ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ, ವಿವಿಧ ವಿಭಾಗಗಳ ಕಾರ್ಯವೈಖರಿಯನ್ನು ಪರಿಶೀಲಿಸಿದರು.

ತಾಲ್ಲೂಕು ಕಚೇರಿಯ ಆರ್‌ಆರ್‌ಟಿ (RRT), ಭೂಸ್ವಾಧೀನ (LND) ಹಾಗೂ ಆಡಳಿತ ಶಾಖೆ ಸೇರಿದಂತೆ ಹಲವು ವಿಭಾಗಗಳಿಗೆ ಭೇಟಿ ನೀಡಿದ ಸಚಿವರು, ಅಲ್ಲಿನ ಕಡತಗಳ ವಿಲೇವಾರಿ ಮತ್ತು ಕಚೇರಿ ಕಾರ್ಯನಿರ್ವಹಣೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಾರ್ವಜನಿಕರ ಕಂದಾಯ ಸಂಬಂಧಿತ ಕೆಲಸಗಳು, ಬಾಕಿ ಇರುವ ಕಡತಗಳು ಹಾಗೂ ಆಡಳಿತಾತ್ಮಕ ಪ್ರಕ್ರಿಯೆಗಳ ಬಗ್ಗೆ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಆಗಮಿಸಿದ್ದ ಸಾರ್ವಜನಿಕರು ಸಚಿವರಿಗೆ ವಿವಿಧ ದೂರುಗಳನ್ನು ಸಲ್ಲಿಸಿದರು. ಕಚೇರಿಯಲ್ಲಿನ ಕೆಲಸಕಾರ್ಯಗಳ ಕುರಿತು ಸಾರ್ವಜನಿಕರಿಂದ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಸಚಿವರ ಭೇಟಿಯ ಸಂದರ್ಭದಲ್ಲೇ ತಹಶೀಲ್ದಾರ್ ಗೈರು

ಕಂದಾಯ ಸಚಿವರು ತಾಲ್ಲೂಕು ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದ ಸಂದರ್ಭದಲ್ಲಿ ದೇವನಹಳ್ಳಿ ತಹಶೀಲ್ದಾರ್ ಕಚೇರಿಯಲ್ಲಿ ಹಾಜರಿರಲಿಲ್ಲ ಎಂಬುದು ಗಮನ ಸೆಳೆಯಿತು.

ಸಾರ್ವಜನಿಕರ ದೂರುಗಳ ಹಿನ್ನೆಲೆಯಲ್ಲಿ ನಡೆದ ಈ ದಿಢೀರ್ ಭೇಟಿಯು ತಾಲ್ಲೂಕು ಕಚೇರಿಯ ಆಡಳಿತ ವ್ಯವಸ್ಥೆ ಮತ್ತು ಕಡತಗಳ ವಿಲೇವಾರಿ ವಿಚಾರದಲ್ಲಿ ಮಹತ್ವ ಪಡೆದಿದೆ.

Leave a Reply

Your email address will not be published. Required fields are marked *

error: Content is protected !!