ದೇಶಕ್ಕೆ ಜೀವಪರ ಸಂವಿಧಾನವನ್ನು ಕೊಟ್ಟ ಮಹಾನ್ ವ್ಯಕ್ತಿ ಡಾ.ಬಿ.ಆರ್.ಅಂಬೇಡ್ಕರ್- ಕನ್ನಡ ಪಕ್ಷದ ಮುಖಂಡ ಸಂಜೀವ ನಾಯಕ್

ಡಾ.ಬಿ.ಆರ್.ಅಂಬೇಡ್ಕರ್ ಅವರು ಸರ್ವ ಸಮ್ಮತವಾದ ಪ್ರಪಂಚದಲ್ಲೇ ಅತ್ಯುತ್ತಮವಾದ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ಜೀವಪರ ಸಂವಿಧಾನವನ್ನು ರಚಿಸಿಕೊಟ್ಟಿದ್ದಾರೆ, ಅದನ್ನು ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಕನ್ನಡ ಪಕ್ಷದ ಮುಖಂಡ ಸಂಜೀವ ನಾಯಕ್ ಹೇಳಿದರು.

ನಗರದ ಅರಳು ಮಲ್ಲಿಗೆ ಬಾಗಿಲು ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಆವರಣದಲ್ಲಿ ಜನಪರ ಸಂಘಟನೆಗಳ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಿಐಟಿಯು ಮುಖಂಡ ಪಿ.ಎ.ವೆಂಕಟೇಶ್ ಮಾತನಾಡಿ, ಮುಸ್ಲಿಮರಿಗೆ ಕುರಾನ್, ಕ್ರಿಶ್ಚಿಯನ್ನರಿಗೆ ಬೈಬಲ್, ಹಿಂದುಗಳಿಗೆ ರಾಮಾಯಣ-ಮಹಾಭಾರತ ಶ್ರೇಷ್ಠಗ್ರಂಥವಾದರೆ ಇಡೀ ಭಾರತೀಯರಿಗೆ ನಮ್ಮ ಹೆಮ್ಮೆಯ ಸಂವಿಧಾನ ಶ್ರೇಷ್ಠವಾದ ಗ್ರಂಥ, ಸಂವಿಧಾನವೂ ಯಾವುದೇ ವ್ಯಕ್ತಿಯನ್ನು ಧರ್ಮ, ಜಾತಿ, ಭಾಷೆ, ಆಧಾರದ ಮೇಲೆ ತಾರತಮ್ಯ ತೋರುವುದಿಲ್ಲ, ಲಿಂಗ ಅಸಮಾನತೆಯನ್ನು ಸಹಿಸುವುದಿಲ್ಲ. ಇಂತಹ ಜೀವಪರ ಮೌಲ್ಯಗಳನ್ನು ಭಾರತೀಯರಾದ ನಾವೆಲ್ಲರೂ ಪಾಲಿಸುವುದರಿಂದ ದೇಶದ ಸಮಗ್ರತೆ ಮತ್ತು ಐಕ್ಯತೆ ಗಟ್ಟಿಗೊಳ್ಳುತ್ತದೆ, ಅಸಮಾನತೆ ತೊರೆದು ಸರ್ವರೂ ಸ್ವಾಭಿಮಾನದಿಂದ ಬದುಕುವಂತಾಗುತ್ತದೆ ಎಂದರು.

ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಸುಮಾರು ಐದು ನೂರು ವಿದ್ಯಾರ್ಥಿಗಳಿಗೆ ಸಂವಿಧಾನದ ಪೀಠಿಕೆಯನ್ನು ಹಂಚಿ ಸಂವಿಧಾನದ ಆಶಯಗಳನ್ನು ಮಕ್ಕಳಿಗೆ ಬೋಧನೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಕನ್ನಡ ಜಾಗೃತ ಪರಿಷತ್ತಿನ ಕಾರ್ಯದರ್ಶಿ ಡಿ.ಪಿ.ಅಂಜನೇಯ, ಕರ್ನಾಟಕ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಅಧ್ಯಕ್ಷ ರಾಜುಸಣ್ಣಕ್ಕಿ, ತಾಲ್ಲೂಕು ಕನ್ನಡ ಪಕ್ಷದ ಅಧ್ಯಕ್ಷ ವೆಂಕಟೇಶ್, ಮುಖಂಡರಾದ ಮುನಿಪಾಪಯ್ಯ, ಶಿವರಾಜ್ ಕುಮಾರ್ ಕನ್ನಡ ಸೇನಾ ಸಮಿತಿಯ ಅಧ್ಯಕ್ಷ ಚೌಡರಾಜ್,  ಕನ್ನಡಪರ ಸಂಘಟನೆಯ ಮುಖಂಡರಾದ ಮಂಜುನಾಥ್, ಮುಖ್ಯೋಪಾಧ್ಯಾಯರಾದ ಮಂಜುಳ ನಾಯ್ಕ್, ಶಿಕ್ಷಕರಾದ ಜಯಕುಮಾರ್, ಪ್ರಕಾಶ್ ಮುಂತಾದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

5 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

5 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

17 hours ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

17 hours ago

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಯೋಗದಿಂದ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…

17 hours ago