ಅಪ್ಪಟ ಕನ್ನಡ ಬ್ರ್ಯಾಂಡ್ ನಂದಿನಿಯು $1,079 ಮಿಲಿಯನ್ (₹9,009.65 ಕೋಟಿ) ಮೌಲ್ಯದೊಂದಿಗೆ ‘ಬ್ರ್ಯಾಂಡ್ ಫೈನಾನ್ಸ್ 2025’ರ ಪಟ್ಟಿಯಲ್ಲಿ 38ನೇ ಸ್ಥಾನಕ್ಕೆ ಏರಿದೆ. ಕಳೆದ ವರ್ಷ ನಂದಿನಿ ಭಾರತದ ಟಾಪ್ 100 ಅಮೂಲ್ಯ ಬ್ರ್ಯಾಂಡ್‌ಗಳ ಪಟ್ಟಿಯಲ್ಲಿ 43ನೇ ಸ್ಥಾನದಲ್ಲಿತ್ತು. ಬ್ರ್ಯಾಂಡ್ ಫೈನಾನ್ಸ್ ಲಂಡನ್ ಮೂಲದ ಅಂತರರಾಷ್ಟ್ರೀಯ ಸಲಹಾ ಸಂಸ್ಥೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಆಹಾರ ಮತ್ತು ಪಾನೀಯ ವಿಭಾಗದಲ್ಲಿ 4ನೇ ಸ್ಥಾನ ಪಡೆದಿರುವ ನಂದಿನಿಯು ಅಮುಲ್, ಬ್ರಿಟಾನಿಯಾ ಮತ್ತು ಮದರ್ ಡೈರಿಗಳಂತಹ ದೊಡ್ಡದೊಡ್ಡ ಬ್ರ್ಯಾಂಡ್‌ಗಳ ಜೊತೆಗೆ ಸ್ಪರ್ಧಿಸುತ್ತಿದೆ. ನಂದಿನಿಯು ಜಾಗತಿಕ ಮಟ್ಟದಲ್ಲಿ ಗುರುತಿಸಲ್ಪಟ್ಟಿರುವುದು ಸರ್ಕಾರದ ಸಂಕಲ್ಪ, ರೈತರ ಶ್ರಮ ಮತ್ತು ಹೆಚ್ಚುತ್ತಿರುವ ಗ್ರಾಹಕರ ವಿಶ್ವಾಸಾರ್ಹತೆಯ ಪ್ರತಿಬಿಂಬವಾಗಿದೆ ಎಂದು ತಿಳಿಸಿದರು.
ಪ್ರಮುಖಾಂಶಗಳು
ಬ್ರಾಂಡ್ ಫೈನಾನ್ಸ್ -2025 ಶ್ರೇಯಾಂಕದಲ್ಲಿ 43 ರಿಂದ 38ನೇ ಸ್ಥಾನಕ್ಕೆ ಜಿಗಿತ
ಕಳೆದೊಂದು ವರ್ಷದಲ್ಲಿ 139 ಮಿಲಿಯನ್ ಡಾಲರ್ ಬ್ರಾಂಡ್ ಮೌಲ್ಯ ವೃದ್ಧಿ
ದೇಶದ ಆಹಾರ ಮತ್ತು ಪಾನೀಯ ವಲಯದಲ್ಲಿ 4ನೇ ಸ್ಥಾನಕ್ಕೆ
ಒಟ್ಟು 1,079 ಮಿಲಿಯನ್ ಡಾಲರ್ ಬ್ರಾಂಡ್ ಮೌಲ್ಯದ ಸಂಸ್ಥೆ
(ಮೂಲ: ಬ್ರಾಂಡ್ ಫೈನಾನ್ಸ್ ಇಂಡಿಯಾ 100-2025 ವರದಿ)
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…