ದೇವಸ್ಥಾನದ ವಿಗ್ರಹಗಳಿಗೆ ಕೋಳಿ ಮೊಟ್ಟೆ ಹೊಡೆದು ಅಪವಿತ್ರಗೊಳಿಸಿ ಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡುತ್ತಿದ್ದ ಅರೋಪಿಯೋರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ನಡೆದಿದೆ.
ಬಂಧಿತ ಆರೋಪಿ ಚಿಕ್ಕನಾಯಕನಹಳ್ಳಿ ತಾಲೂಕಿನ ಕುರುಬರಹಳ್ಳಿ ಕಾಡೇನಹಳ್ಳಿಯ ನಿವಾಸಿ ಮಂಜುನಾಥ (29) ಎಂದು ಗುರುತಿಸಲಾಗಿದೆ.
ಚಿಕ್ಕನಾಯಕನಹಳ್ಳಿ ತಾಲೂಕಿನ ಶೆಟ್ಟಿಕೆರೆ ಹೋಬಳಿಯ ಗೋಡೇಕೆರೆ ಗ್ರಾಮದ ಶ್ರೀ ಸಿದ್ದರಾಮೇಶ್ವರ ದೇವಸ್ಥಾನ ಗರ್ಭಗುಡಿಯ ಪಕ್ಕದ ಬಲಭಾಗದ ವೀರಭದ್ರೇಶ್ವರ ವಿಗ್ರಹ ಮತ್ತು ಎಡಭಾಗದ ಗದ್ದುಗೆಯ ಲಿಂಗಕ್ಕೆ ಹಾಗೂ ಭಾವನಹಳ್ಳಿ ಶ್ರೀ ನಿರ್ವಾಣಸ್ವಾಮಿ ದೇವಸ್ಥಾನ, ದಬ್ಬೇಘಟ್ಟ ಗ್ರಾಮದ ಶ್ರೀ ಮರುಳ ಸಿದ್ದೇಶ್ವರ ಸ್ವಾಮಿ ದೇವಸ್ಥಾನದ ವಿಗ್ರಹಗಳಿಗೆ ಕೋಳಿ ಮೊಟ್ಟೆ ಹೊಡೆದು ಅಪವಿತ್ರಗೊಳಿಸಿದ ಘಟನೆ ನಡೆದಿತ್ತು. ಈ ಬಗ್ಗೆ ದೇವಸ್ಥಾನದ ಭಕ್ತರು, ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡಿದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು.
ಈ ಪ್ರಕರಣದ ಆರೋಪಿಯನ್ನು ಪತ್ತೆ ಮಾಡಲು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್ ಕೆ.ವಿ, ಅಪರ ಪೊಲೀಸ್ ಅಧೀಕ್ಷಕ ವಿ ಮರಿಯಪ್ಪ, ಅಬ್ದುಲ್ ಖಾದರ್ ಅವರ ಮಾರ್ಗದರ್ಶನದಲ್ಲಿ ತಿಪಟೂರು ಉಪವಿಭಾಗದ ಡಿ.ಎಸ್.ಪಿ. ನೇತೃತ್ವದಲ್ಲಿ ಚಿಕ್ಕನಾಯಕನಹಳ್ಳಿ ವೃತ್ತದ ವೃತ್ತ ನಿರೀಕ್ಷಕ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣಾ ಪಿ.ಎಸ್.ಐ.. ಹುಳಿಯಾರು ಪೊಲೀಸ್ ಠಾಣಾ ಪಿ.ಎಸ್.ಐ ಮತ್ತು ಸಿಬ್ಬಂದಿಯ ತಂಡ ರಚಿಸಿದ್ದರು.
ಅ.21ರಂದು ಆರೋಪಿ ಮಂಜುನಾಥನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ಕಡೆ ದೇವಸ್ಥಾನಗಳಲ್ಲಿ ದೇವಸ್ಥಾನಗಳ ವಿಗ್ರಹಗಳಿಗೆ ಕೋಳಿ ಮೊಟ್ಟೆ ಹೊಡೆದು ಅಪವಿತ್ರಗೊಳಿಸಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಸದ್ಯ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…
ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…
ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…