ದೇವಸ್ಥಾನದ ಹುಂಡಿ ಹಣಕ್ಕೆ ಕೈಹಾಕಿದ ಖದೀಮ: ಹುಂಡಿಯಲ್ಲಿ ಕೈ ಸಿಕ್ಕಿಕೊಂಡು ಪರದಾಟ

ದೇವಸ್ಥಾನದಲ್ಲಿದ್ದ ಹುಂಡಿ ಹಣ ಕಳ್ಳತನಕ್ಕೆ ಯತ್ನಿಸಿದ ಕಳ್ಳನ ಕೈ ಹುಂಡಿಯಲ್ಲಿ ಸಿಕ್ಕಿಕೊಂಡು ಪರದಾಡಿದ ಘಟನೆ ತೆಲಂಗಾಣದ ಮಾಸುಪಲ್ಲಿ ಪೋಚಮ್ಮ ದೇವಸ್ಥಾನದಲ್ಲಿ ನಡೆದಿದೆ.

ಕಾಮರೆಡ್ಡಿ ಜಿಲ್ಲೆಯ ರಾಮೇಶ್ವರಪಲ್ಲಿ ಗ್ರಾಮದ ಸುರೇಶ್, ಮಾಸುಪಲ್ಲಿ ಪೋಚಮ್ಮ ದೇವಸ್ಥಾನದಲ್ಲಿ ಸ್ವೀಪರ್ ಆಗಿ ಕೆಲಸ ಮಾಡುತ್ತಿದ್ದರು, ಮಂಗಳವಾರ ರಾತ್ರಿ ಹುಂಡಿಯಲ್ಲಿದ್ದ ಹಣ ಕದಿಯಲು ಯತ್ನಿಸಿದಾಗ ಅವರ ಕೈ ಹುಂಡಿಯಲ್ಲಿ ಸಿಲುಕಿಕೊಂಡಿತ್ತು. ಹುಂಡಿಯಿಂದ ತನ್ನ ಕೈ ಹೊರ ತೆಗೆಯಲು ಹರಸಾಹಸ ಮಾಡಿದ್ದಾನೆ ಆದರೂ ಕೈ ಹೊರಬಂದಿಲ್ಲ. ಬೆಳಗ್ಗೆ ಸ್ಥಳೀಯರು ಇದನ್ನ ಗಮನಿಸಿ ಪೊಲೀಸರಿಗೆ ತಿಳಿಸಿದ್ದಾರೆ. ಪೊಲೀಸರು ಹುಂಡಿಯಿಂದ ಕೈ ಹೊರ ತೆಗೆದು ವಶಕ್ಕೆ ಪಡೆದರು.

ಆರೋಪಿ ಕಳ್ಳನ ವಿರುದ್ಧ ಕಳ್ಳತನ ಯತ್ನ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

1 hour ago

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

14 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

14 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

15 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

21 hours ago

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…

23 hours ago