ದೇವನಹಳ್ಳಿ ತಾ. ಭೂಸ್ವಾಧೀನ ವಿವಾದ: ರೈತ ಬಣಗಳೊಂದಿಗೆ ಸಚಿವದ್ವಯರ ಸಭೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಪಾಳ್ಯ 2ನೇ ಹಂತದ ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆ ಸಂಬಂಧಿಸಿದಂತೆ ಭೂಸ್ವಾಧೀನದ ಪರ ಮತ್ತು ವಿರೋಧವಿರುವ ಎರಡೂ ಗುಂಪುಗಳ ರೈತರೊಂದಿಗೆ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ನೇತೃತ್ವದಲ್ಲಿ ಬುಧವಾರ ಇಲ್ಲಿನ ಖನಿಜ ಭವನದಲ್ಲಿ ಪ್ರತ್ಯೇಕ ಸಭೆಗಳು ನಡೆದವು.

ಎರಡೂ ಗುಂಪುಗಳ ಅಹವಾಲುಗಳನ್ನು ಆಲಿಸಿದ ಸಚಿವದ್ವಯರು, ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಹೆಚ್ಚಿನ ಚರ್ಚೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದರು.

ಸರಕಾರವು ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆಂದು ದೇವನಹಳ್ಳಿ ತಾಲ್ಲೂಕಿನ ಪಾಳ್ಯ, ಹರಳೂರು, ಪೋಲನಹಳ್ಳಿ, ಗೋಕರೆಬಜೇನಹಳ್ಳಿ, ನೆಲ್ಲೂರು, ಮಲ್ಲೇಪುರ, ನಲ್ಲಪ್ಪನಹಳ್ಳಿ, ಚೀಮಾಚನಹಳ್ಳಿ, ಮಟ್ಟಿಬಾರ್ಲು, ಮುದ್ದೇನಹಳ್ಳಿ, ಚನ್ನರಾಯಪಟ್ಟಣ, ಶೋತ್ರಿಯ ತೆಲ್ಲೂಹಳ್ಳಿ ಮತ್ತು ಹ್ಯಾಡಾಳ ಗ್ರಾಮಗಳಿಗೆ ಸೇರಿದ 1777 ಎಕರೆ ಜಮೀನನ್ನು ಸ್ವಾಧೀನ ಪಡಿಸಿಕೊಳ್ಳಲು 2021ರ ಆಗಸ್ಟ್ 30ರಂದು ಪ್ರಾಥಮಿಕ ಅಧಿಸೂಚನೆ ಹೊರಡಿಸಿರುವುದನ್ನು ಇಲ್ಲಿ ಸ್ಮರಿಸಬಹುದು.

ಆದರೆ ಸರಕಾರದ ಈ ನಿರ್ಧಾರಕ್ಕೆ ರೈತರ ಒಂದು ಗುಂಪು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು, ಮೇಲ್ಕಂಡ ಅಧಿಸೂಚನೆಯನ್ನು ಹಿಂತೆಗೆದುಕೊಳ್ಳಬೇಕು ಎಂದು ಆಗ್ರಹಿಸುತ್ತಿದೆ. ರೈತರ ಮತ್ತೊಂದು ಗುಂಪು, ಜಮೀನನ್ನು ಬಿಟ್ಟುಕೊಡಲು ತಯಾರಿದ್ದು, ಸ್ವಾಧೀನ ಪ್ರಕ್ರಿಯೆ ಮತ್ತು ಹೆಚ್ಚಿನ ಪರಿಹಾರ ಹಂಚಿಕೆ ಎರಡನ್ನೂ ತ್ವರಿತ ಗತಿಯಲ್ಲಿ ಮುಗಿಸುವಂತೆ ಕೇಳಿಕೊಳ್ಳುತ್ತಿದೆ. ಹೀಗೆ ಮಾಡದೆ ಹಾಗೆಯೇ ಬಿಟ್ಟರೆ ತಮ್ಮದು ತ್ರಿಶಂಕು ಸ್ಥಿತಿಯಾಗಲಿದೆ ಎಂದು ಈ ಗುಂಪಿನವರು ಸಭೆಯಲ್ಲಿ ಅಲವತ್ತುಕೊಂಡರು.

ಸಭೆಗಳಲ್ಲಿ ಭೂಸ್ವಾಧೀನಕ್ಕೆ ವಿರುದ್ಧವಾಗಿರುವ ಗುಂಪಿನ ರೈತ ಮುಖಂಡರಾದ ಬಯ್ಯಾರೆಡ್ಡಿ, ಮಾವಳ್ಳಿ ಶಂಕರ್ ಹಾಗೂ ಪರವಾಗಿರುವ ಗುಂಪಿನ ಮುಖಂಡ ಲಕ್ಷ್ಮೀನಾರಾಯಣ ನೇತೃತ್ವದ ರೈತರು ಭಾಗವಹಿಸಿದ್ದರು.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ಕೆಐಎಡಿಬಿ ಸಿಇಒ ಡಾ.ಮಹೇಶ್ ಉಪಸ್ಥಿತರಿದ್ದರು.

Ramesh Babu

Journalist

Recent Posts

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

3 hours ago

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…

5 hours ago

ಹಸಿವಿನ ಔಷಧಿ ಮತ್ತು ಮತದಾನ…..

ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…

8 hours ago

ಶಾಲಾ ಆವರಣ ಸುತ್ತಮುತ್ತ ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ: 9 ಕೆಜಿ ತಂಬಾಕು ಉತ್ಪನ್ನ, ನಿರ್ಬಂಧಿತ ಏಕಬಳಕೆ ಪ್ಲಾಸ್ಟಿಕ್ ಪತ್ತೆ: ಅಂಗಡಿ ಮಾಲೀಕರಿಗೆ ನೋಟಿಸ್ ಜಾರಿ ಮಾಡಿ, ದಂಡ ವಿಧಿಸಿದ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…

19 hours ago

ವಕೀಲ ಪ್ರತಾಪ್ ಜಮೀನು ವ್ಯಾಜ್ಯಕ್ಕೆ ಬಿಗ್ ಟ್ವಿಸ್ಟ್: ‘ಕಾಂಪೌಂಡ್ ನಿರ್ಮಾಣಕ್ಕೆ ಅಡ್ಡಿಪಡಿಸಲು ಹೇಳಿದ್ದೇ ಶಾಸಕ ಧೀರಜ್ ಮುನಿರಾಜ್’- ವಕೀಲ ಪ್ರತಾಪ್ ಗಂಭೀರ ಆರೋಪ

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

19 hours ago

ಸೋಲು – ಸಾವು – ಭಯ – ಬದುಕು……

"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…

1 day ago