ದೆಹಲಿ ಪ್ರವಾಸಕ್ಕೆ ಸಿಎಂ ಜೊತೆ ನಲಪಾಡ್; ತಂದೆಗೆ ಸಚಿವ ಸ್ಥಾನ ಸಿಗುವ ವಿಶ್ವಾಸ: ಬಿಟ್‌ಕಾಯಿನ್ ಪ್ರಕರಣದ ಕುರಿತು ಸ್ಪಷ್ಟನೆ

ದೇವನಹಳ್ಳಿ: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ದೆಹಲಿ ಪ್ರವಾಸಕ್ಕೆ ತೆರಳುವ ಮುನ್ನ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್, ತಮ್ಮ ತಂದೆ ಶಾಸಕ ಎನ್.ಎ. ಹ್ಯಾರಿಸ್ ಅವರಿಗೆ ಈ ಬಾರಿ ಸಚಿವ ಸ್ಥಾನ ಸಿಗುವ ವಿಶ್ವಾಸ ವ್ಯಕ್ತಪಡಿಸಿದರು.

ಇಷ್ಟು ದಿನ ಸಿಎಂ ಆಗುವ ಪ್ರಯತ್ನದಲ್ಲಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ದೆಹಲಿಗೆ ಹೋಗುತ್ತಿದ್ದೆವು. ಈಗ ಅವರು ಮುಖ್ಯಮಂತ್ರಿಗಳಾಗಿ ಮೊದಲ ಬಾರಿಗೆ ದೆಹಲಿಗೆ ಹೋಗುತ್ತಿದ್ದಾರೆ. ಉಪಮುಖ್ಯಮಂತ್ರಿಯಾಗಿದ್ದಾಗಲೂ ಜೊತೆಯಲ್ಲಿ ಹೋಗಿದ್ದೆವು. ಮುಖ್ಯಮಂತ್ರಿಗಳ ಜೊತೆಗೆ ಒಂದು ಬಾರಿ ಹೋಗಬೇಕು ಎಂಬ ಕಾರಣಕ್ಕೆ ಈ ಪ್ರವಾಸದಲ್ಲಿ ಭಾಗಿಯಾಗುತ್ತಿದ್ದೇನೆ ಎಂದು ಹೇಳಿದರು.

ತಮ್ಮ ತಂದೆ ಎನ್.ಎ. ಹ್ಯಾರಿಸ್ ಅವರಿಗೆ ಸಚಿವ ಸ್ಥಾನ ನೀಡುವ ಕುರಿತು ಪ್ರತಿಕ್ರಿಯಿಸಿದ ಅವರು, ನನಗೆ ಕಾಂಗ್ರೆಸ್ ಸರ್ಕಾರದ ಮೇಲೆ ನೂರಕ್ಕೆ ನೂರರಷ್ಟು ವಿಶ್ವಾಸವಿದೆ. ನನ್ನ ತಂದೆ ನಾಲ್ಕನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಉತ್ತಮ ಕೆಲಸ ಮಾಡಿದ್ದಾರೆ. ಬಿಡಿಎ ಅಧ್ಯಕ್ಷರಾಗಿದ್ದಾಗಲೂ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಅವರಿಗೆ ಒಂದು ಅವಕಾಶ ನೀಡಿದರೆ ಪಕ್ಷಕ್ಕೂ ಒಳ್ಳೆಯ ಹೆಸರು ತರುತ್ತಾರೆ ಎಂಬ ನಂಬಿಕೆ ಇದೆ ಎಂದರು.

ಅಲ್ಪಸಂಖ್ಯಾತ ಸಮುದಾಯಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕೆಂದು ಪಕ್ಷದ ನಾಯಕರಿಗೆ ಮನವಿ ಮಾಡಿದ್ದೇವೆ. ಈ ಬಾರಿ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ನಲಪಾಡ್ ಹೇಳಿದರು.

ಬಿಟ್‌ಕಾಯಿನ್ ಪ್ರಕರಣದ ಕುರಿತು ಸ್ಪಷ್ಟನೆ

ಬಿಟ್‌ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್ ಬಂದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ನಲಪಾಡ್, ನನಗೆ ಯಾವುದೇ ನೋಟಿಸ್ ಬಂದಿಲ್ಲ. ಚಾರ್ಜ್‌ಶೀಟ್ ಕೂಡ ಬಂದಿಲ್ಲ. ನಿಮಗೆ ಈ ಮಾಹಿತಿ ಹೇಗೆ ಗೊತ್ತಾಯಿತು? ನಮ್ಮ ಬೆಳವಣಿಗೆ ಇಷ್ಟಪಡದ ಕೆಲವರು ಸಚಿವ ಸ್ಥಾನ ತಪ್ಪಿಸಲು ನೋಟಿಸ್ ಬಂದಿದೆ ಎಂದು ಸುಳ್ಳು ಸುದ್ದಿ ಹರಡುತ್ತಿದ್ದಾರೆ ಎಂದು ಆರೋಪಿಸಿದರು.

Ramesh Babu

Journalist

Recent Posts

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

2 hours ago

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

15 hours ago

ರಾಜಾನುಕುಂಟೆ ಬಳಿ ರೈಲು ಬೋಗಿಗಳಿಗೆ ಬೆಂಕಿ: ಎರಡು ಬೋಗಿಗಳು ಸುಟ್ಟು ಭಸ್ಮ

ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…

20 hours ago

ಮಧುರೆ ಕೆರೆಯಲ್ಲಿ ಮಣ್ಣು ದಂಧೆ ಆರೋಪ: ಸುಮಾರು 35 ಟ್ರ್ಯಾಕ್ಟರ್, 5 ಜೆಸಿಬಿಗಳ ಅಬ್ಬರ; ಮಣ್ಣು ತೆಗೆಯುವುದಕ್ಕೆ ಗ್ರಾಮಸ್ಥರ ಬ್ರೇಕ್!

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್‌ಗಳು…

21 hours ago

ನಮ್ಮ ತೆರಿಗೆ ನಮ್ಮ ಹಕ್ಕು…

ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…

1 day ago

ದೇವನಹಳ್ಳಿ ಬಳಿ ಭೀಕರ ಅಪಘಾತ: ಓರ್ವ ಸಾವು: ಹಲವರಿಗೆ ಗಾಯ

ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…

1 day ago