ದೆಹಲಿಯಲ್ಲಿ ಬಿಜೆಪಿ ಜಯಭೇರಿ: ದೊಡ್ಡಬಳ್ಳಾಪುರದಲ್ಲಿ ವಿಜಯೋತ್ಸವ

ದೊಡ್ಡಬಳ್ಳಾಪುರ: ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಅಭೂತಪೂರ್ವ ಜಯ ಸಾಧಿಸಿದ್ದಕ್ಕೆ ಶನಿವಾರ ಬಿಜೆಪಿ ಮುಖಂಡರು, ಕಾರ್ಯಕರ್ತರು ನಗರದ ಹಳೇಬಸ್ ನಿಲ್ದಾಣದಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿ ಪರಸ್ಪರ ಸಿಹಿ ವಿನಿಮಯ ಮಾಡಿಕೊಂಡು ಪಕ್ಷದ ಪರ ಜಯಘೋಷ ಹಾಕಿದರು.

ದೇಶದಲ್ಲಿನ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಯೋಜನೆಗಳಿಂದ ದೆಹಲಿಯಲ್ಲಿ ದೊಡ್ಡ ಜಯ ಸಾಧಿಸಿದೆ. ಇದು ಪಕ್ಷದ ಕಾರ್ಯಕ್ರಮಗಳಿಗೆ ಸಿಕ್ಕ ಗೆಲುವು. ಇದರಿಂದ ಕಾರ್ಯಕರ್ತರಲ್ಲಿ ಹುಮ್ಮಸ್ಸು ಹೆಚ್ಚಾಗಿದೆ. ಮುಂದಿನ ದಿನಗಳಲ್ಲಿ ಕೂಡ ಕರ್ನಾಟಕದಲ್ಲಿ ಪಕ್ಷವು ಅಧಿಕಾರಕ್ಕೆ ಬರುತ್ತದೆ. ನಮ್ಮಲ್ಲಿನ ನಾಯಕರ ಕುಂದುಕೊರತೆಗಳನ್ನು ನಿವಾರಿಸಿಕೊಂಡು ಪಕ್ಷವು ಬಲಿಷ್ಠವಾಗುತ್ತದೆ ಎಂದು ಮುಖಂಡರು ತಿಳಿಸಿದರು.

ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ನಗರಸಭಾ ಸದಸ್ಯರಾದ ಬಂತಿ ವೆಂಕಟೇಶ್, ಹಿರಿಯ ಮುಖಂಡ ಕೆ.ಟಿ ವೆಂಕಟಚಲಪ್ಪ,  ಗೋಪಿ, ವತ್ಸಲಾ,, ರಾಮಕಿಟ್ಟಿ, ನಗರಸಭಾ ಸದಸ್ಯರಾದ  ಭಾಸ್ಕರ್, ಪದ್ಮನಾಭ, ದೊಡ್ಡಬಳ್ಳಾಪುರ ತಾಲೂಕು ಮತ್ತು ನಗರ ಪ್ರಧಾನ ಕಾರ್ಯದರ್ಶಿಗಳು, ಮಹಿಳಾ ಮೋರ್ಚದ  ಪದಾಧಿಕಾರಿಗಳು, ಓಬಿಸಿ ಮೋರ್ಚಾ ಸದಸ್ಯರು, ಡಾಕ್ಟರ್ ನಾರಾಯಣ್, ಆರೂಡಿ ರಮೇಶ್ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

12 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

17 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

20 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

1 day ago