ದೇಶದ ಭವಿಷ್ಯದ ಬಗ್ಗೆ ಕಾಂಗ್ರೆಸ್ ಚಿಂತನೆ: ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ರಾಜ್ಯದ 28 ಲೋಕಸಭಾ ಕ್ಷೇತ್ರದಲ್ಲಿ 9 ಮಂದಿ ಯುವ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದ್ದು, ಯುವ ಸಮುದಾಯಕ್ಕೆ ಸೂಕ್ತಸ್ಥಾನ ನೀಡಿ ದೇಶದ ಭವಿಷ್ಯದ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಯಾವುದೇ ಭ್ರಷ್ಟಚಾರವಿಲ್ಲದೆ ಸುಭದ್ರ ಆಡಳಿತ ನೀಡುವುದರ ಜೊತೆಗೆ ಬಡವರ ಏಳಿಗೆಗಾಗಿ ಐದು ಗ್ಯಾರಂಟಿಗಳನ್ನು ಅನುಷ್ಟಾನಗೊಳಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 28 ಲೋಕ ಸಭಾ ಕ್ಷೇತ್ರಗಳನ್ನು ಕಾಂಗ್ರೆಸ್ ಪಕ್ಷ ಗೆಲ್ಲಲಿದೆ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ವಿಶ್ವಾಸ ಮಾತುಗಳನ್ನಾಡಿದರು.

ನಗರದ ಒಕ್ಕಲಿಗರ ಭವನದಲ್ಲಿ ಅಯೋಜನೆ ಮಾಡಲಾಗಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಾ ರಾಮಯ್ಯ ಜನಸೇವಕನಾಗಿದ್ದು, ಜನಸೇವೆಗಾಗಿ ಆಸ್ಪತ್ರೆ, ವಿದ್ಯಾಮಂದಿರಗಳ ನಿರ್ಮಾಣ ಸೇರಿದಂತೆ ವಿವಿಧ ರೀತಿಯ ಸೇವೆಗಳನ್ನ ಜನರಿಗೆ ಒದಗಿಸಿದ್ದಾರೆ. ರಕ್ಷಾ ರಾಮಯ್ಯ ದೂರ ದೃಷ್ಟಿಯುಳ್ಳ ಉತ್ತಮ ಪ್ರತಿಭಾನ್ವಿತ ನಾಯಕ. ಕ್ಷೇತ್ರದ ಅಭಿವೃದ್ಧಿಗಾಗಿ ಇವರಿಗೆ ಮತ ನೀಡುವಂತೆ ಮನವಿ ಮಾಡಿದರು.

ಚಿಕ್ಕಬಳ್ಳಾಪುರ ಲೋಕಸಭಾ ಅಭ್ಯರ್ಥಿ ರಕ್ಷಾರಾಮಯ್ಯ ಮಾತನಾಡಿ, ಲೋಕಸಭಾ ಚುನಾವಣೆಯು ಮಹತ್ವವಾದ ಚುನಾವಣೆಯಾಗಿದೆ. ಕೇಂದ್ರದಲ್ಲಿ ಆಡಳಿತ ನಡೆಸುಸುತ್ತಿರುವ ಬಿಜೆಪಿ ಸರಕಾರ ಈ ಲೋಕಸಭಾ ಚುನಾವಣೆಯಲ್ಲಿ ಬಹುಮತ ಗಳಿಸಿದರೆ ಸಂವಿಧಾನವನ್ನು ಬದಲಾವಣೆಯನ್ನ ಮಾಡಲಾಗುವುದು ಎಂದು ಬಿಜೆಪಿ ನಾಯಕ ಹೇಳಿದ್ದಾರೆ. ಹಿನ್ನಲೆಯಲ್ಲಿ ಬಿಜೆಪಿ ಸರಕಾರ ಸಂವಿಧಾನದ ಆಶಯಗಳಿಗೆ ಮಾರಕವಾಗಿದೆ ಎಂದರು.

ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಆಡಳಿತ ನಡೆಸಿದ  ಬಿಜೆಪಿ ಸರಕಾರ ಯಾವುದೇ ಜನಪರ ಯೋಜನೆಗಳನ್ನು ನೀಡಿಲ್ಲ ,ಕೋವಿಡ್ ಸಮಯದಲ್ಲಿ ಕೇಂದ್ರ ಸರಕಾರ ತೆಗೆದುಕೊಂಡ ರ್ತೀಮಾನಗಳು ಜನ ಸಾಮನ್ಯರಿಗೆ ಸಾಕಷ್ಟು ಸಮಸ್ಯೆ ಆಗಿದೆ. ಚಿಕ್ಕಬಳ್ಳಾಪುರದ ಬಿಜೆಪಿ ಅಭ್ಯರ್ಥಿಗೆ ಈಗಾಗಲೇ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಗೋಬ್ಯಾಕ್ ಅಭಿಯಾನವನ್ನು ಸ್ವಂತ ಬಿಜೆಪಿ ಪಕ್ಷದ ಕಾರ್ಯಕರ್ತರೆ ಕೈಗೊಂಡಿದ್ದಾರೆ. ಜತೆಗೆ ಕೋವಿಡ್ ಸಮಯದ  ಭ್ರಷ್ಟಾಚಾರವನ್ನು ಬಿಜೆಪಿ ಮುಖಂಡರೇ ಮಾತನಾಡುತ್ತಿದ್ದಾರೆ. ಆದ್ದರಿಂದ ಕಾರ್ಯಕರ್ಯರು  ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಯನ್ನು ಮುಂದಿಟ್ಟು ಮತ ಕೇಳಿ ಎಂದು  ಕಾರ್ಯಕರ್ತರಿಗೆ ಮನವಿ ಮಾಡಿದರು.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವೆಂಕಟರಮಣಯ್ಯ ಮಾತನಾಡಿ, ಹತ್ತು ವರ್ಷ ಆಡಳಿತ ನಡೆಸಿದ ಬಿಜೆಪಿ ಸರಕಾರದ ಕೊಡುಗೆ ಏನು? ಎಂದು ಪ್ರಶ್ನಿಸಿದರು. ಮೋದಿ ಸರಕಾರವು ಯಾವುದೇ ಜನಪರ ಕಾರ್ಯಕ್ರಮಗಳನ್ನು ತರದೇ ಸುಳ್ಳು ಭರವಸೆಗಳನ್ನು ನೀಡಿ ಮತದಾರರನ್ನು ವಂಚಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಈ ವೇಳೆ ವಿಧಾನ ಪರಿಷತ್ ಸದಸ್ಯ ರವಿ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಲಕ್ಷ್ಮೀಪತಿ, ಜಿಲ್ಲಾ ಎಸ್ಟಿ ಘಟಕದ ಅಧ್ಯಕ್ಷ ಮುನಿಕೃಷ್ಣ, ಸೇರಿದಂತೆ ಇತರೆ ಮುಖಂಡರು ಕಾರ್ಯಕರ್ತರು ಉಪಸ್ಥತರಿದ್ದರು.

Ramesh Babu

Journalist

Recent Posts

ಕುಸುಮ್ (ಸೌರ ವಿದ್ಯುತ್) ಯೋಜನೆ ಹೆಸರಲ್ಲಿ ದೇಶ ಕಾಯೋ ಯೋಧರ ಭೂಮಿಗೆ ಬೇಲಿ: ತಬ್ಬಿಬ್ಬಾದ ಯೋಧರ ಕುಟುಂಬ

ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…

8 hours ago

ಟೋಲ್ ರಸ್ತೆಯಲ್ಲಿ ಮಿತಿಮೀರಿದ ಅಪಘಾತ: ರಸ್ತೆ ಸುರಕ್ಷತೆ ಕಾಪಾಡದ ಸುಂಕವಸೂಲಿ(ಟೋಲ್) ಗುತ್ತಿಗೆದಾರರು: ಹೆದ್ದಾರಿಯಲ್ಲಿ ಕುಳಿತು ಟೋಲ್ ವಿರುದ್ಧ ಧಿಕ್ಕಾರ ಕೂಗಿದ ರೈತರು, ಸಂಘಟನೆಗಾರರು…

ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…

8 hours ago

ವಿಜಯಪುರದ ಬಸವ ಕಲ್ಯಾಣ ಮಠದಲ್ಲಿ 38ನೇ ವರ್ಷದ ಕಡ್ಲೆಕಾಯಿ ಪರಿಷೆ

ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…

9 hours ago

ಸಾಸಲು ಹೋಬಳಿಯಲ್ಲಿ ಮಿತಿಮೀರಿದ ಕೃಷಿ ಬೋರ್ ವೆಲ್ ಕೇಬಲ್ ಕಳ್ಳರ ಹಾವಳಿ: ಒಂದೇ ದಿನ ಹಲವು ಕಡೆ ಕೇಬಲ್ ಕಟ್

ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…

12 hours ago

ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ

ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…

14 hours ago

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ: ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಪಂ ವಿಫಲ: ಸಿಡಿದ್ದೆದ್ದ ದಲಿತರು

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…

17 hours ago