ಭಾರೀ ಮಳೆಗೆ ರಾಷ್ಟ್ರ ರಾಜಾಧಾನಿ ದೆಹಲಿ ನಲುಗುತ್ತಿದೆ. ದೆಹಲಿ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ -1 ರ ಮೇಲ್ಛಾವಣಿಯ ಒಂದು ಭಾಗ ಕೆಳಗೆ ಸಂಚರಿಸುತ್ತಿದ್ದ ಟ್ಯಾಕ್ಸಿಗಳು ಹಾಗೂ ಕಾರುಗಳ ಮೇಲೆ ಕುಸಿದುಬಿದ್ದಿದೆ. ಇದರ ಪರಿಣಾಮ ಆರು ಮಂದಿ ಗಾಯಗೊಂಡಿದ್ದಾರೆ.
ಮೇಲ್ಛಾವಣಿಯ ಶೀಟ್‌ನ ಹೊರತಾಗಿ, ಸಪೋರ್ಟ್ ಬೀಮ್ ಗಳು ಸಹ ಕುಸಿದಿದ್ದು, ಟರ್ಮಿನಲ್‌ನ ಪಿಕ್-ಅಪ್ ಮತ್ತು ಡ್ರಾಪ್ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರುಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಬೆಳಗ್ಗೆ 5.30ರ ಸುಮಾರಿಗೆ ಮೇಲ್ಛಾವಣಿ ಕುಸಿತ ಕಂಡಿದೆ. ಸ್ಥಳದಲ್ಲಿದ್ದ ಕಾರುಗಳು ಸೇರಿದಂತೆ ಹಲವು ವಾಹನಗಳು ಜಖಂ ಗೊಂಡಿದೆ. ಗಾಯಾಳುಗಳನ್ನು ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆಯ ಪರಿಣಾಮ, ಟರ್ಮಿನಲ್ 1 ರಿಂದ ಎಲ್ಲಾ ನಿರ್ಗಮನಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಜೊತೆಗೆ ಸುರಕ್ಷತಾ ಕ್ರಮವಾಗಿ ಚೆಕ್-ಇನ್ ಕೌಂಟರ್‌ಗಳನ್ನು ಮುಚ್ಚಲಾಗಿದೆ.
ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…
ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…