ದೇವನಹಳ್ಳಿಯಲ್ಲಿ ಅಕ್ಕ ಬೇಕರಿ, ಕೆಫೆಗೆ ಚಾಲನೆ: ರಾಜ್ಯಾದ್ಯಂತ 50 ಅಕ್ಕ ಬೇಕರಿ, ಕೆಫೆ ಸ್ಥಾಪನೆ: ಮಹಿಳೆಯರ ಸ್ವಾವಲಂಬಿ ಬದುಕಿಗೆ ಅಕ್ಕ ಬೇಕರಿ, ಕೆಫೆ ಸಹಕಾರಿ-ಸಚಿವ ಶರಣ ಪ್ರಕಾಶ ಪಾಟೀಲ್

ಮಹಿಳಾ ಸಬಲೀಕರಣವನ್ನು ಉತ್ತೇಜಿಸಲು ಹಾಗೂ ಮಹಿಳೆಯರ ಸ್ವಾವಲಂಬಿ ಬದುಕಿಗೆ ಉತ್ತೇಜನ ನೀಡಲು ʼಅಕ್ಕ ಕೆಫೆʼ ಸಹಕಾರಿಯಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಸಚಿವರಾದ ಶರಣ ಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಇವರ ವತಿಯಿಂದ ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ದೇವನಹಳ್ಳಿ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ನಿರ್ಮಿತಗೊಂಡಿರುವ ಅಕ್ಕ – ಬೇಕರಿ/ ಕೆಫೆ ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳಾ ಸಬಲೀಕರಣವನ್ನು ಉತ್ತೇಜಿಸಲು ಹಾಗೂ ಮಹಿಳೆಯರ ಸ್ವಾವಲಂಬಿ ಬದುಕಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಉಪಕ್ರಮದ ಅಡಿಯಲ್ಲಿ ʼಅಕ್ಕ ಕೆಫೆʼಯನ್ನು ಪ್ರಾರಂಭಿಸಲಾಯಿತು.

ಮಹಿಳಾ ಸಬಲೀಕರಣದತ್ತ ಮಹತ್ವದ ಹೆಜ್ಜೆಯನ್ನಿಟ್ಟು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್(NRLM), ಕರ್ನಾಟಕ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿಯಲ್ಲಿ ಮೊದಲ ಅಕ್ಕ ಕೆಫೆಯನ್ನು ಬೆಂಗಳೂರಿನಲ್ಲಿ ಪ್ರಾರಂಭಿಸಲಾಗಿದ್ದು, ದೇವನಹಳ್ಳಿಯಲ್ಲಿ 2 ನೇ ಅಕ್ಕ ಕೆಫೆ/ ಬೇಕರಿ ಪ್ರಾರಂಭಿಸಲಾಗಿದೆ. ರಾಜ್ಯಾದ್ಯಂತ 50 ಅಕ್ಕ ಕೆಫೆ ತೆರೆಯಲಾಗುವುದು ಎಂದರು.

ಮಹಿಳೆಯರ ಸಬಲೀಕರಣಕ್ಕೆ ರಾಜ್ಯಾದ್ಯಂತ 2500ಕಾಫಿ ಕೆಫೆ ಸ್ಥಾಪನೆ ಮಾಡುವ ಉದ್ದೇಶವಿದೆ. 3500 ಮಹಿಳೆಯರು ತರಬೇತಿ ಪಡೆದುಕೊಂಡು ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಕೆಲಸ ಮಾಡುತ್ತಿದ್ದಾರೆ. ಮಹಿಳೆಯರ ಸಬಲೀಕರಣ ದೃಷ್ಟಿಯಿಂದ ಗ್ಯಾರಂಟಿ ಯೋಜನೆಗಳ ಜೊತೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳು ಜಾರಿಗೆ ತಂದಿದ್ದೇವೆ ಎಂದರು.

ಸ್ವಸಹಾಯ ಗುಂಪಿಗೆ ಸೇರಿದ 12 ಮಹಿಳೆಯರ ತಂಡವು ಈ ಕೆಫೆಯನ್ನು ನಡೆಸುತ್ತದೆ. ಅಕ್ಕ ಕೆಫೆ ಬೆಳಗ್ಗೆ 09 ರಿಂದ ರಾತ್ರಿ 09 ರ ವರೆಗೆ ವಾರವಿಡಿ ಕಾರ್ಯನಿರ್ಹಿಸಲಿದೆ. ಮತ್ತು ಇಲ್ಲಿ ಆರೋಗ್ಯಕರ, ಸ್ವಾದಿಷ್ಟಕರವಾದ ಆಹಾರ ಲಭ್ಯವಿದ್ದು, ಶುಚಿ-ರುಚಿಯ ಜೊತೆಗೆ ಕೈಗೆಟಕುವ ದರದಲ್ಲಿ ಗ್ರಾಹಕರಿಗೆ ಆಹಾರವನ್ನು ಪೂರೈಸಲಾಗುತ್ತದೆ.
ಧ ಸರ್ಕಾರ ಬಜೆಟ್​​ನಲ್ಲಿ ಘೋಷಣೆ ಮಾಡಿದಂತೆ ಅಕ್ಕ ಕೆಫೆಯು ಕಾರ್ಯರೂಪಕ್ಕೆ ಬಂದಿದೆ ಎಂದರು.

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ವಸಹಾಯ ಗುಂಪುಗಳ ಮೂಲಕ ಮಹಿಳೆಯರನ್ನು ಬಲಗೊಳಿಸಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಮಹಿಳೆಯರು ಸದುಪಯೋಗ ಪಡಿಸಿಕೊಂಡು ಜೀವನ ರೂಪಿಸಿಕೊಳ್ಳಬೇಕು. ಅಕ್ಕ ಕೆಫೆಯು ಒಂದು ಉತ್ತಮ ವೇದಿಕೆಯಾಗಿದ್ದು ಮಹಿಳೆಯರ ಸ್ವಾವಲಂಬಿ ಬದುಕಿಗೆ ಸಹಕಾರಿಯಾಗಲಿದೆ ಎಂದರು.

*ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಸ್ಥಾಪನೆಗೆ ಮನವಿ*
ಜಿಲ್ಲೆಯಲ್ಲಿ ನಿರುದ್ಯೋಗಿಗಳಿಗೆ ಕೌಶಲ್ಯ ಆಧಾರಿತ ತರಬೇತಿ ಅವಶ್ಯಕತೆ ಇದ್ದು ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಸ್ಥಾಪಿಸಬೇಕು ಎಂದು ಸಚಿವರಾದ ಮುನಿಯಪ್ಪ ಅವರು ಮನವಿ ಮಾಡಿದರು. ಇದಕ್ಕೆ ಸಚಿವರಾದ ಶರಣ ಪ್ರಕಾಶ್ ಪಾಟೀಲ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿ ಐಟಿಐ, ಜಿಟಿಟಿಸಿ ಕೇಂದ್ರಗಳನ್ನು ಮೇಲ್ದರ್ಜೆ ಏರಿಸಿ, ಮುಂದಿನ ದಿನಗಳಲ್ಲಿ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರ ಅದು ಶಾಂತಕುಮಾರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ನಾರಾಯಣಸ್ವಾಮಿ, ತಾಲ್ಲೂಕು ಅಧ್ಯಕ್ಷ ಜಗನ್ನಾಥ, ಕೌಶಲ್ಯಾಭಿವೃದ್ಧಿ ಇಲಾಖೆಯ ಅಭಿವೃದ್ಧಿ ಆಯುಕ್ತರಾದ ಉಮಾ ಮಹದೇವನ್, ರಾಷ್ಟ್ರೀಯ ಜೀವನೋಪಾಯ ಅಭಿಯಾನ ನಿರ್ದೇಶಕರಾದ ಪಿ.ಶ್ರೀವಿದ್ಯಾ, ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್, ಜಿ.ಪಂ ಸಿ.ಇ.ಒ ಅನುರಾಧ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಅಧಿಕಾರಿಗಳು ಸ್ವಸಹಾಯ ಗುಂಪುಗಳ ಸದಸ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

7 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

9 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

12 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

13 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

16 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

16 hours ago