ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ಬಿಟ್ಟೂ ಬಿಡದೆ ಸುರಿಯುತ್ತಿರುವ ಮಳೆಗೆ ನೂತನ ಸಂಸತ್ ಭವನ ಸೋರುತ್ತಿದೆ.
ಸದ್ಯ ಸಂಸತ್ ಭವನದ ಸುತ್ತಮುತ್ತಲಿನ ಪ್ರದೇಶ ಸಂಪೂರ್ಣ ಜಲಾವೃತಗೊಂಡಿದೆ. ಇದಕ್ಕೆ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.
ಈ ವಿಡಿಯೋವನ್ನು ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಎಕ್ಸ್ನಲ್ಲಿ ವಿಡಿಯೋ ಪೋಸ್ಟ್ ಮಾಡಿ, ಈ ಹೊಸ ಸಂಸತ್ತಿಗಿಂತ ಹಳೆಯ ಸಂಸತ್ತು ಉತ್ತಮವಾಗಿದೆ. ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಕಟ್ಟಿದ ಸಂಸತ್ತಿನಲ್ಲಿ ನೀರು ಸುರಿಯುತ್ತಿರುವವರೆಗೂ ಹಳೆ ಸಂಸತ್ತಿನಲ್ಲಿ ಮತ್ತೆ ಏಕೆ ಕೆಲಸ ಮಾಡಬಾರದು ಎಂದು ಬರೆದಿದ್ದಾರೆ.