ದೇವರಾಜು ಅರಸು ಸಾಮಾಜಿಕ ಕ್ರಾಂತಿಯ ಹರಿಕಾರ- ಅನಿತಾ ಲಕ್ಷ್ಮಿ

ಎರಡು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ದೇವರಾಜು ಅರಸು ಸಾಮಾಜಿಕ ಕ್ರಾಂತಿಯ ಹರಿಕಾರರಾಗಿದ್ದರು. ಹಿಂದುಳಿದ ವರ್ಗ, ದಲಿತ, ಶೋಷಣೆಗೆ ಒಳಗಾಗಿದ್ದವರ ಪರವಾಗಿ ಧ್ವನಿಯಾಗಿ ಕೆಲಸ ಮಾಡಿದವರು ದಿ.ದೇವರಾಜು ಅರಸು ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕಿ ನಿರ್ದೇಶಕಿ ಅನಿತಾ ಲಕ್ಷ್ಮಿ ತಿಳಿಸಿದರು.

ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಭಾನುವಾರ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ದೇವರಾಜು ಅರಸು 108ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಶ್ರೀಮಂತ ಅರಸು ಮನೆತನದಲ್ಲಿ ಹುಟ್ಟಿದರೂ ಸಾಮಾನ್ಯ ರೈತನಾಗಿ ಬದುಕಿ, ತಳ ಸಮುದಾಯದ ಏಳಿಗೆಗೆ ದೇವರಾಜ ಅರಸು ಶ್ರಮಿಸಿದರು ಎಂದರು.

ಅವರ ತತ್ವ–ಸಿದ್ಧಾಂತವನ್ನು ನಾವೆಲ್ಲಾ ಅಳವಡಿಸಿಕೊಳ್ಳಬೇಕು. ಮನುಷ್ಯರನ್ನು ಮನುಷ್ಯರನ್ನಾಗಿ ನೋಡಬೇಕು. ಜೀತ ಹಾಗೂ ಮಲ ಹೊರುವ ಪದ್ಧತಿಯ ನಿರ್ಮೂಲನೆಗೆ ಅರಸು ಶ್ರಮಿಸಿದರು. ಅವರು ನೀಡಿದ ಕೊಡುಗೆಗಳು ಮಾದರಿಯಾಗಿವೆ. ಹೊಲ ಉಳುವವನೇ ಒಡೆಯ ಎಂದು ನೊಂದವರ ಧ್ವನಿಯಾಗಿ, ನಿರಾಶ್ರಿತರಿಗೆ ಆಶ್ರಯ ಕೊಟ್ಟರು. ಕೆಳವರ್ಗದವರ ಬಾಳಿಗೆ ಬೆಳಕಾದರು ಎಂದು ಸ್ಮರಿಸಿದರು

ಈ ವೇಳೆ ಗ್ರೇಡ್ -2 ತಹಶಿಲ್ದಾರ್ ಪ್ರಕಾಶ್, ಸಿಬ್ಬಂದಿ ಸುರೇಶ್, ನರಸಿಂಹಮೂರ್ತಿ, ಬಾಬು ಸೇರಿದಂತೆ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *