ದೇವಸ್ಥಾನದ ಹುಂಡಿ ಕಾಣಿಕೆಗೂ ಡಿಜಿಟಲ್ ವ್ಯವಸ್ಥೆ ಲಗ್ಗೆ ಇಟ್ಟಿದ್ದು, ಇದೀಗ ದೊಡ್ಡಬಳ್ಳಾಪುರ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಇ-ಹುಂಡಿ ವ್ಯವಸ್ಥೆಯನ್ನ ಆರಂಭಿಸಲಾಗಿದೆ.
ಮುಜರಾಯಿ ಇಲಾಖೆ, ಇಂಡಿಯನ್ ಓವರ್ ಸೀಸ್ ಬ್ಯಾಂಕ್(ಐಒಬಿ) ಸಹಯೋಗದಲ್ಲಿ ಈ ವ್ಯವಸ್ಥೆ ಕಲ್ಪಿಸಲಾಗಿದೆ. ಗೂಗಲ್ ಪೇ, ಫೋನ್ ಪೇ, ಬೀಮ್, ಪೇಟಿಎಂ ಸೇರಿದಂತೆ ಯಾವುದೇ UPI ಆ್ಯಪ್‌ನಿಂದ ಭಕ್ತರು ಕಾಣಿಕೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಕ್ಯೂಆರ್ ಕೋಡ್ ಅಳವಡಿಕೆ ಮಾಡಲಾಗಿದ್ದು, ಸ್ಕ್ಯಾನ್ ಮಾಡಿ ಕಾಣಿಕೆ ಅರ್ಪಿಸಲು ಅವಕಾಶ ನೀಡಲಾಗಿದೆ. ಮುಜರಾಯಿ ಇಲಾಖೆ ಅಧೀನದ ರಾಜ್ಯದ ಎಲ್ಲ ಎ ಗ್ರೇಡ್ ದೇವಾಲಯಗಳಲ್ಲೂ ಇ- ಹುಂಡಿ ಜಾರಿ ಮಾಡಲಾಗುತ್ತಿದೆ.
ಈ ಕುರಿತು ದೇವಸ್ಥಾನದ ಆಡಳಿತಾಧಿಕಾರಿ ನಾರಾಯಣಸ್ವಾಮಿ ಪ್ರತಿಕ್ರಿಯಿಸಿ, ಭಕ್ತಾಧಿಗಳ ಅನುಕೂಲಕ್ಕಾಗಿ ಇ-ಹುಂಡಿ ಅಳವಡಿಸಲಾಗಿದೆ. ಇ-ಹುಂಡಿಗೆ ಸಂಪೂರ್ಣ ಭದ್ರತೆ ವಹಿಸಲಾಗಿದೆ. ಭಕ್ತರು ಈ ಸೇವೆಯ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ. ಇದರ ಭದ್ರತಾ ಕ್ರಮಗಳ ಬಗ್ಗೆ, ಬ್ಯಾಂಕ್ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ಷ್ಮ ಸುರಕ್ಷತಾ ಕ್ರಮಗಳನ್ನು ಅಳವಡಿಸಲಾಗಿದೆ. ಡಿಜಿಟಲ್ ಸೌಲಭ್ಯದಿಂದ ದೇಗುಲಕ್ಕೆ ಮತ್ತಷ್ಟು ದೇಣಿಗೆ ಹರಿದು ಬರುವ ಸಾಧ್ಯತೆ ಇದೆ ಎಂದರು.
ಭಕ್ತರು ತಮ್ಮ ಹರಕೆಯ ಹಣವನ್ನು ದೇವರ ಹುಂಡಿ ಬದಲು ಜೇಬಿನಲ್ಲಿ ಹಣ ಇಲ್ಲದಿದ್ದರೂ ಸುಲಭವಾಗಿ ತಮ್ಮ ಮೊಬೈಲ್ ಮೂಲಕ ದೇವಾಲಯದ ಖಾತೆಗೆ ವರ್ಗಾಯಿಸುವ ಮೂಲಕ ತಮ್ಮ ಹರಕೆಯನ್ನು ತೀರಿಸಿದಂತಾಗುತ್ತದೆ ಎಂದು ಹೇಳಿದರು.
ಈ ವೇಳೆ ಇಂಡಿಯನ್ ಓವರ್ ಸೀಸ್ ಬ್ಯಾಂಕ್(ಐಒಬಿ) ಮುಖ್ಯ ಪ್ರಾದೇಶಿಕ ವ್ಯವಸ್ಥಾಪಕ ಉಮೇಶ್ ಕುಮಾರ್ ಸಿಂಗ್, ಅರ್ಜಿತ್ ದಾಸ್ ಹಾಗೂ ದೇವಾಲಯದ ಸಿಬ್ಬಂದಿ ಉಪಸ್ಥಿತರಿದ್ದರು.
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…