ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಮುಖ್ಯ ಆಯುಕ್ತರಾಗಿ ಆಯ್ಕೆಗೊಂಡ ಅಭ್ಯರ್ಥಿಗಳು ಇಂದು ತಾಲೂಕಿನ ಪುಣ್ಯ ಕ್ಷೇತ್ರ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಈ ವೇಳೆ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಪ್ರಾಧಿಕಾರದ ವತಿಯಿಂದ ಕ್ಷೇತ್ರದ ವಿಶೇಷತೆ, ದೇವರ ಮಹಿಮೆ ಬಗ್ಗೆ ಮಾಹಿತಿ ನೀಡಲಾಯಿತು.
ಭಾರತ ಸೇವಾದಳದ ತಾಲೂಕು ಘಟಕದ ಅಧ್ಯಕ್ಷ ಹಾಗೂ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಪ್ರಾಧಿಕಾರದ ಸದಸ್ಯ ಆರ.ವಿ.ಮಹೇಶ್ ಮಾತನಾಡಿ, ಕರ್ನಾಟಕದ ಎಲ್ಲಾ ಜಿಲ್ಲೆಗಳಿಂದ ಸುಮಾರು 55 ಮಂದಿ ಸ್ಕೌಟ್ಸ್ ಮತ್ತು ಗೈಡ್ಸ್ ನ ಮುಖ್ಯ ಆಯುಕ್ತರಾಗಿ ಆಯ್ಕೆಗೊಂಡು ತಾಲೂಕಿನ ಅನಿಬೆಸೆಂಟ್ ಪಾರ್ಕ್ ನಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಅವರಿಗೆ ಇಂದು ಪ್ರಾಧಿಕಾರದ ವತಿಯಿಂದ ಘಾಟಿ ದೇವಸ್ಥಾನಕ್ಕೆ ಆಹ್ವಾನಿಸಿ ದೇವರ ದರ್ಶನ ಮಾಡಿಸಲಾಯಿತು. ಸ್ಕೌಟ್ಸ್ ಮತ್ತು ಗೈಡ್ಸ್ ದೇಶಕ್ಕೆ, ರಾಜ್ಯಕ್ಕೆ ತನ್ನದೇ ಆದ ಸೇವೆಯನ್ನು ಮಾಡುತ್ತಿದೆ ಎಂದರು.
ಈ ಸಂದರ್ಭದಲ್ಲಿ ಘಾಟಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ರಂಗಪ್ಪ, ಹೇಮಲತಾ ರಮೇಶ್, ಪ್ರಧಾನ ಅರ್ಚಕ ಸುಬ್ರಮಣಿ, ಭೂ ಮಂಜುರಾತಿ ಸದಸ್ಯ ಗಂಗಸಂದ್ರ ಶ್ರೀಧರ್, ಯುವ ಕಾಂಗ್ರೆಸ್ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಆರ್.ವಿ ಸೇರಿದಂತೆ ಇತರರು ಉಪಸ್ಥಿತರಿದ್ದರು.