ದೇಶದಲ್ಲಿ ಕಾರ್ಮಿಕ ವರ್ಗ ಸಂಪತ್ತನ್ನು ಉತ್ಪಾದಿಸುತ್ತದೆ: ಉಳಿದವರು ಅನುಭವಿಸುತ್ತಾರೆ- ಸಿಎಂ ಸಿದ್ದರಾಮಯ್ಯ

ದೇಶದಲ್ಲಿ ಕಾರ್ಮಿಕ ವರ್ಗ ಸಂಪತ್ತನ್ನು ಉತ್ಪಾದಿಸುತ್ತದೆ. ಉಳಿದವರು ಅನುಭವಿಸುತ್ತಾರೆ. ಪ್ರತಿಯೊಬ್ಬರೂ ಉತ್ಪಾದನೆಯಲ್ಲಿ ಪಾಲ್ಗೊಳ್ಳಬೇಕು ಎನ್ನುವ ಉದ್ದೇಶದಿಂದಲೇ ಬಸವಣ್ಣನವರು ಕಾಯಕ ಪದ್ಧತಿಯನ್ನು ಹೇಳಿದರು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ 2022-23ನೇ ಸಾಲಿನ ಶೈಕ್ಷಣಿಕ ಧನಸಹಾಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಂವಿಧಾನದ ಪ್ರಕಾರ ಪ್ರತಿಯೊಬ್ಬರೂ ಸಮಾಜದ ಸಂಪತ್ತಿನಲ್ಲಿ ಸಮಪಾಲು ಹೊಂದಬೇಕು. ಹೀಗಾಗಿ ನಾವು ಕಾರ್ಮಿಕರ ಮಕ್ಕಳಿಗೆ ಈ ರೀತಿಯ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ. ಇದರಿಂದ ಸಮ ಸಮಾಜದ ಆಶಯಗಳನ್ನು ಜಾರಿಗೊಳಿಸುವ ಪ್ರಯತ್ನ ಮಾಡುತ್ತಿದ್ದೇವೆ ಎಂದರು.

ಶೂದ್ರ ಮತ್ತು ಮಹಿಳೆಯರನ್ನು ಶತ- ಶತಮಾನಗಳ ಕಾಲ ಶಿಕ್ಷಣದಿಂದ ವಂಚಿತರನ್ನಾಗಿ ಮಾಡಲಾಗಿತ್ತು. ಈ ಕಾರಣಕ್ಕೇ ಶೂದ್ರ ವರ್ಗಗಳು ಹಿಂದುಳಿಯುವಂತಾಯಿತು. ಅಸಮಾನತೆ ಹೆಚ್ಚಾಯಿತು. ಈ ಅಸಮಾನತೆಯನ್ನು ಅಳಿಸುವ ಉದ್ದೇಶ ನಮ್ಮ ಸರ್ಕಾರದ್ದು. 9,60,000 ಮಕ್ಕಳಿಗೆ ಕಲ್ಯಾಣ ನಿಧಿ ಮೂಲಕ ಸಹಾಯಧನ ಬಿಡುಗಡೆ ಆಗುತ್ತಿದೆ. ಇದರ ಸದುಪಯೋಗ ಪಡಿಸಿಕೊಂಡು ಶಿಕ್ಷಣವಂತರಾಗಬೇಕು. ಶಿಕ್ಷಣದಿಂದ ಅಸಮಾನತೆ ದೂರ ಮಾಡಬಹುದು ಎಂದು ಹೇಳಿದರು.

ಸಹಾಯ ಧನ ಪಡೆಯುತ್ತಿರುವ ಇವರೆಲ್ಲರೂ ಅಸಂಘಟಿತ ಕಾರ್ಮಿಕರ ಮಕ್ಕಳು. ಶೇ 83 ರಷ್ಟು ಕಾರ್ಮಿಕರು ಇವತ್ತಿಗೂ ಅಸಂಘಟಿತರಾಗಿದ್ದಾರೆ. ದೇಶದಲ್ಲಿ ರೈತ ಸಮುದಾಯವನ್ನು ಬಿಟ್ಟರೆ ಎರಡನೇ ಅತೀ ದೊಡ್ಡ ಸಮುದಾಯ ಕಾರ್ಮಿಕ ಸಮುದಾಯ. ಜಾತಿ-ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಪಟ್ಟಭದ್ರರನ್ನು ನಾವು ದೂರ ಇಡಬೇಕು. ಈ ಪಟ್ಟ ಭದ್ರರು ಸಾಮಾಜಿಕ ನ್ಯಾಯದ ವಿರೋಧಿಗಳು. ಈ ವಿಭಜಕರು ಶೂದ್ರ ಸಮುದಾಯ ಆರ್ಥಿಕವಾಗಿ, ಶೈಕ್ಷಣಿಕವಾಗಿ ಮೇಲೆ ಬರುವುದನ್ನು ವಿರೋಧಿಸುತ್ತಾರೆ. ಆದ್ದರಿಂದ  ಜಾತಿ-ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುವವರನ್ನು ನಾವು ವಿರೋಧಿಸಬೇಕು ಎಂದರು.

ಸಾರ್ವತ್ರಿಕ ಮೂಲ ಆದಾಯ ಪರಿಕಲ್ಪನೆಯಿಂದ ನಾವು ಎಲ್ಲಾ ಜಾತಿ-ಧರ್ಮದವರಿಗೆ ಅನುಕೂಲ ಆಗುವ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದು ತಿಳಿಸಿದರು.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

3 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

5 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

7 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

7 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

9 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

14 hours ago