Categories: ರಾಯಚೂರು

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆಯಾಗಿದೆ.

ದೇಶದ ಅತ್ಯುತ್ತಮ ಮೂರು ಪೊಲೀಸ್ ಠಾಣೆಯಲ್ಲಿ ಕವಿತಾಳ ಆಯ್ಕೆಯಾಗಿರೋದಕ್ಕೆ ಇಲ್ಲಿಯ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ. ಕವಿತಾಳ ಪೊಲೀಸ್ ಠಾಣೆ ಜನಸ್ನೇಹಿ, ಸಿಬ್ಬಂದಿ ಸ್ನೇಹಿಯಾಗಿದೆ. ದೇಶದ 78 ಪೊಲೀಸ್ ಠಾಣೆಗಳನ್ನ ಪರಿಶೀಲನೆ ನಡೆಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಜನ ಸಂಪರ್ಕ, ಪೊಲೀಸ್ ಠಾಣಾ ಕಟ್ಟಡದ ಸುವ್ಯವಸ್ಥೆ, ಸಿಬ್ಬಂದಿ ಶಿಸ್ತು ಮತ್ತು ಕಾರ್ಯದಕ್ಷತೆ, ಕಡತಗಳ ವಿಲೇವಾರಿ, ಮೂಲಭೂತ ಸೌಕರ್ಯಗಳು ಸೇರಿದಂತೆ ವಿವಿಧ ಮಾನದಂಡಗಳ ಆಧಾರದ ಮೇಲೆ ಆಯ್ಕೆ ಮಾಡಿದೆ.

ಇದಕ್ಕೂ ಮುನ್ನ 2021ರ ಸಾಲಿನಲ್ಲಿ ಮಾನ್ವಿ ಪೊಲೀಸ್ ಠಾಣೆ ಟಾಪ್-5ನೇ ಸ್ಥಾನ ಪಡೆದಿತ್ತು. ಈಗ ಕವಿತಾಳ ಠಾಣೆ ಟಾಪ್-3ನೇ ಸ್ಥಾನ ಪಡೆದಿದೆ

ನವೆಂಬರ್ 28 ರಂದು ಛತ್ತೀಸ್ಗಢದ ರಾಯಪುರದಲ್ಲಿ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಮಾರಂಭ ನಡೆಯಲಿದೆ. ಸಮಾರಂಭದಲ್ಲಿ ಭಾಗಿಯಾಗಲು ಕೇಂದ್ರ ಸಚಿವಾಲಯ ಪತ್ರ ರವಾನಿಸಿದೆ. ರಾಯಚೂರು ಎಸ್‌ಪಿ ಅವರಿಗೆ ಪತ್ರ ಕಳುಹಿಸಲಾಗಿದೆ. ಅತ್ಯುತ್ತಮ ಪೊಲೀಸ್ ಠಾಣೆಗೆ ಕವಿತಾಳ ಆಯ್ಕೆಗೊಂಡಿದಕ್ಕೆ ಎಸ್‌ಪಿ ಎಂ.ಪುಟ್ಟಮಾದಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರ‍್ಯಾಂಕ್ ಹಿನ್ನೆಲೆ ಕವಿತಾಳ ಠಾಣೆಗೆ ಕೇಂದ್ರ ಸರ್ಕಾರದಿಂದ ವಿಶೇಷ ಸೌಲಭ್ಯಗಳು ದೊರೆಯಲಿವೆ. ಪೀಠೋಪಕರಣ, ಲ್ಯಾಪ್‌ಟಾಪ್ ಸೇರಿದಂತೆ ಕೇಂದ್ರದಿಂದ ವಿಶೇಷ ಸೌಲಭ್ಯಗಳು ಸಿಗಲಿವೆ. ಜಿಲ್ಲೆಯ ಬಳಗಾನೂರು ಹಾಗೂ ಕವಿತಾಳ ಪೊಲೀಸ್ ಠಾಣೆಗಳು ಈ ಸ್ಪರ್ಧೆಯಲ್ಲಿದ್ದವು. ಅಂತಿಮವಾಗಿ ಕವಿತಾಳ ಪೊಲೀಸ್ ಠಾಣೆ ದೇಶದ ಟಾಪ್-3 ಠಾಣೆಯ ಪಟ್ಟಿಗೆ ಸೇರಿದೆ.

ನ.28ರಂದು ಐಐಎಂ ರಾಯಪುರ್‌ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವರಿಂದ ಕವಿತಾಳ ಠಾಣೆ ಪಿಎಸ್‌ಐ ಗುರುಚಂದ್ರ ಯಾದವ್ ಟ್ರೋಫಿ ಸ್ವೀಕರಿಸಲಿದ್ದಾರೆ.

Ramesh Babu

Journalist

Recent Posts

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

8 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

14 hours ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

18 hours ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

20 hours ago

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

1 day ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

1 day ago