ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆಯಾಗಿದೆ.
ದೇಶದ ಅತ್ಯುತ್ತಮ ಮೂರು ಪೊಲೀಸ್ ಠಾಣೆಯಲ್ಲಿ ಕವಿತಾಳ ಆಯ್ಕೆಯಾಗಿರೋದಕ್ಕೆ ಇಲ್ಲಿಯ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ. ಕವಿತಾಳ ಪೊಲೀಸ್ ಠಾಣೆ ಜನಸ್ನೇಹಿ, ಸಿಬ್ಬಂದಿ ಸ್ನೇಹಿಯಾಗಿದೆ. ದೇಶದ 78 ಪೊಲೀಸ್ ಠಾಣೆಗಳನ್ನ ಪರಿಶೀಲನೆ ನಡೆಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಜನ ಸಂಪರ್ಕ, ಪೊಲೀಸ್ ಠಾಣಾ ಕಟ್ಟಡದ ಸುವ್ಯವಸ್ಥೆ, ಸಿಬ್ಬಂದಿ ಶಿಸ್ತು ಮತ್ತು ಕಾರ್ಯದಕ್ಷತೆ, ಕಡತಗಳ ವಿಲೇವಾರಿ, ಮೂಲಭೂತ ಸೌಕರ್ಯಗಳು ಸೇರಿದಂತೆ ವಿವಿಧ ಮಾನದಂಡಗಳ ಆಧಾರದ ಮೇಲೆ ಆಯ್ಕೆ ಮಾಡಿದೆ.
ಇದಕ್ಕೂ ಮುನ್ನ 2021ರ ಸಾಲಿನಲ್ಲಿ ಮಾನ್ವಿ ಪೊಲೀಸ್ ಠಾಣೆ ಟಾಪ್-5ನೇ ಸ್ಥಾನ ಪಡೆದಿತ್ತು. ಈಗ ಕವಿತಾಳ ಠಾಣೆ ಟಾಪ್-3ನೇ ಸ್ಥಾನ ಪಡೆದಿದೆ
ನವೆಂಬರ್ 28 ರಂದು ಛತ್ತೀಸ್ಗಢದ ರಾಯಪುರದಲ್ಲಿ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಮಾರಂಭ ನಡೆಯಲಿದೆ. ಸಮಾರಂಭದಲ್ಲಿ ಭಾಗಿಯಾಗಲು ಕೇಂದ್ರ ಸಚಿವಾಲಯ ಪತ್ರ ರವಾನಿಸಿದೆ. ರಾಯಚೂರು ಎಸ್‌ಪಿ ಅವರಿಗೆ ಪತ್ರ ಕಳುಹಿಸಲಾಗಿದೆ. ಅತ್ಯುತ್ತಮ ಪೊಲೀಸ್ ಠಾಣೆಗೆ ಕವಿತಾಳ ಆಯ್ಕೆಗೊಂಡಿದಕ್ಕೆ ಎಸ್‌ಪಿ ಎಂ.ಪುಟ್ಟಮಾದಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ರ‍್ಯಾಂಕ್ ಹಿನ್ನೆಲೆ ಕವಿತಾಳ ಠಾಣೆಗೆ ಕೇಂದ್ರ ಸರ್ಕಾರದಿಂದ ವಿಶೇಷ ಸೌಲಭ್ಯಗಳು ದೊರೆಯಲಿವೆ. ಪೀಠೋಪಕರಣ, ಲ್ಯಾಪ್‌ಟಾಪ್ ಸೇರಿದಂತೆ ಕೇಂದ್ರದಿಂದ ವಿಶೇಷ ಸೌಲಭ್ಯಗಳು ಸಿಗಲಿವೆ. ಜಿಲ್ಲೆಯ ಬಳಗಾನೂರು ಹಾಗೂ ಕವಿತಾಳ ಪೊಲೀಸ್ ಠಾಣೆಗಳು ಈ ಸ್ಪರ್ಧೆಯಲ್ಲಿದ್ದವು. ಅಂತಿಮವಾಗಿ ಕವಿತಾಳ ಪೊಲೀಸ್ ಠಾಣೆ ದೇಶದ ಟಾಪ್-3 ಠಾಣೆಯ ಪಟ್ಟಿಗೆ ಸೇರಿದೆ.
ನ.28ರಂದು ಐಐಎಂ ರಾಯಪುರ್‌ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವರಿಂದ ಕವಿತಾಳ ಠಾಣೆ ಪಿಎಸ್‌ಐ ಗುರುಚಂದ್ರ ಯಾದವ್ ಟ್ರೋಫಿ ಸ್ವೀಕರಿಸಲಿದ್ದಾರೆ.
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…
ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…
ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…
ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ…