ನಿನ್ನೆ ಹನುಮ ಜಯಂತಿ, ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ದೇಗುಲಗಳಿಗೆ ಭೇಟಿ ನೀಡಿ ಪ್ರಸಾದ ಸೇವಿಸಿದ್ದ ನೂರಾರು ಭಕ್ತರಿಗೆ ವಾಂತಿ, ಭೇದಿಯಾಗಿ ಅಸ್ವಸ್ಥಗೊಂಡಿದ್ದು, ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ಹೊಸಕೋಟೆ ನಗರದಲ್ಲಿ ನಡೆದಿದೆ.
ವಾಂತಿ ಭೇದಿಯಿಂದ ಬಳಲುತ್ತಿದ್ದ ಸಿದ್ದಗಂಗಮ್ಮ(65) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಹೊಸಕೋಟೆ ನಗರದ ವೆಂಕಟರಮಣಸ್ವಾಮಿ, ಊರುಬಾಗಿಲು ಆಂಜನೇಯ ಸ್ವಾಮಿ, ಕೋಟೆ ಆಂಜನೇಯ ಸ್ವಾಮಿ ಇತ್ಯಾದಿ ದೇವಾಲಯಗಳಲ್ಲಿ ಪುಳಿಯೊಗರೆ, ಪಾಯಸ, ಲಡ್ಡು ಸೇವನೆ ಮಾಡಿದ್ದ ಭಕ್ತರು ಅಸ್ವಸ್ಥಗೊಂಡಿದ್ದಾರೆ ಎಂದು ಸ್ಥಳೀಯರಿಂದ ಮಾಹಿತಿ ಒದಗಿಬಂದಿದೆ. ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಫುಡ್ ಪಾಯಿಸನ್ ಮಹಿಳೆ ಸಾವಿಗೆ ಕಾರಣವಾ?ಎಂಬುದರ ಬಗ್ಗೆ ವರದಿ ಬಂದ ಮೇಲೆ ಖಚಿತಪಡಿಸುವುದಾಗಿ ವೈದ್ಯರು ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…