ದೇಶಕ್ಕೆ ತಾತ್ಕಾಲಿಕ ಗ್ಯಾರಂಟಿಗಳು ಬೇಕಿಲ್ಲ. ಶಾಶ್ವತವಾದ ಹಾಗೂ ಬದುಕು ಕಟ್ಟಿಕೊಡುವ ಗ್ಯಾರಂಟಿಗಳು ಬೇಕಾಗಿದೆ ಎಂದು ಚಿಕ್ಕಬಳ್ಳಾಪುರ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಹೇಳಿದರು.
ಯಲಹಂಕದಲ್ಲಿ ನಡೆದ ಬಿಜೆಪಿ ಬೂತ್ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಎಸ್.ಆರ್.ವಿಶ್ವನಾಥ್ ಅವರೊಂದಿಗೆ ಪಾಲ್ಗೊಂಡು ಅವರು ಮಾತನಾಡಿದರು.
ಕಾಂಗ್ರೆಸ್ ಸರ್ಕಾರದಲ್ಲೇ ಈಗ 40% ಭ್ರಷ್ಟಾಚಾರ ನಡೆಯುತ್ತಿದೆ. ಇದನ್ನು ಜನರಿಗೆ ಮನವರಿಕೆ ಮಾಡಬೇಕಿದೆ. ಮೋದಿ ಸರ್ಕಾರ ಯೋಜನೆ ನೀಡುತ್ತಿದ್ದರೆ, ಕಾಂಗ್ರೆಸ್ ಅದನ್ನು ಕಿತ್ತುಕೊಳ್ಳುತ್ತಿದೆ. ಕಿಸಾನ್ ಸಮ್ಮಾನ್, ರೈತ ವಿದ್ಯಾನಿಧಿ, ಹಾಲು ಪ್ರೋತ್ಸಾಹಧನ ಎಲ್ಲವನ್ನೂ ಕಿತ್ತುಕೊಳ್ಳಲಾಗಿದೆ. ಆಯುಷ್ಮಾನ್ ಭಾರತ್, ಆವಾಸ್ ಮೊದಲಾದ ಗ್ಯಾರಂಟಿಗಳನ್ನು ಮೋದಿ ನೀಡಿದ್ದಾರೆ. ಈ ದೇಶದ ಜನರಿಗೆ ಬೇಕಿರುವುದು ಬದುಕು ಕಟ್ಟಿಕೊಡುವ ಗ್ಯಾರಂಟಿಯಾಗಿದ್ದು, ಅದನ್ನು ಪ್ರಧಾನಿ ನರೇಂದ್ರ ಮೋದಿ ನೀಡುತ್ತಿದ್ದಾರೆ ಎಂದರು.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಸಂಖ್ಯೆ ದೊಡ್ಡದು. ಯಲಹಂಕ ನನ್ನ ತಾಯಿಯ ಜನ್ಮಸ್ಥಳವಾಗಿದ್ದು, ಯಲಹಂಕದ ಜೊತೆ ನನಗೆ ಭಾವನಾತ್ಮಕ ಸಂಬಂಧ ಇದೆ ಎಂದರು.
ಈ ಚುನಾವಣೆ 140 ಕೋಟಿ ಭಾರತೀಯರನ್ನು ರಕ್ಷಣೆ ಮಾಡುವ ಚುನಾವಣೆ. ಬೆಂಗಳೂರಿನಲ್ಲಿ ಬಾಂಬ್ ಸ್ಫೋಟವಾಗಿದೆ. ವಿಧಾನಸೌಧದಲ್ಲಿ ಪಾಕಿಸ್ತಾನಕ್ಕೆ ಜೈಕಾರ ಕೇಳಿಬಂದಿದೆ. ಇವರ ಬಗ್ಗೆ ಕಾಂಗ್ರೆಸ್ ಸರ್ಕಾರ ಮೃದು ಧೋರಣೆ ತಾಳಿದೆ. ಇಂತಹ ಸ್ಥಿತಿಯಲ್ಲಿ ನಮಗೆ ನರೇಂದ್ರ ಮೋದಿ ನಾಯಕತ್ವ ಬೇಕಿದೆ. ಗುಜರಾತ್‌ನಲ್ಲಿ ಮುಖ್ಯಮಂತ್ರಿಯಾಗಿ ನಂತರ ಪ್ರಧಾನಿಯಾಗಲು ಹೊರಟಾಗ ಅವರು ಚಾ ಮಾರಾಟ ಮಾಡುವವರು ಎಂದು ಕಾಂಗ್ರೆಸ್ ಟೀಕೆ ಮಾಡಿತ್ತು. ಆಗ *ಚಾಯ್ ಪೇ ಚರ್ಚಾ* ಮಾಡಿ ನಮ್ಮ ಕಾರ್ಯಕರ್ತರು ಕಾಂಗ್ರೆಸ್‌ನ ಬಾಯಿ ಮುಚ್ಚಿಸಿದ್ದರು ಎಂದು ನೆನಪಿಸಿಕೊಂಡರು.
ಪ್ರಧಾನಿ ಮೋದಿ ಅವರು ನಾನೇನ್ ದೇಶವನ್ನು ರಕ್ಷಿಸುವ ಚೌಕಿದಾರ ಎಂದು ಹೇಳಿಕೊಂಡರೆ ಕಾಂಗ್ರೆಸ್ ಪಕ್ಷದವರು ಚೌಕಿದಾರ್ ಚೋರ್ ಎಂದರು. ನಂತರ ಜನರು ‘ನಾನೂ ಚೌಕಿದಾರ’ ಎಂದು ಕಾಂಗ್ರೆಸ್‌ಗೆ ಬುದ್ಧಿ ಕಲಿಸಿದ್ದರು. ಈಗ ಮೋದಿಗೆ ಪರಿವಾರ ಇಲ್ಲ ಎಂದರೆ ಎಲ್ಲ ಕಾರ್ಯಕರ್ತರು ನಾವೇ ಅವರ ಕುಟುಂಬ ಎಂದು ಹೆಮ್ಮೆಯಿಂದ ಹೇಳುತ್ತಿದ್ದೇವೆ. ಈ ಚುನಾವಣೆಯಲ್ಲಿ ಬಿಜೆಪಿ *ಕಾರ್ಯಕರ್ತರೇ ಸೇನಾಧಿಪತಿಗಳಾಗಿದ್ದಾರೆ.* 400 ರ ಗುರಿಯನ್ನು ಮುಟ್ಟಲು ಕಾರ್ಯಕರ್ತರು ಕೆಲಸ ಮಾಡಬೇಕಿದೆ. ಆ 400 ರಲ್ಲಿ ನಾನೂ ಒಬ್ಬನಾಗಿದ್ದೇನೆ. ಈ 400 ರಲ್ಲಿ ನಮ್ಮ ರಾಜ್ಯದ ಸಂಸದರು ಇರಬೇಕು ಎಂಬುದನ್ನು ಜನರಿಗೆ ತಿಳಿಸಬೇಕು ಎಂದರು.
*ಅಭಿವೃದ್ಧಿ ಇಲ್ಲ, ನೀರಿಲ್ಲ*
ಬೆಂಗಳೂರಿನಲ್ಲಿ ಕಾಂಗ್ರೆಸ್ ಸರ್ಕಾರದಿಂದ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಕುಡಿಯುವ ನೀರನ್ನು ಅವರ ಇಂಡಿ ಕೂಟದ ಪಾಲುದಾರರಾದ ತಮಿಳುನಾಡು ಸರ್ಕಾರಕ್ಕೆ ಬಿಟ್ಟಿದ್ದಾರೆ. ಕೋವಿಡ್ ಸಮಯದಲ್ಲಿ ಮೇಕೆದಾಟು ಪಾದಯಾತ್ರೆ ಮಾಡಿ ಈಗ ಆ ಯೋಜನೆಯ ಬಗ್ಗೆ ಮಾತಾಡುತ್ತಿಲ್ಲ, ಎಂದರು.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…