ದೇಶದ ಅಭಿವೃದ್ಧಿಯಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಕೊಡುಗೆ ಅಪಾರ- ಸರ್ಕಾರವು ಸ್ವಯಂ ಸೇವಕರಿಗೆ ಸಾಮಾಜಿಕ ಭದ್ರತೆ ಒದಗಿಸಬೇಕು-ಅಮಲಿ ಗೋಪಾಲ ನಾಯ್ಕ್

ದೇಶದ ಅಭಿವೃದ್ಧಿಯಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಕೊಡುಗೆ ಅಪಾರವಾಗಿದ್ದು, ಕರ್ನಾಟಕ ರಾಜ್ಯದಲ್ಲಿ ಸಾವಿರಾರು ಸ್ವಯಂ ಸೇವಾ ಸಂಸ್ಥೆಗಳು ಲಕ್ಷಾಂತರ ಸಿಬ್ಬಂದಿ, ಕಾರ್ಯಕರ್ತರು ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ. ಆದರೆ ಸ್ವಯ ಸೇವಕರಿಗೆ ಸಾಮಾಜಿಕ ಭದ್ರತೆ ಇಲ್ಲವಾಗಿದೆ, ಸರ್ಕಾರ ಅವರಿಗೆ ಸಾಮಾಜಿಕ ಭದ್ರತೆ ಒದಗಿಸಬೇಕೆಂದು ಒತ್ತಡ ಹೇರಲು ಸ್ವಯಂ ಸೇವಾ ಸಂಘಗಳ ಕಾರ್ಯಕರ್ತರ ಸಮಾವೇಶ ನಡೆಸಲು ನಿರ್ದರಿಸಿದ್ದೇವೆ ಎಂದು ಫೆವಾರ್ಡ್-ಕ ಸಂಘಟನೆಯ ಖಜಾಂಚಿ ಅಮಲಿ ಗೋಪಾಲ ನಾಯ್ಕ್ ತಿಳಿಸಿದರು.

ನಗರದ ಗ್ರಾಮೀಣ ಅಭ್ಯುದಯ ಸೇವಾ ಸಂಸ್ಥೆಯಲ್ಲಿ ಫೆವಾರ್ಡ್-ಕ ಸಂಘಟನೆ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸ್ವಯಂ ಸೇವಾ ಸಂಸ್ಥೆಗಳಲ್ಲಿ ಸ್ವಯಂ ಸೇವಕರಾಗಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಯಕರ್ತರು ಕನ್ನಡದ ನೆಲ, ಜಲ, ಭಾಷೆ, ಸಂಸ್ಕೃತಿಯ ಬಗ್ಗೆ ಸಂಚಕಾರ ಬಂದಾಗ ಬೀದಿಗಿಳಿದು ಹೋರಾಟ ಮಾಡುತ್ತಾರೆ.

ಭಾರತದ ಯಾವುದೇ ಮೂಲೆಯಲ್ಲಿ ನೈಸರ್ಗಿಕ ವಿಪತ್ತುಗಳಾದಾಗ ಪರಿಹಾರ ಕಾರ್ಯಕ್ರಮಗಳ ಮುಖಾಂತರ ಕೋಟ್ಯಾನುಕೋಟಿ ರೂಪಾಯಿ ಹಣ ಮತ್ತು ದವಸ-ದಾನ್ಯ ಸಂಗ್ರಹಿಸಿ ಪರಿಹಾರ ನಿಧಿಗಳಿಗೆ ದೇಣಿಗೆ ನೀಡುವುದರ ಜೊತೆಗೆ ಖುದ್ದು ಮುಂದೆ ನಿಂತು ಕಾರ್ಯನಿರ್ವಹಿಸುತ್ತಾರೆ. ಇಂತಹ ನಿಸ್ವಾರ್ಥ ಸೇವೆ ಸಲ್ಲಿಸುವ ಸ್ವಯಂ ಸೇವಾ ಕಾರ್ಯಕರ್ತರಿಗೆ ಸಾಮಾಜಿಕ ಭದ್ರತೆ ಇಲ್ಲ ಎಂದು ತಮ್ಮ ಅಸಮಧಾನ ಹೊರ ಹಾಕಿದರು.

ಸಂಘಟನೆಯ ಮತ್ತೊಬ್ಬ ಮುಖಂಡ ಫಾದರ್ ಎಡ್ವರ್ಡ್ ಮಾತನಾಡಿ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸರ್ಕಾರದ ಸೌಲತ್ತುಗಳನ್ನು ತಲುಪಿಸುವುದರಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಸಿಬ್ಬಂದಿ ಕಾರ್ಯಕರ್ತರು ಹಗಲಿರಳು ಕಾರ್ಯ ನಿರ್ವಹಿಸುತ್ತಿರುವುದನ್ನು ಕೇಂದ್ರ ಸರ್ಕಾರ ಗಮನಿಸಿ ಭಾರತದ ಸಂವಿಧಾನದ ಐದನೇ ಅಂಗವಾಗಿ ಸ್ವಯಂ ಸೇವಾ ಕ್ಷೇತ್ರವನ್ನುಗುತಿಸಿದೆ. ಈ ದಿಸೆಯಲ್ಲಿ ಕರ್ನಾಟಕದಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಸುಸ್ಥಿರ ಬಲವರ್ಧನೆಗೆ ಕರ್ನಾಟಕ ನಗರ ಮತ್ತು ಗ್ರಾಮಾಭ್ಯುಧ್ಯ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟ-ಫೆವಾರ್ಡ್- 1984 ರಿಂದ ಕಾರ್ಯ ನಿರ್ವಹಿಸುತ್ತಿದೆ ಎಂದರು.

ಧ್ವನಿ ಇಲ್ಲದವರ ಮತ್ತು ಅವಕಾಶ ವಂಚಿತರಾಗಿ ಅಂಚಿನಲ್ಲಿರುವ ಸಮುದಾಯಗಳ ಅಭಿವೃದ್ಧಿಗಾಗಿ ಸರ್ಕಾರದ ಪರವಾಗಿ ಸೇವಾ ಮನೋಭಾವದಿಂದ ಕನಿಷ್ಠ ವೇತನವಿಲ್ಲದೆ ಕರ್ತವ್ಯದಲ್ಲಿ ನಿರತರಾಗಿರುವುದು ಸಮಾಜದಲ್ಲಿ ಎಲ್ಲರಿಗೂ ತಿಳಿದಿರುವ ವಿಷಯವಾಗಿದೆ. ಎಂದು ಹೇಳಿದರು.

ರಾಜ್ಯದಲ್ಲಿ ಸರಿ ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರುಗಳು ವಿವಿಧ ಕಾರ್ಯಕ್ರಮಗಳ ಯೋಜನಾ ಕ್ಷೇತ್ರದಲ್ಲಿ ಹಗಲಿರಳು ದುಡಿಯುತ್ತಿರುವರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಯಾವುದೇ ಸಾಮಾಜಿಕ ಭದ್ರತೆ ಇಲ್ಲದಿರುವುದನ್ನು ಸರ್ಕಾರದ ಗಮನಕ್ಕೆ ತರಲು ಸಮಾವೇಶ ನಡೆಸುವುದು ಒಂದು ಸಣ್ಣ ಪ್ರಯತ್ನವಾಗಿದೆ ಎಂದರು.

ಸಂಘಟನೆಯ ಕಾರ್ಯದರ್ಶಿ ನಾಗರಾಜು ಮಾತನಾಡಿ, ಸಾಮಾಜಿಕ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ, ಕಾರ್ಯಕರ್ತರಿಗೆ ಯಾವುದೇ ಸಾಮಾಜಿಕ ಭದ್ರತೆ ಇಲ್ಲದ ಕಾರಣ ಹಾಗೂ ಸ್ವಯಂ ಸೇವಾ ಸಂಸ್ಥೆಗಳು ರೂಪಿಸಿರುವ ಸರ್ಕಾರಿ ಯೋಜನೆಗಳಲ್ಲಿ ಕಡಿಮೆ ವೇತನ/ಸಂಭಾವನೆ ಹಾಗೂ ಕನಿಷ್ಕ ವೇತನ ಸಿಗದ ಕಾರಣ ಆರ್ಥಿಕವಾಗಿ ಹಿಂದುಳಿದಿರುವ ಕಾರ್ಯಕರ್ತರ ಕುಟುಂಬಗಳ ಪೋಷಣೆ ತೃಪ್ತಿಕರವಾಗಿಲ್ಲ ಮತ್ತು ಹಲವು ಸಂದರ್ಭಗಳಲ್ಲಿ ಕರ್ತವ್ಯದಲ್ಲಿರುವಾಗ ಸಿಬ್ಬಂದಿ ಕಾರ್ಯಕರ್ತರು ಸಾವನ್ನಪ್ಪಿ ಅವರ ಕುಟುಂಬಗಳು ಬೀದಿ ಪಾಲಾಗಿರುವ ಉದಾರಣೆಗಳು ಸಾಕಷ್ಟಿವೆ. ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವರಿಗೆ ಯಾವುದೇ ಸಾಮಾಜಿಕ ಭದ್ರತೆಯನ್ನು ಸರ್ಕಾರ ಕಲ್ಪಿಸಿಲ್ಲ ಎಂದು ತಿಳಿಸಿದರು.

ಕೋವಿಡ್, ಪ್ರವಾಹಗಳು ಏರ್ಪಟ್ಟಾಗ ಮುಂಚೂಣಿ ಕಾರ್ಯಕರ್ತರಾಗಿ ದುಡಿದ ಅದೆಷ್ಟೋ ಸಾಮಾಜಿಕ ಕ್ಷೇತ್ರದ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ, ಅವರ ಕುಟುಂಬ ಕಷ್ಟದಲ್ಲಿ ಜೀವನ ನಡೆಸುತ್ತಿದೆ. ಆದುದರಿಂದ, ಕರ್ನಾಟಕದಲ್ಲಿ ಸ್ವಯಂ ಸೇವಾ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ/ಕಾರ್ಯಕರ್ತರಿಗೆ ಸಾಮಾಜಿಕ ಭದ್ರತೆ ಕಲ್ಪಿಸಿಕೊಡಲು ಸರ್ಕಾರದ ಮೇಲೆ ಒತ್ತಡ ಹೇರಲು ಕರ್ನಾಟಕದಲ್ಲಿ ಸ್ವಯಂ ಸೇವಾ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ/ಕಾರ್ಯಕರ್ತರಗಳನ್ನು ಒಂದುಗೂಡಿಸಿ, ರಾಜ್ಯ ಮಟ್ಟದಲ್ಲಿ ಸಮಾವೇಶ ಆಯೋಜಿಸಿ ಮಾನ್ಯ ಮುಖ್ಯಮಂತ್ರಿಗಳು ವಿವಿದ ಇಲಾಖೆಯ ಸಚಿವರನ್ನು ಸಮಾವೇಶಕ್ಕೆ ಆಹ್ವಾನಿಸಿ ಸಾಮಾಜಿಕ ಕಾರ್ಯಕರ್ತರ ಬೇಡಿಕೆಗಳನ್ನು ಹೀಡೇರಿಸಲು ಹಕ್ಕೊತ್ತಾಯ ಮಂಡಿಸಲಾಗುವುದು ಎಂದರು.

ಕರ್ನಾಟಕದಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಸಾಮಾಜಿಕ ಕಾರ್ಯಕರ್ತರುಗಳಿಗೆ ಸಾಮಾಜಿಕ ನ್ಯಾಯಾ ದೊರಕಿಸಿ ಕೊಡಲು ಕರ್ನಾಟಕ ನಗರ ಮತ್ತು ಗ್ರಾಮಾಭ್ಯುದ್ಯ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟ – ಫೆವಾರ್ಡ್-ಕ ನಿರ್ಧರಿಸಿದೆ. ಹಾಗಾಗಿ ಅ.20 ರೊಳಗಾಗಿ ಸ್ವಯಂ ಸೇವಾ ಕ್ಷೇತ್ರದ ಕಾರ್ಯಕರ್ತರು, ಸಿಬ್ಬಂದಿ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಈ ವೇಳೆ ಫೆವಾರ್ಡ್-ಕ ಸಂಘಟನೆಯ ಸಂಸ್ಥಾಪಕ ಗೋಪಾಲ ನಾಯ್ಕ್, ರಾಮು ಜೋಗಿಹಳ್ಳಿ, ಲಿಲ್ಲಿ ಸಾಂಜೆ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

1 hour ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

4 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

21 hours ago

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

22 hours ago

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

1 day ago

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

1 day ago