ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ: ಎಎಪಿಗೆ ಭಾರಿ ಆಘಾತ: ಮುಖ್ಯಮಂತ್ರಿ ಅಭ್ಯರ್ಥಿ ಅರವಿಂದ್ ಕೇಜ್ರಿವಾಲ್ ಸೋಲು

ಈ ಬಾರಿಯ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಎಎಪಿಗೆ ಭಾರಿ ಆಘಾತ ಉಂಟಾಗಿದೆ. ಪಕ್ಷದ ಸಂಚಾಲಕ ಹಾಗೂ ಮುಖ್ಯಮಂತ್ರಿ ಅಭ್ಯರ್ಥಿ ಅರವಿಂದ್ ಕೇಜ್ರಿವಾಲ್ ಸೋಲು ಅನುಭವಿಸಿದ್ದಾರೆ.

ಚುನಾವಣಾ ಆಯೋಗದ ಮೂಲಗಳ ಪ್ರಕಾರ ಬಿಜೆಪಿ ಅಭ್ಯರ್ಥಿ ಪರ್ವೇಶ್ ಸಿಂಗ್ 28448 ಮತಗಳನ್ನು ಪಡೆದಿದ್ದು, ಅವರ ಪ್ರತಿಸ್ಪರ್ಧಿ ಎಎಪಿ ಮುಖ್ಯಸ್ಥ ಹಾಗೂ ದೆಹಲಿ ಮಾಜಿ ಸಿಎಂ 24583 ಮತಗಳನ್ನು ಪಡೆದಿದ್ದಾರೆ. ಆ ಮೂಲಕ ಕೇಜ್ರಿವಾಲ್ ಒಟ್ಟು 3865 ಮತಗಳ ಅಂತರದಲ್ಲಿ ಸೋತಿದ್ದಾರೆ.

ಕೇಜ್ರಿವಾಲ್ ವಿರುದ್ದ ಸ್ಪರ್ಧಿಸಿದ್ದ ಬಿಜೆಪಿಯ ಪರ್ವೇಶ್ ವರ್ಮಾ ಈ ಮೂಲಕ ದೊಡ್ಡ ಗೆಲುವು ಸಾಧಿಸಿದ್ದು, ಇದು ಪ್ರಮುಖ ರಾಜಕೀಯ ಏರಿಳಿತವನ್ನು ಸೂಚಿಸುತ್ತದೆ.

2013 ರಲ್ಲಿ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕಿ ಮತ್ತು ಅಂದಿನ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರನ್ನೇ ಸೋಲಿಸಿದ್ದ ಕೇಜ್ರಿವಾಲ್ ಆದೇ ಕ್ಷೇತ್ರದಲ್ಲಿ ದಶಕದ ನಂತರ ಸೋತಿದ್ದಾರೆ.

Leave a Reply

Your email address will not be published. Required fields are marked *