ದೇವನಹಳ್ಳಿ ತಾ. ಆರೋಗ್ಯಾಧಿಕಾರಿ(THO) ಡಾ.ಸಂಜಯ್(52) ವಿಧಿವಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು ಆರೋಗ್ಯಾಧಿಕಾರಿ(THO) ಡಾ.ಸಂಜಯ್(52) ವಿಧಿವಶರಾಗಿದ್ದಾರೆ.

ವೈದ್ಯರ ಸಮಾವೇಶದಲ್ಲಿ ಭಾಗವಹಿಸಲು ಚನ್ನೈಗೆ ತೆರಳಿದ್ದ ಅವರಿಗೆ ನಿನ್ನೆ ಸಂಜೆ ಸುಮಾರು 7:30ರ ಸುಮಾರಿಗೆ ತೀವ್ರ ಸ್ವರೂಪದ ಹೃದಯಾಘಾತ ಸಂಭವಿಸಿದೆ. ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿ ಆಗದ ಕಾರಣ ಸಾವನ್ನಪ್ಪಿದ್ದಾರೆ.

 ಒಬ್ಬ ಮಗ, ಒಬ್ಬ ಮಗಳು, ಮಡದಿಯನ್ನು ಅಗಲಿದ್ದಾರೆ.

ಬೆಂಗಳೂರು ಜಿಲ್ಲೆಯ ವೈದ್ಯಾಧಿಕಾರಿ ಸಂಘದ ಅಧ್ಯಕ್ಷರಾಗಿದ್ದರು. ವೈದ್ಯರು, ಸಿಬ್ಬಂದಿ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುತ್ತಿದ್ದರು. ಕೋವಿಡ್ ಸಂದರ್ಭದಲ್ಲಿ ಆಕಾಶ್ ಆಸ್ಪತ್ರೆ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೋವಿಡ್ ನಿಯಂತ್ರಣ ಸೇವೆಯ ಜಿಲ್ಲಾ ಸಮನ್ವಯಕರಾಗಿ ಶ್ಲಾಘನೀಯ ಸೇವೆ ಸಲ್ಲಿಸಿದ್ದರು. ಉತ್ತಮ ಆಡಳಿತಗಾರರಾಗಿದ್ದು, ಆರೋಗ್ಯ ಇಲಾಖೆಯಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ್ದರು.

ಇಂದು ಪಾರ್ಥಿವ ಶರೀರವನ್ನು ಬೆಂಗಳೂರಿಗೆ ತರಲಾಗುವುದು ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!