ದೇಶದಲ್ಲಿ ಬಸವಣ್ಣ, ಬುದ್ಧನ ನಂತರ ಸಮಾನತೆಗಾಗಿ ಹೋರಾಡಿದವರು ಬಾಬಾ ಸಾಹೇಬ್ ಅಂಬೇಡ್ಕರ್- ಸಿಎಂ ಸಿದ್ದರಾಮಯ್ಯ

ಅಂಬೇಡ್ಕರ್ ಅವರ ಪರಿನಿರ್ವಾಣ ದಿನವಾದ ಇಂದು ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಅವರನ್ನು ಗೌರವಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಅಂಬೇಡ್ಕರ್ ಅವರು 1956 ಡಿಸೆಂಬರ್ 6ರಂದು ನಮ್ಮನ್ನೆಲ್ಲಾ ಅಗಲಿದರು. ಈ ದಿನವನ್ನೇ ಪರಿನಿರ್ವಾಣ ದಿನಾಚರಣೆ ಎಂದು ಆಚರಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಅವರು ತಮ್ಮ ಬದುಕನ್ನು ಸಾಮಾಜಿಕ ಹೋರಾಟದಲ್ಲಿ ಹಾಗೂ ಸಮಾಜದ ಪರಿವರ್ತನೆಗಾಗಿ ತೊಡಗಿಸಿಕೊಂಡರು. ಅಂಬೇಡ್ಕರ್ ಅವರು ಈ ದೇಶಕ್ಕೆ ಹಾಗೂ ನಮ್ಮ ಸಾಮಾಜಿಕ ಬದುಕಿಗೆ ಅಗತ್ಯವಾದಂತಹ ಸಂವಿಧಾನವನ್ನು ಕೊಟ್ಟಿದ್ದಾರೆ. ಜಗತ್ತಿನಲ್ಲಿಯೇ ಶ್ರೇಷ್ಠ ಲಿಖಿತ ಸಂವಿಧಾನವೆಂದು ನಮ್ಮ ಸಂವಿಧಾನ ಖ್ಯಾತಿ ಪಡೆದಿದೆ ಎಂದರು.

ಸಂವಿಧಾನದ ಶ್ರೇಷ್ಠತೆ ತಿಳಿಯಬೇಕಾದರೆ ಒಳ್ಳೆಯವರ ಕೈಯಲ್ಲಿ ಅನುಷ್ಟಾನವಾಗಬೇಕು. ಕೆಟ್ಟವರ ಕೈಗೆ ಹೋದರೆ ಕೆಟ್ಟದಾಗುತ್ತದೆ ಎಂದು ಅಂಬೇಡ್ಕರ್ ಅವರು ಸ್ಪಷ್ಟವಾಗಿ ಈ ದೇಶದ ಜನರಿಗೆ ಎಚ್ಚರಿಕೆಯನ್ನು ಕೊಟ್ಟಿದ್ದರು ಎಂದು ಹೇಳಿದರು.

ದಲಿತರಿಗೆ ಮಾತ್ರವಲ್ಲದೇ ಸಮಸ್ತ ವರ್ಗದವರಿಗೂ ಸಾಮಾಜಿಕ ಅವಕಾಶಗಳನ್ನು ದೊರಕಿಸಲು ಅವರು ಶ್ರಮಿಸಿದರು. ಅವಕಾಶ ವಂಚಿತರು, ಶೋಷಣೆ, ಅನ್ಯಾಯಕ್ಕೆ, ಅವಮಾನಕ್ಕೆ, ದೌರ್ಜನ್ಯಕ್ಕೆ ಒಳಪಟ್ಟ ಎಲ್ಲಾ ಜನರ ಪರವಾಗಿ ಕೆಲಸ ಮಾಡಿದ್ದರು. ಸಮಾಜದಲ್ಲಿ ಸಮಾನತೆ ಬಯಸಿ ಅದನ್ನೇ ನಿರ್ಮಿಸಲು ಬಹಳ ಸ್ಪಷ್ಟವಾಗಿ ಹೇಳಿದ್ದರು ಎಂದರು.

ಸಂವಿಧಾನದ ಧ್ಯೇಯೋದ್ದೇಶಗಳೂ ಅದನ್ನೇ ಹೇಳುತ್ತದೆ. ಸಂವಿಧಾನದಿಂದ ಅನುಕೂಲ ಪಡೆದವರು ಅವರ ಸೋದರ ಜನಾಂಗಗಳಿಗೆ ಸಹಾಯ ಮಾಡಬೇಕು. ಎಲ್ಲರೂ ಸಂವಿಧಾನವನ್ನು ಅರ್ಥ ಮಾಡಿಕೊಳ್ಳಬೇಕೆಂದು ಬಯಸಿದ್ದರು ಎಂದರು.

ಬಹಳ ಜನ ಸಂವಿಧಾನವನ್ನು ವಿರೋಧಿಸುತ್ತಾರೆ .ಭಾರತ ಬಹುಸಂಸ್ಕೃತಿಯ, ಬಹುತ್ವದ ದೇಶ. ಅನೇಕ ಜಾತಿ, ಧರ್ಮಗಳಿವೆ. ಅನೇಕ ಭಾಷೆಗಳೂ ಇವೆ. ಇದಕ್ಕೆ ಯೋಗ್ಯವಾದ ಸಂವಿಧಾನವನ್ನು ಕೊಟ್ಟವರು ಅಂಬೇಡ್ಕರ್. ಎಲ್ಲಾ ಧರ್ಮಗಳೂ, ಜಾತಿಗಳೂ ಸಮಾನವಾದುದು. ಮಾನವ ಧರ್ಮಕ್ಕೆ ಒತ್ತು ನೀಡಿದ್ದರು. ಮೂಲಭೂತವಾಗಿ ನಾವೆಲ್ಲಾ ಮನುಷ್ಯರು. ಮಾನವರು ಪರಸ್ಪರ ಪ್ರೀತಿಸಬೇಕೇ ಹೊರತು ದ್ವೇಷ ಸಲ್ಲದು. ಇದನ್ನು ಅಂಬೇಡ್ಕರ್ ಅವರು ತಮ್ಮ ಬದುಕಿನದುದ್ದಕ್ಕೂ ಸಾರಿದ್ದರು ಎಂದು ತಿಳಿಸಿದರು.

ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ್ದ ನಾನು ಹಿಂದೂ ಆಗಿ ಹುಟ್ಟಿದ್ದು, ಹಿಂದೂ ಆಗಿ ಸಾಯುವುದಿಲ್ಲ ಎಂದು ತಮ್ಮ ಕಡೇ ದಿನಗಳಲ್ಲಿ ಬೌದ್ಧ ಧರ್ಮ ಸ್ವೀಕಾರ ಮಾಡಿದರು. ಸ್ವೀಕಾರ ಮಾಡಿದ ನಂತರ ಬಹಳ ದಿನಗಳ ಕಾಲ ಉಳಿಯಲಿಲ್ಲ. ಅವರು ಕೊಟ್ಟ ಸಂವಿಧಾನದ ಪ್ರಕಾರ ಮತ್ತು ಅವರ ಹೋರಾಟದ ದಾರಿಯಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನ ಮಾಡುವುದೇ ಅವರಿಗೆ ನಾವು ಸಲ್ಲಿಸುವ ಗೌರವ. ಅದೇ ರೀತಿಯಲ್ಲಿ ಸಂವಿಧಾನದಲ್ಲಿರುವಂತೆ ಪ್ರಜಾಪ್ರಭುತ್ವ, ಸಮಾನತೆ ತರುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ.
ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಬಾಣಂತಿಯರ ಸಾವು ಪ್ರಕರಣವನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಈ ಬಗ್ಗೆ ಈಗಾಗಲೇ ಸಭೆ ನಡೆಸಿ ಡ್ರಗ್ಸ್ ಕಂಟ್ರೋಲರ್ ರನ್ನು ಅಮಾನತು ಮಾಡಲಾಗಿದೆ. ಈ ಪ್ರಕರಣದಲ್ಲಿ ಸಾವು ಏಕೆ ಸಂಭವಿಸಿದೆ ಎಂದು ಪರಿಶೀಲಿಸಲಾಗುವುದು ಎಂದರು.

Ramesh Babu

Journalist

Recent Posts

ಆಕ್ಸಿಡೆಂಟ್ ಸ್ಪಾಟ್ ಆದ ಮೆಣಸಿ ಗೇಟ್: ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ: ಹಲವರಿಗೆ ಗಾಯ: ಆಸ್ಪತ್ರೆಗೆ ದಾಖಲು

ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…

1 hour ago

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

10 hours ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

13 hours ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

14 hours ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

1 day ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

1 day ago