Categories: ಮೈಸೂರು

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಿದ್ದ 59ನೇ ಎಂಜಿನಿಯರ್‌ಗಳ ದಿನಾಚರಣೆಯಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಪಾಲ್ಗೊಂಡು ಎಂಜಿನಿಯರ್‌ಗಳ ಸೇವೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು.

ಪುರಾಣ ಶ್ರೇಷ್ಠವಾದ ನಮ್ಮ ನಾಡು ದೇವರು, ಸನ್ಯಾಸಿಗಳು ಹಾಗೂ ಸಾಧಕರು ಮೆಟ್ಟಿದ ಪುಣ್ಯಭೂಮಿಯಾಗಿದೆ. ಇಂತಹ ಸಂಪ್ರದಾಯಬದ್ಧ ದೇಶದಲ್ಲಿ ವಿಜ್ಞಾನ ಹಾಗೂ ಎಂಜಿನಿಯರ್‌ಗಳ ಸೇವೆ ಅತ್ಯಂತ ವಿಶಿಷ್ಟವಾದದ್ದು ಎಂದು ಸಚಿವರು ಬಣ್ಣಿಸಿದರು.

ಪ್ರಾಚೀನ ಕಾಲದಲ್ಲಿ ನಿರ್ಮಾಣಗೊಂಡ ದೇವಾಲಯಗಳು ಹಾಗೂ ಅಣೆಕಟ್ಟುಗಳು ಇಂದಿಗೂ ಸುಭದ್ರವಾಗಿರುವುದು ನಮ್ಮ ಎಂಜಿನಿಯರ್‌ಗಳ ಕಾಯಕ ನಿಷ್ಠೆ ಹಾಗೂ ಕೌಶಲ್ಯಕ್ಕೆ ಸ್ಪಷ್ಟ ನಿದರ್ಶನವಾಗಿದೆ. ಯಾವುದೇ ಹುದ್ದೆ, ಅಧಿಕಾರ ಅಥವಾ ರೈತರ ಕಾಯಕದೊಂದಿಗೆ ಇದನ್ನು ಹೋಲಿಕೆ ಮಾಡಲು ಅಥವಾ ಅಲ್ಲಗಳೆಯಲು ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ಕಲ್ಪನೆಗೂ ನಿಲುಕದಷ್ಟು ಅಭಿವೃದ್ಧಿ ಕಾರ್ಯಗಳನ್ನು ಅಂದೇ ಮಾಡಿದ್ದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಸರ್ ಎಂ. ವಿಶ್ವೇಶ್ವರಯ್ಯನವರ ಕೊಡುಗೆಯನ್ನು ಸ್ಮರಿಸಿದ ಸಚಿವರು, ಇಂದಿನ ಅತ್ಯಾಧುನಿಕ ತಂತ್ರಜ್ಞಾನಕ್ಕೆ ಕಾರಣರಾದ ನಾಡಿನ ಸಮಸ್ತ ಎಂಜಿನಿಯರ್‌ಗಳಿಗೆ ಈ ಕಾರ್ಯಕ್ರಮವನ್ನು ಅರ್ಪಿಸುತ್ತಿರುವುದು ಹಾಗೂ ಈ ವೇದಿಕೆಯ ಮೂಲಕ ದೇಶದ ಎಂಜಿನಿಯರ್‌ಗಳನ್ನು ಗೌರವಿಸುತ್ತಿರುವುದು ತಮ್ಮ ಸುಕೃತ ಎಂದು ಭಾವುಕರಾದರು. ಅಲ್ಲದೆ, ನಾಡಿನ ಜನತೆಗೆ ಸರ್ ಎಂ.ವಿ. ಅವರ 165ನೇ ಜಯಂತಿಯ ಶುಭಾಶಯಗಳನ್ನು ಕೋರಿದರು.

ದೇಶವನ್ನು ತಂತ್ರಜ್ಞಾನದ ಮೂಲಕ ಮುನ್ನಡೆಸುವ ಹಾಗೂ ನಿರ್ಮಿಸುವ ಕೆಲಸವನ್ನು ನಮ್ಮ ಎಂಜಿನಿಯರ್‌ಗಳು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಿದರೆ, ಭಾರತವು ಮತ್ತಷ್ಟು ವೇಗವಾಗಿ ಅಭಿವೃದ್ಧಿ ಹೊಂದಲಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿದ್ದ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಕುರಿತು ಮಾತನಾಡಿದ ಸಚಿವರು, “ಶ್ರೀಗಳು ವಿಜ್ಞಾನ ಹಾಗೂ ತಂತ್ರಜ್ಞಾನದ ಬಗ್ಗೆ ಆಳವಾದ ಅಧ್ಯಯನ ನಡೆಸಿದ್ದಾರೆ. ಅವರಂತಹ ಜ್ಞಾನಿಗಳು ಈ ಕಾರ್ಯಕ್ರಮದ ಮೆರಗನ್ನು ಇಮ್ಮಡಿಗೊಳಿಸಿದ್ದಾರೆ. ಅವರ ಪ್ರೇರಣಾದಾಯಕ ನುಡಿಗಳು ಯುವ ಪೀಳಿಗೆಯ ಎಂಜಿನಿಯರ್‌ಗಳಿಗೆ ಸದಾ ಮಾದರಿಯಾಗಲಿವೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಸಚಿವ ಚಲುವರಾಯಸ್ವಾಮಿ ಅವರು, ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರೊಡಗೂಡಿ ಎಂಜಿನಿಯರ್‌ಗಳ ಸಂಸ್ಥೆಯ ಆವರಣದಲ್ಲಿರುವ ಸರ್ ಎಂ. ವಿಶ್ವೇಶ್ವರಯ್ಯ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.

ಇದೇ ವೇದಿಕೆಯಲ್ಲಿ ತಮ್ಮ ವೃತ್ತಿ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕ ಹಾಗೂ ಹಿರಿಯ ಎಂಜಿನಿಯರ್‌ಗಳನ್ನು ಸಚಿವರು ಹಾಗೂ ಗಣ್ಯರು ಸನ್ಮಾನಿಸಿ ಗೌರವಿಸಿದರು.

ಈ ಅರ್ಥಪೂರ್ಣ ಸಮಾರಂಭದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ವಿವಿಧ ಶಾಖಾಮಠಗಳ ಸ್ವಾಮೀಜಿಗಳು, ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಚಾಮರಾಜ ಕ್ಷೇತ್ರದ ಶಾಸಕರಾದ ಕೆ. ಹರೀಶ್ ಗೌಡ ಹಾಗೂ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

4 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

7 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

10 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

12 hours ago

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ನಾಪತ್ತೆ: ಅಧಿಕಾರಿಗಳಿಗಾಗಿ ಕಾಯುತ್ತಿರುವ ಸಾರ್ವಜನಿಕರು

ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…

13 hours ago

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

1 day ago