ಕೂಡ ಕರ್ನಾಟಕದಲ್ಲಿ ಪಕ್ಷವು ಅಧಿಕಾರಕ್ಕೆ ಬರುತ್ತದೆ. ನಮ್ಮಲ್ಲಿನ ನಾಯಕರ ಕುಂದುಕೊರತೆಗಳನ್ನು ನಿವಾರಿಸಿಕೊಂಡು ಪಕ್ಷವು ಬಲಿಷ್ಠವಾಗುತ್ತದೆ ಎಂದು ಮುಖಂಡರು ತಿಳಿಸಿದರು.
ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ನಗರಸಭಾ ಸದಸ್ಯರಾದ ಬಂತಿ ವೆಂಕಟೇಶ್, ಹಿರಿಯ ಮುಖಂಡ ಕೆ.ಟಿ ವೆಂಕಟಚಲಪ್ಪ, ಗೋಪಿ, ವತ್ಸಲಾ,, ರಾಮಕಿಟ್ಟಿ, ನಗರಸಭಾ ಸದಸ್ಯರಾದ ಭಾಸ್ಕರ್, ಪದ್ಮನಾಭ, ದೊಡ್ಡಬಳ್ಳಾಪುರ ತಾಲೂಕು ಮತ್ತು ನಗರ ಪ್ರಧಾನ ಕಾರ್ಯದರ್ಶಿಗಳು, ಮಹಿಳಾ ಮೋರ್ಚದ ಪದಾಧಿಕಾರಿಗಳು, ಓಬಿಸಿ ಮೋರ್ಚಾ ಸದಸ್ಯರು, ಡಾಕ್ಟರ್ ನಾರಾಯಣ್, ಆರೂಡಿ ರಮೇಶ್ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…