ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಶಿವಕುಮಾರ್ ನಾಯಕ್ ಮೃತಪಟ್ಟಿರುವ ಘಟನೆ ದೇವನಹಳ್ಳಿ ಹೊರವಲಯದ ರಾಣಿ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ 648ರಲ್ಲಿ ನಡೆದಿದೆ.
ದೇವನಹಳ್ಳಿ-ದಾಬಸ್ಪೇಟೆ ಮಾರ್ಗದ ಎಸ್ಟಿಆರ್ಆರ್ (STRR) ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಮೊಳಕಾಲ್ಮೂರಿನಲ್ಲಿ ಆಯೋಜಿಸಿದ್ದ ವೀರ ಮದಕರಿ ಕಾರ್ಯಕ್ರಮಕ್ಕೆ ಸ್ನೇಹಿತರೆಲ್ಲರು ಸೇರಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಲಾರಿಯನ್ನು ಹಿಂದಿಕ್ಕಲು (ಓವರ್ಟೇಕ್) ಪ್ರಯತ್ನಿಸಿದ ಸಂದರ್ಭದಲ್ಲಿ ಕಾರು ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು, ಡಿಕ್ಕಿಯ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನ ಚಾಲಕನ ಪಕ್ಕದ ಆಸನದಲ್ಲಿ ಕುಳಿತಿದ್ದ ಶಿವಕುಮಾರ್ ನಾಯಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಾರಿನಲ್ಲಿದ್ದ ಪವನ್, ಪ್ರದೀಪ್, ಚಂದನ್ ಹಾಗೂ ವಿನೋದ್ ಕುಮಾರ್ ಪ್ರಾಣಾಪಾಯದಿಂದ ಪಾರಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ದೇವನಹಳ್ಳಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…
ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳ ವಿವಿಧ ವೇದಿಕೆಗಳಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಡಿಯೋಗೆ ನನ್ನ ಹೆಸರನ್ನು ಜೋಡಿಸಿ ಅಪಪ್ರಚಾರ…
ಅಕ್ಟೋಬರ್ 26 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ, ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ…
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ತೀರ್ಪಿನ ಕುರಿತು ಸಚಿವ ಸಂಪುಟದಲ್ಲಿ ಸಮಗ್ರವಾಗಿ…
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಐದು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿದ್ದು, ಮೂರು ರಾಜ್ಯಗಳ ರಾಜ್ಯಪಾಲರ ಹುದ್ದೆಗಳಲ್ಲಿ ಬದಲಾವಣೆ…
ದೊಡ್ಡಬಳ್ಳಾಪುರ: ಹುಟ್ಟುಹಬ್ಬವನ್ನು ವೈಯಕ್ತಿಕ ಸಂಭ್ರಮಕ್ಕೆ ಸೀಮಿತಗೊಳಿಸದೆ, ಸಮಾಜಮುಖಿ ಸೇವಾ ಕಾರ್ಯಗಳ ಮೂಲಕ ಆಚರಿಸಿದಾಗ ಅದಕ್ಕೆ ವಿಶೇಷ ಅರ್ಥ ಬರುತ್ತದೆ ಎಂದು…