ದೇಶಕ್ಕೆ ಬೇಕಿರುವುದು ತಾತ್ಕಾಲಿಕ ಗ್ಯಾರಂಟಿ ಅಲ್ಲ, ಶಾಶ್ವತ ಗ್ಯಾರಂಟಿ- ಚಿಕ್ಕಬಳ್ಳಾಪುರ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್‌

ದೇಶಕ್ಕೆ ತಾತ್ಕಾಲಿಕ ಗ್ಯಾರಂಟಿಗಳು ಬೇಕಿಲ್ಲ. ಶಾಶ್ವತವಾದ ಹಾಗೂ ಬದುಕು ಕಟ್ಟಿಕೊಡುವ ಗ್ಯಾರಂಟಿಗಳು ಬೇಕಾಗಿದೆ ಎಂದು ಚಿಕ್ಕಬಳ್ಳಾಪುರ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಹೇಳಿದರು.

ಯಲಹಂಕದಲ್ಲಿ ನಡೆದ ಬಿಜೆಪಿ ಬೂತ್‌ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಎಸ್‌.ಆರ್‌.ವಿಶ್ವನಾಥ್‌ ಅವರೊಂದಿಗೆ ಪಾಲ್ಗೊಂಡು ಅವರು ಮಾತನಾಡಿದರು.

ಕಾಂಗ್ರೆಸ್‌ ಸರ್ಕಾರದಲ್ಲೇ ಈಗ 40% ಭ್ರಷ್ಟಾಚಾರ ನಡೆಯುತ್ತಿದೆ. ಇದನ್ನು ಜನರಿಗೆ ಮನವರಿಕೆ ಮಾಡಬೇಕಿದೆ. ಮೋದಿ ಸರ್ಕಾರ ಯೋಜನೆ ನೀಡುತ್ತಿದ್ದರೆ, ಕಾಂಗ್ರೆಸ್‌ ಅದನ್ನು ಕಿತ್ತುಕೊಳ್ಳುತ್ತಿದೆ. ಕಿಸಾನ್‌ ಸಮ್ಮಾನ್‌, ರೈತ ವಿದ್ಯಾನಿಧಿ, ಹಾಲು ಪ್ರೋತ್ಸಾಹಧನ ಎಲ್ಲವನ್ನೂ ಕಿತ್ತುಕೊಳ್ಳಲಾಗಿದೆ. ಆಯುಷ್ಮಾನ್‌ ಭಾರತ್‌, ಆವಾಸ್‌ ಮೊದಲಾದ ಗ್ಯಾರಂಟಿಗಳನ್ನು ಮೋದಿ ನೀಡಿದ್ದಾರೆ. ಈ ದೇಶದ ಜನರಿಗೆ ಬೇಕಿರುವುದು ಬದುಕು ಕಟ್ಟಿಕೊಡುವ ಗ್ಯಾರಂಟಿಯಾಗಿದ್ದು, ಅದನ್ನು ಪ್ರಧಾನಿ ನರೇಂದ್ರ ಮೋದಿ ನೀಡುತ್ತಿದ್ದಾರೆ ಎಂದರು.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಸಂಖ್ಯೆ ದೊಡ್ಡದು. ಯಲಹಂಕ ನನ್ನ ತಾಯಿಯ ಜನ್ಮಸ್ಥಳವಾಗಿದ್ದು, ಯಲಹಂಕದ ಜೊತೆ ನನಗೆ ಭಾವನಾತ್ಮಕ ಸಂಬಂಧ ಇದೆ ಎಂದರು.

ಈ ಚುನಾವಣೆ 140 ಕೋಟಿ ಭಾರತೀಯರನ್ನು ರಕ್ಷಣೆ ಮಾಡುವ ಚುನಾವಣೆ. ಬೆಂಗಳೂರಿನಲ್ಲಿ ಬಾಂಬ್‌ ಸ್ಫೋಟವಾಗಿದೆ. ವಿಧಾನಸೌಧದಲ್ಲಿ ಪಾಕಿಸ್ತಾನಕ್ಕೆ ಜೈಕಾರ ಕೇಳಿಬಂದಿದೆ. ಇವರ ಬಗ್ಗೆ ಕಾಂಗ್ರೆಸ್‌ ಸರ್ಕಾರ ಮೃದು ಧೋರಣೆ ತಾಳಿದೆ. ಇಂತಹ ಸ್ಥಿತಿಯಲ್ಲಿ ನಮಗೆ ನರೇಂದ್ರ ಮೋದಿ ನಾಯಕತ್ವ ಬೇಕಿದೆ. ಗುಜರಾತ್‌ನಲ್ಲಿ ಮುಖ್ಯಮಂತ್ರಿಯಾಗಿ ನಂತರ ಪ್ರಧಾನಿಯಾಗಲು ಹೊರಟಾಗ ಅವರು ಚಾ ಮಾರಾಟ ಮಾಡುವವರು ಎಂದು ಕಾಂಗ್ರೆಸ್‌ ಟೀಕೆ ಮಾಡಿತ್ತು. ಆಗ *ಚಾಯ್‌ ಪೇ ಚರ್ಚಾ* ಮಾಡಿ ನಮ್ಮ ಕಾರ್ಯಕರ್ತರು ಕಾಂಗ್ರೆಸ್‌ನ ಬಾಯಿ ಮುಚ್ಚಿಸಿದ್ದರು ಎಂದು ನೆನಪಿಸಿಕೊಂಡರು.

ಪ್ರಧಾನಿ ಮೋದಿ ಅವರು ನಾನೇನ್ ದೇಶವನ್ನು ರಕ್ಷಿಸುವ ಚೌಕಿದಾರ ಎಂದು ಹೇಳಿಕೊಂಡರೆ ಕಾಂಗ್ರೆಸ್ ಪಕ್ಷದವರು ಚೌಕಿದಾರ್ ಚೋರ್ ಎಂದರು. ನಂತರ ಜನರು ‘ನಾನೂ ಚೌಕಿದಾರ’ ಎಂದು ಕಾಂಗ್ರೆಸ್‌ಗೆ ಬುದ್ಧಿ ಕಲಿಸಿದ್ದರು. ಈಗ ಮೋದಿಗೆ ಪರಿವಾರ ಇಲ್ಲ ಎಂದರೆ ಎಲ್ಲ ಕಾರ್ಯಕರ್ತರು ನಾವೇ ಅವರ ಕುಟುಂಬ ಎಂದು ಹೆಮ್ಮೆಯಿಂದ ಹೇಳುತ್ತಿದ್ದೇವೆ. ಈ ಚುನಾವಣೆಯಲ್ಲಿ ಬಿಜೆಪಿ *ಕಾರ್ಯಕರ್ತರೇ ಸೇನಾಧಿಪತಿಗಳಾಗಿದ್ದಾರೆ.* 400 ರ ಗುರಿಯನ್ನು ಮುಟ್ಟಲು ಕಾರ್ಯಕರ್ತರು ಕೆಲಸ ಮಾಡಬೇಕಿದೆ. ಆ 400 ರಲ್ಲಿ ನಾನೂ ಒಬ್ಬನಾಗಿದ್ದೇನೆ. ಈ 400 ರಲ್ಲಿ ನಮ್ಮ ರಾಜ್ಯದ ಸಂಸದರು ಇರಬೇಕು ಎಂಬುದನ್ನು ಜನರಿಗೆ ತಿಳಿಸಬೇಕು ಎಂದರು.

*ಅಭಿವೃದ್ಧಿ ಇಲ್ಲ, ನೀರಿಲ್ಲ*

ಬೆಂಗಳೂರಿನಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಕುಡಿಯುವ ನೀರನ್ನು ಅವರ ಇಂಡಿ ಕೂಟದ ಪಾಲುದಾರರಾದ ತಮಿಳುನಾಡು ಸರ್ಕಾರಕ್ಕೆ ಬಿಟ್ಟಿದ್ದಾರೆ. ಕೋವಿಡ್‌ ಸಮಯದಲ್ಲಿ ಮೇಕೆದಾಟು ಪಾದಯಾತ್ರೆ ಮಾಡಿ ಈಗ ಆ ಯೋಜನೆಯ ಬಗ್ಗೆ ಮಾತಾಡುತ್ತಿಲ್ಲ, ಎಂದರು.

Ramesh Babu

Journalist

Recent Posts

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

9 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

15 hours ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

19 hours ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

20 hours ago

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

1 day ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

1 day ago