ಪ್ರಸ್ತಕ ವರ್ಷದ ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕ ಚೌಕಟ್ಟು (ಎನ್‌ಐಆರ್‌ಎಫ್) ರ‍್ಯಾಂಕಿಂಗ್‌ನ ಮೊದಲ ಹತ್ತು ಅಗ್ರ ಶ್ರೇಯಾಂಕದ ಶಿಕ್ಷಣ ಸಂಸ್ಥೆಗಳಲ್ಲಿ ದೇಶದ ವಿವಿಧ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಸಂಸ್ಥೆಗಳು ಸ್ಥಾನ ಪಡೆದಿವೆ.
ಐಐಟಿ ಮದ್ರಾಸ್, ಐಐಟಿ ದೆಹಲಿ, ಐಐಟಿ ಕಾನ್ಪುರ ಮೊದಲ ಐದು ಸ್ಥಾನಗಳನ್ನು ಪಡೆದುಕೊಂಡಿವೆ. ನವದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯ (ಜೆಎನ್‌ಯು) ಮತ್ತೊಮ್ಮೆ ಹತ್ತು ಅಗ್ರ ಶ್ರೇಯಾಂಕಗಳಲ್ಲಿ ಸ್ಥಾನ ಪಡೆದ ಏಕೈಕ ಕಲಾ ಶಿಕ್ಷಣ ಸಂಸ್ಥೆಯಾಗಿದೆ.
ಅತ್ಯುತ್ತಮ ಶಿಕ್ಷಣ ಸಂಸ್ಥೆಗಳ ಪೈಕಿಯೂ ಬೆಂಗಳೂರಿನ ಐಐಎಸ್‌ಸಿಯು 2ನೇ ಸ್ಥಾನ ಪಡೆದಿದೆ. ಒಟ್ಟಾರೆ ವಿಭಾಗದಲ್ಲಿ ಮೊದಲ ಹತ್ತರಲ್ಲಿ ಸ್ಥಾನ ಪಡೆದ ಇತರ ಸಂಸ್ಥೆಗಳ ಪೈಕಿ ಐಐಟಿ ಬಾಂಬೆ, ಐಐಟಿ ಕಾನ್ಪುರ, ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ದೆಹಲಿ, ಐಐಟಿ ಖರಗ್‌ಪುರ, ಐಐಟಿ ರೂರ್ಕಿ ಮತ್ತು ಐಐಟಿ ಗುವಾಹಟಿ ಇವೆ.
ಕೊಯಮತ್ತೂರಿನ ಪಿಎಸ್‌ಜಿಆರ್ ಕೃಷ್ಣಾಮ್ಮಾಳ್ ಕಾಲೇಜ್ ಫಾರ್ ವುಮೆನ್ ಮತ್ತು ಕೋಲ್ಕತ್ತದ ಸೇಂಟ್ ಕ್ಸೇವಿಯರ್ಸ್ ಕಾಲೇಜು ಈ ವರ್ಷ ಐದು ಅಗ್ರ ಕಾಲೇಜುಗಳಲ್ಲಿ ಸ್ಥಾನ ಪಡೆದಿವೆ.
1. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ), ಬೆಂಗಳೂರು
2. ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ, ನವದೆಹಲಿ
3. ಜಾಮಿಯಾ ಮಿಲಿಯಾ ಇಸ್ಲಾಮಿಯಾ, ನವದೆಹಲಿ
4. ಜಾಧವಪುರ ವಿಶ್ವವಿದ್ಯಾಲಯ, ಕೋಲ್ಕತ್ತ
5. ಬನಾರಸ್ ಹಿಂದೂ ವಿಶ್ವವಿದ್ಯಾಲಯ, ವಾರಾಣಸಿ
6. ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಷನ್, ಮಣಿಪಾಲ
7. ಅಮೃತ ವಿಶ್ವವಿದ್ಯಾಪೀಠಂ, ಕೊಯಮತ್ತೂರು
8. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ವೆಲ್ಲೂರು
9. ಅಲೀಗಡ ಮುಸ್ಲಿಂ ವಿಶ್ವವಿದ್ಯಾಲಯ, ಅಲೀಗಡ
10. ಹೈದರಾಬಾದ್ ವಿಶ್ವವಿದ್ಯಾಲಯ, ಹೈದರಾಬಾದ್
ದೇಶದ ಹತ್ತು ಅತ್ಯುತ್ತಮ ಎಂಜಿನಿಯರಿಂಗ್ ಶಿಕ್ಷಣ ಸಂಸ್ಥೆಗಳು
1. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮದ್ರಾಸ್
2. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ದೆಹಲಿ
3.ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬಾಂಬೆ
4. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಕಾನ್ಪುರ
5.ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ರೂರ್ಕಿ
6. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಖರಗಪುರ
7.ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಗುವಾಹಟಿ
8. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಹೈದರಾಬಾದ್
9. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತಿರುಚಿರಾಪಳ್ಳಿ
10. ಜಾಧವ್‌ಪುರ ವಿಶ್ವವಿದ್ಯಾಲಯ, ಕೋಲ್ಕತ್ತ
ದೇಶದ ಹತ್ತು ಅತ್ಯುತ್ತಮ ಕಾಲೇಜುಗಳು
1.ಮಿರಾಂಡಾ ಹೌಸ್, ದೆಹಲಿ
2.ಹಿಂದೂ ಕಾಲೇಜ್, ದೆಹಲಿ
3.ಪ್ರೆಸಿಡೆನ್ಸಿ ಕಾಲೇಜು, ಚೆನ್ನೈ
4.PSGR ಕೃಷ್ಣಮ್ಮಲ್ ಮಹಿಳಾ ಕಾಲೇಜು, ಕೊಯಮತ್ತೂರು
5.ಸೇಂಟ್ ಕ್ಸೇವಿಯರ್ ಕಾಲೇಜು, ಕೋಲ್ಕತ್ತಾ
6.ಆತ್ಮ ರಾಮ್ ಸನಾತನ ಧರ್ಮ ಕಾಲೇಜು, ನವದೆಹಲಿ
7.ಲೊಯೊಲಾ ಕಾಲೇಜು, ಚೆನ್ನೈ
8.ರಾಮಕೃಷ್ಣ ಮಿಷನ್ ವಿದ್ಯಾಮಂದಿರ, ಹೌರಾ
9.ಲೇಡಿ ಶ್ರೀ ರಾಮ್ ಕಾಲೇಜ್ ಫಾರ್ ವುಮೆನ್, ದೆಹಲಿ
10ಕಿರೋರಿ ಮಾಲ್ ಕಾಲೇಜ್, ದೆಹಲಿ
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…