ದೇವನಹಳ್ಳಿ ಸರ್ಕಾರಿ ಶಾಲೆಯ ಕಿಟಕಿ ಛಾವಣಿ ಕುಸಿದು ವಿದ್ಯಾರ್ಥಿಗಳಿಗೆ ಗಾಯ ಪ್ರಕರಣ: ಸ್ಥಳಕ್ಕೆ ಮಕ್ಕಳ ಆಯೋಗದ ಅಧ್ಯಕ್ಷರಾದ ನಾಗಣ್ಣ ಗೌಡ ಭೇಟಿ, ಪರಿಶೀಲನೆ

ದೇವನಹಳ್ಳಿಯ ಕೋಟೆ ಬೀದಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆ ಕಟ್ಟಡದ ಕಿಟಕಿ ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳು ಸೋಮವಾರ ಗಾಯಗೊಂಡಿದ್ದರು.

ಈ ಹಿನ್ನೆಲೆಯಲ್ಲಿ ಇಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ನಾಗಣ್ಣಗೌಡ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ನಂತರ ಮಾತನಾಡಿದ ಅವರು ನಮ್ಮ ಸರ್ಕಾರ ಮತ್ತು ಆಯೋಗವು ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆಯನ್ನು ನೀಡುತ್ತೇವೆ, ಆದರೆ ಸಿ.ಎಸ್.ಆರ್ ಅನುದಾನದಲ್ಲಿ ನಿರ್ಮಿಸಿರುವ ಶಾಲಾ ಕಟ್ಟಡದ ಕಾಮಗಾರಿ ಸರಿಯಾಗಿ ಮಾಡಿಲ್ಲ, ಶಾಲೆಯ ಗೋಡೆಗೆ ಮತ್ತು ಸಜ್ಜೆಗೆ ಯಾವುದೇ ರೀತಿಯ ಲಿಂಕ್ ಇಲ್ಲದೆ ಕಟ್ಟಿದ್ದಾರೆ, ಕಂಬಿ ಕಟ್ಟದೆ ಸುಮ್ಮನೆ ಎರಡು ಇಂಚು ಇಟ್ಟಿಗೆ ಸಿಮೆಂಟ್ ಹಾಕಿ ಬಿಟ್ಟಿದ್ದಾರೆ, ಇದು ಹೆಚ್ಚಿನ ದಿನಗಳು ನಿಲ್ಲುವುದಿಲ್ಲ, ಆದರೆ ಇಷ್ಟು ವರ್ಷ ಹೇಗೆ ತಡೆದಿತ್ತು ಎನ್ನುವುದು ಆಶ್ಚರ್ಯ, ಈ ರೀತಿ ಆಗದಂತೆ ಮುಂದೆ ನೋಡಿಕೊಳ್ಳಬೇಕು.

ಶಿಕ್ಷಕರು ಸಹ ನಮಗೆ ತಿಳಿಸಿದ್ದಾರೆ, ಮುಂಜಾಗ್ರತೆ ಕ್ರಮ ವಹಿಸಿದ್ದರೆ ಇಷ್ಟೆಲ್ಲಾ ಅನಾಹುತಗಳು ಆಗುತ್ತಿರಲಿಲ್ಲ, ನಮಗೆ 2016ರಲ್ಲಿ ಕೆಲವು ಸ್ವಯಂ ಸೇವಾ ಸಂಸ್ಥೆಗಳು ಈ ರೀತಿ ಕಾಮಗಾರಿ ಮಾಡುವ ಬಗ್ಗೆ ದೂರು ನೀಡುತ್ತಾರೆ. ಮಕ್ಕಳು ನಮ್ಮ ದೇಶದ ಆಸ್ತಿ, ಅದಕ್ಕಾಗಿ ಗುಣಮಟ್ಟದ ಕಾಮಗಾರಿ ಮಾಡಬೇಕು, ಆದರೆ ಅವರು ಕಟ್ಟಡ ಕಾಮಗಾರಿ ಮಾಡುವ ಇಂಜಿನಿಯರ್ ಗಳು ಬೇಜವಾಬ್ದಾರಿ ಕೆಲಸ ಮಾಡಿದ್ದಾರೆ.

ಶಾಲೆಯಲ್ಲಿ ಮಕ್ಕಳು ಓದುವುದಕ್ಕೆ ಬರುತ್ತಾರೆ ಎನ್ನುವುದನ್ನು ಗಮನದಲ್ಲಿ ಇಟ್ಟುಕೊಂಡು ಕೆಲಸ ಮಾಡಬೇಕು, ಮೂರು ಮಕ್ಕಳಿಗೆ ಬೇಕಾದ ಚಿಕಿತ್ಸಾ ವೆಚ್ಚವನ್ನು ಸರಕಾರ ಭರಿಸಲಿದೆ. ಇದು ದುಃಖಕರ ಸಂಗತಿ, ಈಗಾಗಲೇ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಎಲ್ಲಾ ಹಳೆ ಮತ್ತು ಹೊಸ ಶಾಲೆಗಳ ಕಟ್ಟಡದ ಗುಣಮಟ್ಟವನ್ನು ಪರಿಶೀಲನೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರನ್ನು ಒದಗಿಸಲು ಉಮಾ ಮಹಾದೇವನ್ ಅವರು ಹಲವಾರು ಕಾರ್ಯಕ್ರಮಗಳನ್ನು ಮಾಡಿದ್ದಾರೆ.

ನಾವು ಮಕ್ಕಳ ಸುರಕ್ಷತೆಗೆ ಮೊದಲು ಆದ್ಯತೆ ನೀಡುತ್ತೇವೆ. ಹಾಗೇ ಮಕ್ಕಳಿಗೆ ಉತ್ತಮ ಗುಣಮಟ್ಟದ ಬಿಸಿಯೂಟವನ್ನು ನೀಡುವಾಗ ಶುಚಿತ್ವವನ್ನು ಕಾಪಾಡಬೇಕು, ಮಕ್ಕಳಿಗೆ ಕುಡಿಯುವ ನೀರು ಮತ್ತು ಉತ್ತಮ ಗುಣಮಟ್ಟದ ಊಟವನ್ನು ನೀಡಿದರೆ ಕ್ರೀಡೆಗಳಲ್ಲಿ ಭಾಗವಹಿಸುವಿಕೆ ಹಾಗೂ ಶಿಕ್ಷಣದಲ್ಲಿ ಉತ್ತಮವಾಗಿ ಕಲಿಯುತ್ತಾರೆ. ಸೇವಾ ಮನೋಭಾವನೆ ಮನಸ್ಥಿತಿಯಿಂದ ಶಾಲಾ ಕಟ್ಟಡ ನಿರ್ಮಿಸಬೇಕು. ಇದಕ್ಕೆ ಸಂಬಂಧಪಟ್ಟ ಅಧಿಕಾರಗಳೊಂದಿಗೆ ಸಭೆ ನಡೆಸಿ ಇನ್ನೂ ಮುಂದೆ ಈ ರೀತಿ ಆಗದಂತೆ ಇಂತವಹರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬೈಲಾಂಜನಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಲಲಿತಮ್ಮ ಸೇರಿದಂತೆ ಶಾಲಾ ಮುಖ್ಯಸ್ಥರು, ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

10 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

14 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

17 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

19 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

1 day ago