Categories: ಕೋಲಾರ

ದೇವರಿಗಿಂತ ಪೌರಕಾರ್ಮಿಕರು ಶ್ರೇಷ್ಠ ಅವರಿಂದಾಗಿ ನೆಮ್ಮದಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ದೇವರಿಗೆ ನಮಸ್ಕಾರ ಹಾಕುವ ‌ಬದಲು ಪೌರಕಾರ್ಮಿಕರಿಗೆ ನಮಿಸಬೇಕು. ಏಕೆಂದರೆ‌ ನಾವೆಲ್ಲಾ ಆರೋಗ್ಯವಂತರಾಗಿರಲು ಕಾರಣ ಪೌರಕಾರ್ಮಿಕರು. ಅವರು ನಮ್ಮ ಸುತ್ತಮುತ್ತಲಿನ ‌ಪರಿಸರ ಸ್ವಚ್ಛಗೊಳಿಸದಿದ್ದರೆ ಜನರಿಗೆ ಕಾಯಿಲೆ ‌ಬಂದು ಆಸ್ಪತ್ರೆಗಳು ಭರ್ತಿಯಾಗಿರುತ್ತಿದ್ದವು ಎಂದು ಶಾಸಕ ಕೊತ್ತೂರು ಮಂಜುನಾಥ್ ಹೇಳಿದರು.

ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಮಂಗಳವಾರ ನಗರಸಭೆಯಿಂದ ಹಮ್ಮಿಕೊಂಡಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು ಪೌರಕಾರ್ಮಿಕರು ನಿತ್ಯ ನಮ್ಮ ಮನೆ ಕಸ‌ ಸಂಗ್ರಹಿಸುತ್ತಾರೆ. ಜೊತೆಗೆ ಸುತ್ತಮುತ್ತಲಿನ ಪ್ರದೇಶ ಶುದ್ಧ ಮಾಡುತ್ತಾರೆ. ಅವರು ಮಾಡುವಷ್ಟು ಶುದ್ಧವಾದ ಕೆಲಸ ಬೇರೆ ಯಾರೂ ಮಾಡಲ್ಲ ಎಂದರು.

ಪೌರಕಾರ್ಮಿಕರು ಪ್ರತಿ ಎರಡು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ‌ಮಾಡಿಸಿಕೊಳ್ಳಬೇಕು. ನಗರಸಭೆಯಿಂದ ಆರೋಗ್ಯ ‌ಶಿಬಿರ ಹಮ್ಮಿಕೊಳ್ಳಬೇಕು‌ ಸರ್ಕಾರ ಹಾಗೂ ಜನಪ್ರತಿನಿಧಿಗಳು ಸದಾ ಪೌರಕಾರ್ಮಿಕರ ಪರ ಇರುತ್ತೇವೆ. ಪೌರಕಾರ್ಮಿಕರನ್ನು ಕಾಯಂ ಮಾಡಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ. ನಾನು ಕೂಡ ಪೌರಕಾರ್ಮಿಕರ ಯಾವುದೇ ಕೆಲಸ‌ ಮಾಡಿಕೊಡಲು ಬದ್ಧ ಎಂದರು.

ಯಾರೂ ಕಸವನ್ನು ರಸ್ತೆಯಲ್ಲಿ ಎಸೆಯಬಾರದು. ಮನೆಯ ಬಳಿ ಬರುವ ಗಾಡಿಗೆ‌ ನೀಡಬೇಕು. ಎಲ್ಲೆಂದರಲ್ಲಿ ‌ಕಸ‌ ಹಾಕುವವರ ಮೇಲೆ ಕಣ್ಣಿಡಲು ಒಂದು ವಿಶೇಷ ತಂಡ ರಚಿಸಲಾಗುವುದು ಎಂದು ತಿಳಿಸಿದರು.

ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ನೂರು ಜನ ನೂರು ರೀತಿ ಮಾತನಾಡುತ್ತಾರೆ. ಆದರೆ, ನಾನು ಅದಕ್ಕೆಲ್ಲಾ ‌ಕೇರ್ ಮಾಡಲ್ಲ. ಅಭಿವೃದ್ಧಿಯತ್ತ ಗಮನ ಹರಿಸುತ್ತೇನೆ ಕುಡಾದಿಂದ‌ ನಗರದಲ್ಲಿ ಎರಡು ಸರ್ಕಲ್ ಅಭಿವೃದ್ಧಿ ಮಾಡಲಾಗುವುದು. ಶ್ರೀನಿವಾಸಪುರದ ರಸ್ತೆಯ ಬಂಬೂ ಬಜಾರ್ ಸರ್ಕಲ್ ಅಭಿವೃದ್ಧಿ ಮಾಡುತ್ತೇವೆ. ಎಪಿಎಂಸಿ ಬಳಿ ಮಾಲೂರು ರಸ್ತೆಯಲ್ಲಿ ಸರ್ಕಲ್ ಅಭಿವೃದ್ಧಿ ಮಾಡುತ್ತೇವೆ. 4 ಕೋಟಿ ವೆಚ್ಚದಲ್ಲಿ ಕೋಡಿಕಣ್ಣೂರು ‌ಕೆರೆ‌ ಅಭಿವೃದ್ಧಿ ಮಾಡಲಾಗುವುದು.‌ ಕೋಲಾರಮ್ಮ ದೇಗುಲ ‌ಬಳಿ ಅಭಿವೃದ್ಧಿ ಕೆಲಸ ನಡೆಯುತ್ತಿದೆ. ಪಾದಚಾರಿ ಮಾರ್ಗ ಅಭಿವೃದ್ಧಿ ಮಾಡಿಸಲಾಗುತ್ತಿದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಸಂಸದ ಎಂ. ಮಲ್ಲೇಶ್ ಬಾಬು ಮಾತನಾಡಿ, ಇಂದು ಪೌರಕಾರ್ಮಿಕರ ಹಬ್ಬ, ಅವರನ್ನು ಗೌರವವಾಗಿ ಕಾಣಬೇಕು. ವರ್ಷವಿಡೀ ಕೆಲಸ‌ ಮಾಡುವ ಅವರಿಗೆ‌ ಸಿಗುವುದೇ ಒಂದು ದಿನ. ನಾವೆಲ್ಲಾ ಹಬ್ಬ‌ ಮಾಡುವಾಗ ಅವರು ಕಸ ಎತ್ತುವುದರಲ್ಲಿ ನಿರತರಾಗಿರುತ್ತಾರೆ. ಈ ಕಾರ್ಯಕ್ರಮಕ್ಕೆ ಎಲ್ಲಾ ಪೌರಕಾರ್ಮಿಕರನ್ನು ಕರೆಯಬೇಕಿತ್ತು. ಇವತ್ತು ಒಂದು ದಿನವಾದರೂ ಅವರಿಗೆ ಯಾವುದೇ ಕೆಲಸ‌ ಕೊಡಬಾರದಿತ್ತು ಎಂದು ಹೇಳಿದರು.

ಕೋಲಾರ ನಗರವನ್ನು ಸಚ್ಛ ನಗರ ಮಾಡಬೇಕು. ಈ ಸಂಬಂಧ ನಗರಸಭೆಯಿಂದ ಪ್ರಸ್ತಾಪ‌ ಇಟ್ಟರೆ ಕೇಂದ್ರ ‌ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯಿಂದ ನಾನು ಅಗತ್ಯ ಸೌಲಭ್ಯ ತಂದು ಕೊಡುತ್ತೇನೆ. ಪೌರಕಾರ್ಮಿಕರ ಏಳಿಗೆಗೆ ಸಾಕಷ್ಟು ಸವಲತ್ತುಗಳು ಇವೆ. ಅವುಗಳನ್ನು ಬಳಸಿಕೊಳ್ಳುವ ಜವಾಬ್ದಾರಿ ತಮ್ಮದು ಎಂದರು.

ಪೌರಕಾರ್ಮಿಕರು ಇಲ್ಲ ಎಂದರೆ ನಗರ ನೈರ್ಮಲ್ಯ ಇರಲ್ಲ. ಅನಾರೋಗ್ಯ ಕಾಡುತ್ತದೆ. ಪೌರಕಾರ್ಮಿಕರ ಆರೋಗ್ಯ ಕಾಪಾಡುವ ಜವಾಬ್ದಾರಿ ನಮ್ಮದು. ದೇವರಾಜು ಅರಸು ವೈದ್ಯಕೀಯ ಕಾಲೇಜಿನಲ್ಲಿ ವಿಶೇಷ ಚಿಕಿತ್ಸೆ ಬೇಕಿದ್ದರೆ ನಾನು ಮಾತನಾಡಿ ವ್ಯವಸ್ಥೆ ಮಾಡಿಸಿಕೊಡುತ್ತೇನೆ ಎಂದು ಹೇಳಿದರು.

ನಿವೃತ್ತ ಪೌರಕಾರ್ಮಿಕರನ್ನು ಈ ಸಂದರ್ಭದಲ್ಲಿ ‌ಸನ್ಮಾನಿಸಲಾಯಿತು. ಕ್ರೀಡಾಕೂಟದಲ್ಲಿ ಗೆದ್ದ ಪೌರಕಾರ್ಮಿಕರಿಗೆ ಬಹುಮಾನ ವಿತರಿಸಲಾಯಿತು.

ನಗರಸಭೆ ಆಯುಕ್ತ‌ ನವೀನ್ ಚಂದ್ರ ಪ್ರಾಸ್ತಾವಿಕವಾಗಿ ಮಾತನಾಡಿದರು.

ನಗರಸಭೆ ಅಧ್ಯಕ್ಷೆ ಲಕ್ಷ್ಮಿದೇವಮ್ಮ, ಉಪಾಧ್ಯಕ್ಷೆ ಸಂಗೀತಾ, ಜಿಲ್ಲಾ ಗ್ಯಾರಂಟಿ ಅಧ್ಯಕ್ಷ ವೈ.ಶಿವಕುಮಾರ್, ಕುಡಾ ಅಧ್ಯಕ್ಷ ಮೊಹಮ್ಮದ್ ಹನೀಫ್, ಸ್ಥಾಯಿ ಸಮಿತಿ ಅಧ್ಯಕ್ಷ ಫೈರೋಜ್ ಖಾನ್, ನಗರಸಭೆ ಸದಸ್ಯರಾದ ಪ್ರವೀಣ್ ಗೌಡ, ರಾಕೇಶ್, ಪ್ರಸಾದ್ ಬಾಬು, ಮಂಜುನಾಥ್, ನಗರಸಭೆ ಇನ್ನಿತರ ಸದಸ್ಯರು, ಸಿಬ್ಬಂದಿ,‌‌ ಅಧಿಕಾರಿ ಹಾಗೂ ಪೌರಕಾರ್ಮಿಕರು ಇದ್ದರು.

Ramesh Babu

Journalist

Recent Posts

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

3 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

5 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

8 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

9 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

21 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

21 hours ago