ದೇವಸ್ಥಾನದಲ್ಲಿ ಕಳ್ಳನ ಕೈಚಳಕ: ಬೈಕ್ ಸಮೇತ ಕಳ್ಳನ ಬಂಧನ

ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ ಗ್ರಾಮೀಣ ಪೊಲೀಸರು 24 ಗಂಟೆ ಕಳೆಯುವುದರೊಳಗಾಗಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಯಿಂದ ಕಳ್ಳತನಕ್ಕೆ ಬಳಸಿದ ಬೈಕ್ ಮತ್ತು ಕಳವು ಮಾಡಿದ್ದ ₹1.10 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತ ಆರೋಪಿಯನ್ನು ಹನೀಫಾಬಾದ್‌ನ ನೆರ್ಲೆಸರ ನಿವಾಸಿ ಸೈಯದ್ ಯೂನುಸ್ ಸೈಯದ್ ಅಹ್ಮದ್ ಎಂದು ಗುರುತಿಸಲಾಗಿದೆ.

ಭಾನುವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ದೇವಸ್ಥಾನದ ಬಾಗಿಲನ್ನು ಮುರಿದು ಒಳನುಗ್ಗಿದ ಆರೋಪಿ, ದೇವಸ್ಥಾನದಲ್ಲಿದ್ದ ತಾಮ್ರದ ಕೊಡ, ಹರಿವಾಣ ಸೇರಿದಂತೆ ಪೂಜಾ ಪರಿಕರಗಳನ್ನು ಕದ್ದೊಯ್ದು ಪರಾರಿಯಾಗಿದ್ದ.

ಈ ದೇವಸ್ಥಾನವು ತೆಂಗಿನಗುಂಡಿ ನಿವಾಸಿ ಮಾದೇವ ಅಚ್ಯುತ್ ಪ್ರಭು ಅವರ ಕುಟುಂಬಕ್ಕೆ ಸೇರಿದ್ದಾಗಿದ್ದು, ಭಾನುವಾರ ಬೆಳಿಗ್ಗೆ ಕುಟುಂಬದ ಮಹಿಳೆಯೊಬ್ಬರು ಪೂಜೆಗೆ ಬಂದಾಗ ಕಳ್ಳತನ ನಡೆದಿರುವುದು ಗಮನಕ್ಕೆ ಬಂದಿದೆ.

ಕೂಡಲೇ ಅವರು ಕುಟುಂಬದವರಿಗೆ ಮತ್ತು ಊರ ಜನರಿಗೆ ಮಾಹಿತಿ ನೀಡಿದ್ದಾರೆ. ಜನ ಸ್ಥಳಕ್ಕೆ ಬರುವಷ್ಟರಲ್ಲಿ ಆರೋಪಿ ಅಲ್ಲಿಂದ ಪರಾರಿಯಾಗಿದ್ದನು.

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಆರೋಪಿ ನ್ಯಾಯಾಂಗ ಬಂಧನಕ್ಕೆ

ಕಳ್ಳತನದ ಮಾಹಿತಿ ತಿಳಿದ ಕೂಡಲೇ ಭಟ್ಕಳ ಗ್ರಾಮೀಣ ಪೊಲೀಸರು ಸಿಪಿಐ ಮಂಜುನಾಥ ಲಿಂಗಾರೆಡ್ಡಿ ಅವರ ಮಾರ್ಗದರ್ಶನ ಮತ್ತು ‌ಪಿಎಸ್‌ಐ ಭರಮಪ್ಪ ಬೆಳಗಲಿ ಅವರ ನೇತೃತ್ವದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ದಿನ ಕಳೆಯುವುದರೊಳಗೆ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Ramesh Babu

Journalist

Recent Posts

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

10 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

14 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

17 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

19 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

1 day ago