ದೇಶದ ಅಭಿವೃದ್ಧಿಯಲ್ಲಿ ಯುವಕರ ಕೊಡುಗೆ ಅತ್ಯಂತ ಅಪಾರ- ಜಿ.ಟಿ ಗಿರೀಶ್

ದೊಡ್ಡಬಳ್ಳಾಪುರ: ಒಂದು ದೇಶದ ಅಭಿವೃದ್ಧಿಯಲ್ಲಿ ಯುವಕರ ಕೊಡುಗೆ ಅತ್ಯಂತ ಅಪಾರ ಹಾಗೂ ಮಹತ್ವದ್ದಾಗಿದೆ ಎಂದು ಲಯನ್ಸ್ ಕ್ಲಬ್ 317 ಜಿಲ್ಲಾ ಘಟಕದ ಸಂಯೋಜಕ ಜಿ.ಟಿ ಗಿರೀಶ್ ಹೇಳಿದರು.

ದೇವರಾಜ್ ಅರಸು ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ ಹಾಗೂ ಲಯನ್ಸ್ ಕ್ಲಬ್ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳು
ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಜನ ಸಂಖ್ಯೆಯಲ್ಲಿ ಬಹುಪಾಲು ಯುವಕರಾಗಿದ್ದರೆ. ಇಂದು ಭಾರತದ ಅಭಿವೃದ್ಧಿಗೆ ಇಲ್ಲಿನ ಯುವಕರು ಪ್ರಮುಖ ಕಾರಣ. ಇಂದಿನ ಯುವಕರೇ ನಾಳಿನ ನಾಯಕರು. ಹಾಗಾಗಿ ಯುವಕರು ತಮ್ಮ ಸುತ್ತಮುತ್ತಲಿನ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಜ್ಞಾನವನ್ನು ಹೊಂದಿರಬೇಕು ಎಂದರು.

ಲಯನ್ಸ್ ಕ್ಲಬ್ ದೊಡ್ಡಬಳ್ಳಾಪುರ ಆರ್. ಎಲ್ ಜಾಲಪ್ಪ ಕ್ಯಾಂಪಸ್ ನ ಅಧ್ಯಕ್ಷರಾದ ಜೆ. ಆರ್ ರಾಕೇಶ್ ಮಾತನಾಡಿ, ಡಿಜಿಟಲ್ ಯುಗವನ್ನು ದಾಟಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಯುಗದತ್ತ ಸಾಗಿರುವ ಯುವಕರಿಗೆ ಯಶಸ್ಸಿನತ್ತ ಸಾಗಲು ಉತ್ತಮ ಅವಕಾಶಗಳು ಇವೆ. ಯುವಕರ ಉತ್ತಮ ಕೆಲಸ ಕಾರ್ಯಗಳಿಂದ ದೇಶವು ಪ್ರಗತಿಯತ್ತ ಸಾಗುತ್ತದೆ. ಯುವಕರು ಮಾಡುವ ಅತ್ಯುತ್ತಮ ಕೆಲಸ, ಕಾರ್ಯಗಳು, ಅವರ ಆವಿಷ್ಕಾರಗಳು ದೇಶ ವಿದೇಶವನ್ನು ತಲುಪಬೇಕು ಎಂದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಆರ್ ನಾಗರಾಜ್, ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ ಚಿಕ್ಕಣ್ಣ, ಉಪಪ್ರಾಂಶುಪಾಲರಾದ ಕೆ. ದಕ್ಷಿಣ ಮೂರ್ತಿ, ಲಯನ್ಸ್ ಕ್ಲಬ್ ನ ಕಾರ್ಯದರ್ಶಿ ನಾಗರಾಜು, ಖಜಾಂಚಿ ರವಿಕುಮಾರ್, ಕಾಲೇಜಿನ ಮ್ಯಾನೇಜರ್ ಶ್ರೀನಿವಾಸ್, ಎನ್.ಎಸ್.ಎಸ್ ಅಧಿಕಾರಿಗಳಾದ ಲಕ್ಷ್ಮೀಶ, ಪ್ರಾಧ್ಯಾಪಕರಾದ ಶ್ವೇತಾ, ಮಧುಶ್ರೀ, ಬಾಬುಸಾಬಿ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

8 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

18 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

1 day ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago