ದೇವನಹಳ್ಳಿ ತಾ. ಆರೋಗ್ಯಾಧಿಕಾರಿ(THO) ಡಾ.ಸಂಜಯ್(52) ವಿಧಿವಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು ಆರೋಗ್ಯಾಧಿಕಾರಿ(THO) ಡಾ.ಸಂಜಯ್(52) ವಿಧಿವಶರಾಗಿದ್ದಾರೆ.

ವೈದ್ಯರ ಸಮಾವೇಶದಲ್ಲಿ ಭಾಗವಹಿಸಲು ಚನ್ನೈಗೆ ತೆರಳಿದ್ದ ಅವರಿಗೆ ನಿನ್ನೆ ಸಂಜೆ ಸುಮಾರು 7:30ರ ಸುಮಾರಿಗೆ ತೀವ್ರ ಸ್ವರೂಪದ ಹೃದಯಾಘಾತ ಸಂಭವಿಸಿದೆ. ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿ ಆಗದ ಕಾರಣ ಸಾವನ್ನಪ್ಪಿದ್ದಾರೆ.

 ಒಬ್ಬ ಮಗ, ಒಬ್ಬ ಮಗಳು, ಮಡದಿಯನ್ನು ಅಗಲಿದ್ದಾರೆ.

ಬೆಂಗಳೂರು ಜಿಲ್ಲೆಯ ವೈದ್ಯಾಧಿಕಾರಿ ಸಂಘದ ಅಧ್ಯಕ್ಷರಾಗಿದ್ದರು. ವೈದ್ಯರು, ಸಿಬ್ಬಂದಿ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುತ್ತಿದ್ದರು. ಕೋವಿಡ್ ಸಂದರ್ಭದಲ್ಲಿ ಆಕಾಶ್ ಆಸ್ಪತ್ರೆ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೋವಿಡ್ ನಿಯಂತ್ರಣ ಸೇವೆಯ ಜಿಲ್ಲಾ ಸಮನ್ವಯಕರಾಗಿ ಶ್ಲಾಘನೀಯ ಸೇವೆ ಸಲ್ಲಿಸಿದ್ದರು. ಉತ್ತಮ ಆಡಳಿತಗಾರರಾಗಿದ್ದು, ಆರೋಗ್ಯ ಇಲಾಖೆಯಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ್ದರು.

ಇಂದು ಪಾರ್ಥಿವ ಶರೀರವನ್ನು ಬೆಂಗಳೂರಿಗೆ ತರಲಾಗುವುದು ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

Ramesh Babu

Journalist

Recent Posts

ಕುಡಿಯುವ ನೀರು ಸಮಸ್ಯೆಗೆ ಸಹಾಯವಾಣಿ ಆರಂಭ

ಬೇಸಿಗೆ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ…

1 hour ago

35 ಸಾವಿರ ಲಂಚದ ಹಣ ಬಿಸಾಕಿ ಎಸ್ಕೇಪ್ – ಕೊನೆಗೂ ಲೋಕಾಯುಕ್ತ ಬಲೆಗೆ ಬಿದ್ದ ಸಹಾಯಕ ಡ್ರಗ್ ಕಂಟ್ರೋಲರ್.!

ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ಲಂಚದ ಹಣ ಬಿಸಾಡಿ ಪರಾರಿಯಾಗಿದ್ದ ಎಫ್‌‌ಡಿಸಿ ಶ್ಯಾಮಲಾ ಹಾಗೂ ಇಬ್ಬರು ಸಹಾಯಕರು ಕೊನೆಗೂ‌ ಲೋಕಾಯುಕ್ತ ಬಲೆಗೆ…

1 hour ago

ಚಿತ್ರದುರ್ಗ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳ ಸಾವು ಪ್ರಕರಣ: ಮೃತರ ಕುಟುಂಬಕ್ಕೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗೇಟ್ ಬಳಿ ಭಾನುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿಗೀಡಾದ ಮೂವರು ರಿಸರ್ವ್ ಸಬ್…

5 hours ago

ಗರಿಗೆದರಿದ “TEAM MSS” ಚಟುವಟಿಕೆ: ಯಾರದ್ದು, ಏನಿದು ‘ಟೀಂ ಎಂಎಸ್ ಎಸ್’….? ಸಂಪೂರ್ಣ ಮಾಹಿತಿಗಾಗಿ ಈ ಸುದ್ದಿಯನ್ನು ಓದಿ….

ಒಂದು ಉಪಚುನಾವಣೆ ಒಳಗೊಂಡಂತೆ ನಾಲ್ಕು ವಿಧಾನಸಭೆ ಚುನಾವಣೆಗಳನ್ನು ಎದುರಿಸಿದ ಬಿ.ಮುನೇಗೌಡ ತಾಲೂಕಿಗೆ ನೀರು, ಕಲ್ಲು ಮುನೇಗೌಡ ಎಂದೇ ಚಿರಪರಿಚಿತರಾಗಿದ್ದಾರೆ...ಇತ್ತೀಚೆಗೆ ನಡೆದ…

8 hours ago

ಇಂದಿನಿಂದ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01 ಆರಂಭ: ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿ ಸ್ವಾಗತಿಸಿದ ಬಿಇಒ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು  ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

11 hours ago

ಯುಗಾದಿ…..

ವಿಶ್ವ ಮಹಾಯುದ್ಧದ ಕಾರ್ಮೋಡಗಳ ನಡುವೆ, ಅತ್ಯಂತ ಅಗತ್ಯದ ಗ್ಯಾಸ್ ಸಿಲಿಂಡರ್ಗಳ ಅಭಾವದ ನಡುವೆ, ಪ್ರಕ್ಷ್ಯುಬ್ಧ ಮನಸ್ಥಿತಿಯ ನಡುವೆ, ಸಂಭ್ರಮದ ಹೊಸ…

13 hours ago