ದೇಶದಲ್ಲಿ ಕಾರ್ಮಿಕ ವರ್ಗ ಸಂಪತ್ತನ್ನು ಉತ್ಪಾದಿಸುತ್ತದೆ. ಉಳಿದವರು ಅನುಭವಿಸುತ್ತಾರೆ. ಪ್ರತಿಯೊಬ್ಬರೂ ಉತ್ಪಾದನೆಯಲ್ಲಿ ಪಾಲ್ಗೊಳ್ಳಬೇಕು ಎನ್ನುವ ಉದ್ದೇಶದಿಂದಲೇ ಬಸವಣ್ಣನವರು ಕಾಯಕ ಪದ್ಧತಿಯನ್ನು ಹೇಳಿದರು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ 2022-23ನೇ ಸಾಲಿನ ಶೈಕ್ಷಣಿಕ ಧನಸಹಾಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಂವಿಧಾನದ ಪ್ರಕಾರ ಪ್ರತಿಯೊಬ್ಬರೂ ಸಮಾಜದ ಸಂಪತ್ತಿನಲ್ಲಿ ಸಮಪಾಲು ಹೊಂದಬೇಕು. ಹೀಗಾಗಿ ನಾವು ಕಾರ್ಮಿಕರ ಮಕ್ಕಳಿಗೆ ಈ ರೀತಿಯ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ. ಇದರಿಂದ ಸಮ ಸಮಾಜದ ಆಶಯಗಳನ್ನು ಜಾರಿಗೊಳಿಸುವ ಪ್ರಯತ್ನ ಮಾಡುತ್ತಿದ್ದೇವೆ ಎಂದರು.
ಶೂದ್ರ ಮತ್ತು ಮಹಿಳೆಯರನ್ನು ಶತ- ಶತಮಾನಗಳ ಕಾಲ ಶಿಕ್ಷಣದಿಂದ ವಂಚಿತರನ್ನಾಗಿ ಮಾಡಲಾಗಿತ್ತು. ಈ ಕಾರಣಕ್ಕೇ ಶೂದ್ರ ವರ್ಗಗಳು ಹಿಂದುಳಿಯುವಂತಾಯಿತು. ಅಸಮಾನತೆ ಹೆಚ್ಚಾಯಿತು. ಈ ಅಸಮಾನತೆಯನ್ನು ಅಳಿಸುವ ಉದ್ದೇಶ ನಮ್ಮ ಸರ್ಕಾರದ್ದು. 9,60,000 ಮಕ್ಕಳಿಗೆ ಕಲ್ಯಾಣ ನಿಧಿ ಮೂಲಕ ಸಹಾಯಧನ ಬಿಡುಗಡೆ ಆಗುತ್ತಿದೆ. ಇದರ ಸದುಪಯೋಗ ಪಡಿಸಿಕೊಂಡು ಶಿಕ್ಷಣವಂತರಾಗಬೇಕು. ಶಿಕ್ಷಣದಿಂದ ಅಸಮಾನತೆ ದೂರ ಮಾಡಬಹುದು ಎಂದು ಹೇಳಿದರು.
ಸಹಾಯ ಧನ ಪಡೆಯುತ್ತಿರುವ ಇವರೆಲ್ಲರೂ ಅಸಂಘಟಿತ ಕಾರ್ಮಿಕರ ಮಕ್ಕಳು. ಶೇ 83 ರಷ್ಟು ಕಾರ್ಮಿಕರು ಇವತ್ತಿಗೂ ಅಸಂಘಟಿತರಾಗಿದ್ದಾರೆ. ದೇಶದಲ್ಲಿ ರೈತ ಸಮುದಾಯವನ್ನು ಬಿಟ್ಟರೆ ಎರಡನೇ ಅತೀ ದೊಡ್ಡ ಸಮುದಾಯ ಕಾರ್ಮಿಕ ಸಮುದಾಯ. ಜಾತಿ-ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಪಟ್ಟಭದ್ರರನ್ನು ನಾವು ದೂರ ಇಡಬೇಕು. ಈ ಪಟ್ಟ ಭದ್ರರು ಸಾಮಾಜಿಕ ನ್ಯಾಯದ ವಿರೋಧಿಗಳು. ಈ ವಿಭಜಕರು ಶೂದ್ರ ಸಮುದಾಯ ಆರ್ಥಿಕವಾಗಿ, ಶೈಕ್ಷಣಿಕವಾಗಿ ಮೇಲೆ ಬರುವುದನ್ನು ವಿರೋಧಿಸುತ್ತಾರೆ. ಆದ್ದರಿಂದ ಜಾತಿ-ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುವವರನ್ನು ನಾವು ವಿರೋಧಿಸಬೇಕು ಎಂದರು.
ಸಾರ್ವತ್ರಿಕ ಮೂಲ ಆದಾಯ ಪರಿಕಲ್ಪನೆಯಿಂದ ನಾವು ಎಲ್ಲಾ ಜಾತಿ-ಧರ್ಮದವರಿಗೆ ಅನುಕೂಲ ಆಗುವ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದು ತಿಳಿಸಿದರು.
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…